ಶಿವಮೊಗ್ಗ

ತರಬೇತಿ ಅರ್ಜಿ ಆಹ್ವಾನ

Published On :

ಶಿವಮೊಗ್ಗ: ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ- ಆಪರೇಟಿವ್ ಮ್ಯಾನೇಜ್‌ಮೆಂಟ್ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಡಿಪ್ಲೊಮಾ ಇನ್ ಕೋ- ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ ಸಂಸ್ಥೆಗಳನ್ನು ನಡೆಸುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಸಹಕಾರ ಸಂಘ, ಇಲಾಖೆಗಳಲ್ಲಿ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಹಾಗೂ ಖಾಸಗಿ ಸಂಸ್ಥೆ ನೌಕರರು ಮತ್ತು ಎಸ್‌ಸಿಎಸ್‌ಟಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಸಹಕಾರ ಸಂಘಗಳಲ್ಲಿ, ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುವ ನೌಕರರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೆ ನಿಯಮಿತವಾಗಿ ಅವಕಾಶವನ್ನು ಕಲ್ಪಿಸಲಾಗಿದೆ. ವಯೋವುತಿ 18ರಿಂದ 30ವರ್ಷದೊಳಗಿನವರು ಅರ್ಹರಾಗಿರುತ್ತಾರೆ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಶೇ.18ರಷ್ಟು ಸ್ಥಾನಗಳನ್ನು ತರಬೇತಿಗಾಗಿ ಮೀಸಲಿರಿಸಲಾಗಿದೆ. ಪ್ರತಿಯೊಬ್ಬ ಅಭ್ಯರ್ಥಿ ಕನಿಷ್ಠ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 200 ವೇತನ ನೀಡಲಾಗುವುದು.
ನಿರುದ್ಯೋಗಿ ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಪಡೆಯಲಾಗುವುದು. ಆದರಿಂದ ಈ ವರ್ಗದ ಅಭ್ಯರ್ಥಿಗಳು, ಸ್ಥಳೀಯ ಸಹಕಾರ ಸಂಘಗಳ ಉಪನಿಬಂಧಕರ ಮೂಲಕ ಅಥವಾ ನಿರ್ದೇಶಕರು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗಳ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಅಭ್ಯರ್ಥಿಗಳಿಗೆ ಮಾಸಿಕ 300 ವೇತನ ನೀಡಲಾಗುದು.
 ಪ್ರತಿಯೊಬ್ಬ ಅಭ್ಯರ್ಥಿ ನಿಗದಿ ಮಾಡಿದ ಅರ್ಜಿ ಶುಲ್ಕವನ್ನು ಭರಿಸಿ ಜುಲೈ 3ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಸಂಸ್ಥೆಯ ಪ್ರಾಂಶುಪಾಲರು ತಿಳಿಸಿದ್ದಾರೆ. ವಿವರಗಳಿಗಾಗಿ-08182-248873.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.