ಶಿವಮೊಗ್ಗ

ಅಕ್ರಮ ಮದ್ಯ ಮಾರಾಟ: ಪ್ರತಿಭಟನೆ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ಜೂ.13
ಶಾಂತಿನಗರ ಬಡಾವಣೆಯಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದು, ಅಬಕಾರಿ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ನವಕರ್ನಾಟಕ ನಿರ್ಮಾಣ ವೇದಿಕೆ ಕಾರ್ಯಕರ್ತರು ಗುರುವಾರ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಶಾಂತಿನಗರದಲ್ಲಿ ದಿನದ 24 ಗಂಟೆಯೂ ಅಕ್ರಮ ಮದ್ಯ ದೊರೆಯುತ್ತಿರುವುದರಿಂದ ಕುಡುಕರು ಕೆಲಸಕ್ಕೆ ಹೋಗದೆ ಪದೇಪದೇ ಕುಡಿದು, ಹೆಂಡತಿ-ಮಕ್ಕಳ ಜತೆ ಜಗಳವಾಡುತ್ತಾ ದುಡಿದ ಹಣವನ್ನು ಹಾಳು ಮಾಡುತ್ತಿದ್ದಾರೆ. ಹೆಣ್ಣುಮಕ್ಕಳು ದುಡಿದ ಹಣವನ್ನೂ ಗಂಡಸರ ಕುಡಿತಕ್ಕೆ ಸುರಿಯುತ್ತಿದ್ದಾರೆ. ಅನೈತಿಕ ಚಟುವಟಿಕೆ, ಕಳ್ಳತನ, ದರೋಡೆ ನಡೆಯುತ್ತಿವೆ. ಅಕ್ರಮ ಮದ್ಯ ಮಾರಾಟಗಾರರು ಶಾಲೆ, ದೇವಾಲಯಗಳ ಅಕ್ಕಪಕ್ಕದಲ್ಲಿಯೇ ಮಾರಾಟ ಮಾಡುತ್ತಿದ್ದಾರೆ. ಇದರಿಂದ ನಾಗರಿಕರಿಗೆ ಕಿರಿಕಿರಿಯಾಗಿದೆ ಎಂದು ವೇದಿಕೆ ರಾಜ್ಯಾಧ್ಯಕ್ಷ ಗೋ. ರಮೇಶ್ ಗೌಡ ಹೇಳಿದ್ದಾರೆ.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷೆ ಶಾಂತಮ್ಮ, ರೀಟಮ್ಮ, ಜಯಪ್ರಕಾಶ್, ನರಸಿಂಹ, ಮಂಜುನಾಥ, ಮಮ್ತಾಜ್, ಮಂಗಳಮ್ಮ, ಸ್ನೇಹ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.