ಪ್ರತ್ಯೇಕ ನಿಗಮ ರಚಿಸಲು ಮನವಿ
ಶಿವಮೊಗ್ಗ: ರಾಜ್ಯದ ಆದಿವಾಸಿ, ಅಲೆಮಾರಿ, ಸಣ್ಣಪುಟ್ಟ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರ ಪ್ರತ್ಯೇಕ ಅಭಿವೃದ್ಧಿ ನಿಗಮ ರಚಿಸಬೇಕು ಎಂದು ರಾಜ್ಯ ಆದಿವಾಸಿ ಬುಡಕಟ್ಟು ಹಕ್ಕಿಪಿಕ್ಕಿ ಪರಿವರ್ತನಾ ಸಂಘ ಮನವಿ ಮಾಡಿದೆ. ಅತ್ಯಂತ ಶೋಚನೀಯ ಸ್ಥಿತಿಯಲ್ಲಿ ಇರುವ ಸುಮಾರು 31 ಸಮುದಾಯಗಳನ್ನು ಹೊಂದಿರುವ ಆದಿವಾಸಿ ಬುಡಕಟ್ಟು ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ತುಂಬಾ ಹಿಂದುಳಿದಿದೆ. ಮೀಸಲಿರುವ ಸರ್ಕಾರದ ಅನುದಾನ ಸರಿಯಾಗಿ ಬಳಕೆಯಾಗುತ್ತಿಲ್ಲ. ಬಡತನ, ನಿರುದ್ಯೋಗದಿಂದ ತೀವ್ರ ಸಂಕಷ್ಟದಲ್ಲಿರುವ ಆದಿವಾಸಿ ಬುಡಕಟ್ಟು ಕಾಲೋನಿಗಳ ಅಭಿವೃದ್ಧಿಗೆ ಇರುವ ಮೂಲಭೂತ ಸೌಕರ್ಯಗಳನ್ನು ತ್ವರಿತವಾಗಿ ಅನುಷ್ಠಾನಕ್ಕೆ ತರಬೇಕು. ಕಾಮಗಾರಿಗಳ ಅನುದಾನ ದುರುಪಯೋಗವಾಗದಂತೆ ಜಾಗೃತಿ ವಹಿಸಬೇಕು. ಹಲವಾರು ವರ್ಷಗಳಿಂದ ಮನವಿ ಸಲ್ಲಿಸುತ್ತಿದ್ದರೂ ಇದುವರೆಗೂ ನಿಗಮ ರಚನೆಯಾಗಿಲ್ಲ. ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಸಚಿವ ಆಂಜನೇಯ ಅವರು ಶೀಘ್ರದಲ್ಲಿ ಪ್ರತ್ಯೇಕ ನಿಗಮ ರಚನೆ ಮಾಡಬೇಕು ಎಂದು ಸಂಘದ ರಾಜ್ಯಾಧ್ಯಕ್ಷೆ ಮಹಾದೇವಿ ಮನವಿ ಮಾಡಿದ್ದಾರೆ.
ಗಿಡ ನೆಡಲು ಮನವಿ
ನಗರ ತಲುಪುವ ಮೂರು ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿ ಗಿಡ ನೆಡಲು ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದೆ. ಶಿವಮೊಗ್ಗ- ಭದ್ರಾವತಿ, ಶಿವಮೊಗ್ಗ- ಆಯನೂರು, ಶಿವಮೊಗ್ಗ- ಸೋಗಾನೆ ರಸ್ತೆಗಳು ಅಭಿವೃದ್ಧಿಗೊಂಡಿವೆ. ಆದರೆ ಈ ರಸ್ತೆಗಳ ಇಕ್ಕೆಲಗಳಲ್ಲಿ ಮರಗಳು ಇಲ್ಲ. ಮರ ನಡೆಲು ಅವಕಾಶವಿದ್ದರೂ ಈ ಕಾರ್ಯ ಆಗಿಲ್ಲ. ಆದ್ದರಿಂದ ಸಂಬಂಧಪಟ್ಟ ಇಲಾಖೆಯವರಿಗೆ ಸೂಚಿಸಬೇಕು ಎಂದು ಒಕ್ಕೂಟ ಒತ್ತಾಯಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

