ಶಿವಮೊಗ್ಗ

ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ಐಎಎಸ್ ಅಧಿಕಾರಿ ನೇಮಿಸಿ

Published On :

ಶಿವಮೊಗ್ಗ: ಭದ್ರಾವತಿಯ ಎಂಪಿಎಂ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ಐಎಎಸ್ ಹಾಗೂ ಜನರಲ್ ಮ್ಯಾನೇಜರ್ ಹುದ್ದೆಗೆ ಕೆಎಎಸ್ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜ್ಯ ರೈತಸಂಘದ ಕಾರ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ಒತ್ತಾಯಿಸಿದ್ದಾರೆ.
ಕಾರ್ಖಾನೆಗೆ ಆರಗ ಜ್ಞಾನೇಂದ್ರ ಅವರು ಅಧ್ಯಕ್ಷರಾಗುವ ಮೊದಲು 32 ಕೋಟಿ ನಷ್ಟದಲ್ಲಿತ್ತು. ಇವರು ಅಧ್ಯಕ್ಷರಾದ ನಂತರ ಐಪಿಎಸ್ ಅಧಿಕಾರಿಯನ್ನು ನೇಮಕ ಮಾಡಿಕೊಂಡು ಅಧಿಕಾರ ನಡೆಸಿ, ಕಾರ್ಖಾನೆಯನ್ನು 300 ಕೋಟಿ ನಷ್ಷಕ್ಕೆ ತಂದಿದ್ದರು ಎಂದು ಆರೋಪಿಸಿದರು.
ಇವರ ಭ್ರಷ್ಟಚಾರದ ಅಧ್ಯಕ್ಷತೆಯ ವಿರುದ್ಧ ರೈತರು ಮತ್ತು ಕಾರ್ಮಿಕರು ಚಳುವಳಿ ಮಾಡುವುದನ್ನು ನಿಯಂತ್ರಿಸಲು ಐಪಿಎಸ್ ಅಧಿಕಾರಿಯನ್ನು ನೇಮಕ ಮಾಡಿಕೊಂಡಿದ್ದರು ಎಂದ ಆರೋಪಿಸಿದರು.
ಜ್ಞಾನೇಂದ್ರ ಅವರ ಅಧ್ಯಕ್ಷತೆಯ ಅವಧಿಯಲ್ಲಿ ನಡೆದ ವ್ಯವಹಾರದ ಬಗ್ಗೆ ತನಿಖೆ ಆಗಬೇಕು, ಹಿಂದಿನಂತೆ ಜನರಲ್ ಮ್ಯಾನೇಜರ್ ಹುದ್ದೆಗೆ ಕೆಎಎಸ್ ಅಧಿಕಾರಿಯನ್ನು ನೇಮಕ ಮಾಡಬೇಕು, ಕಾರ್ಖಾನೆಯ ಕಾರ್ಮಿಕ ಸಂಘದ ಕಾರ್ಯದರ್ಶಿ ನೌಕರ ಶಿವಮೂರ್ತಿ ಅವರ ಅಮಾನತ್ತು ರದ್ದು ಮಾಡಿ ಕೂಡಲೇ ಕೆಲಸಕ್ಕೆ ನೇಮಿಸಿಕೊಳ್ಳಬೇಕು ಎಂದು ಬಸವರಾಜಪ್ಪ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.