ಅಂತರ್ಜಾಲ ದುರುಪಯೋಗ ಸಲ್ಲ
ಶಿಕಾರಿಪುರ: ಖಾಸಗಿ ವಿದ್ಯಾಸಂಸ್ಥೆಗಳಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ದಾಖಲಿಸಿಕೊಂಡು ಶಿಕ್ಷಣ ನೀಡುತ್ತಿದ್ದು, ಕುಮದ್ವತಿ ವಿದ್ಯಾಸಂಸ್ಥೆಯಲ್ಲಿ ಫಲಿತಾಂಶವನ್ನು ಪರಿಗಣಿಸದೆ ಸರಾಸರಿ ವಿದ್ಯಾರ್ಥಿಗಳ ಮೂಲಕ ಉತ್ತಮ ಫಲಿತಾಂಶವನ್ನು ನೀಡಲಾಗುತ್ತಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಹಾಗೂ ಸಂಸದ ರಾಘವೇಂದ್ರ ತಿಳಿಸಿದರು.
ಶುಕ್ರವಾರ ಪಟ್ಟಣದ ಕುಮದ್ವತಿ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ನೂತನ ವಿದ್ಯಾರ್ಥಿಗಳಿಗೆ ನಡೆದ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಭವಿಷ್ಯದ ಕನಸು: ಪ್ರತಿಯೊಬ್ಬ ವಿದ್ಯಾರ್ಥಿ ತನ್ನ ವಿದ್ಯಾರ್ಥಿ ಜೀವನದಲ್ಲಿ ಭವಿಷ್ಯದ ಬಗ್ಗೆ ಉತ್ತಮ ಕನಸುಗಳನ್ನು ಹೊಂದಬೇಕು. ಕನಸುಗಳನ್ನು ನನಸಾಗಿಸುವ ದಿಸೆಯಲ್ಲಿ ನಿತ್ಯ ಪಾಠ ಪ್ರವಚನದ ಬಗ್ಗೆ ತಲ್ಲೀನರಾಗಿ ಉತ್ತಮ ಫಲಿತಾಂಶದ ಮೂಲಕ ಸುಂದರ ಕನಸುಗಳನ್ನು ನನಸಾಗಿಸಿಕೊಳ್ಳಬೇಕು ಎಂದರು.
ಮುಖ್ಯ ಅತಿಥಿ ಕುವೆಂಪು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ. ಪೂರ್ಣಾನಂದ ಮಾತನಾಡಿ, ಶಿಕ್ಷಣದಲ್ಲಿ ಮಾಧ್ಯಮದ ಪಾತ್ರ ಇತ್ತೀಚಿನ ದಿನದಲ್ಲಿ ಪ್ರಮುಖವಾಗಿದ್ದು, ಮಾಹಿತಿಗಾಗಿ ಕೇವಲ ಪುಸ್ತಕವನ್ನು ಮಾತ್ರ ಅವಲಂಭಿಸಿದ್ದ ಪದ್ಧತಿ ಬದಲಾಗಿ ಇದೀಗ ಅಂತರ್ಜಾಲದ ಮೂಲಕ ವಿದ್ಯಾರ್ಥಿಗಳು ಕ್ಷಣದಲ್ಲಿ ಎಲ್ಲಾ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದರು.
ಪ್ರತಿಭೆ ಪ್ರೋತ್ಸಾಹಿಸಿ: ಕಲಿಕೆ ಸರಳವಾಗಿದ್ದು ಅಂತರ್ಜಾಲವನ್ನು ದುರುಪಯೋಗ ಮಾಡಿಕೊಳ್ಳಬಾರದು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ವಿಶೇಷ ಪ್ರತಿಭೆಯಿದ್ದು ಅವುಗಳನ್ನು ಗುರುತಿಸಿ ಪ್ರೋತ್ಸಾಹಿಸಿ ಶಿಕ್ಷಣವನ್ನು ನೀಡುವ ಕಾರ್ಯ ಶಿಕ್ಷಕರದ್ದಾಗಿದೆ ಎಂದು ಅವರು ತಿಳಿಸಿದರು.
ಸಂಸ್ಥೆಯ ನಿರ್ದೇಶಕಿ ತೇಜಸ್ವಿನಿ ರಾಘವೇಂದ್ರ, ಕುಮದ್ವತಿ ವಸತಿ ಶಾಲೆಯ ಅಕಾಡೆಮಿಕ್ ಡೀನ್ ಕೆ.ಎಸ್.ಎನ್. ಭಟ್, ಪ್ರಾಚಾರ್ಯ ಡಾ.ಎಂ ವೀರೇಂದ್ರ, ಡಾ.ಜಯಶ್ರೀ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

