ಶಿವಮೊಗ್ಗ

'ರಕ್ತದಾನ ಕುರಿತು ಜನಜಾಗೃತಿ ಅಗತ್ಯ'

Published On :

ಕ.ಪ್ರ.ವಾರ್ತೆ, ಶಿವಮೊಗ್ಗ,  ಜೂ.16
ಪ್ರಸ್ತುತ ದಿನಗಳಲ್ಲಿ ರಕ್ತದಾನದಂತಹ ಮಹತ್ಕಾರ್ಯದಲ್ಲಿ ಯುವ ಸಮೂಹ ತೊಡಗಿಸಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು ಜಿಪಂ ಉಪಾಧ್ಯಕ್ಷೆ ಹೇಮಾ ಪಾವನಿ ತಿಳಿಸಿದರು.
ಭದ್ರಾವತಿ ತಾಲೂಕಿನ ಗುಡುಮಗಟ್ಟೆಯಲ್ಲಿ ಆಧಾರ ರಕ್ತದಾನಿಗಳ ಸೇವಾ ಟ್ರಸ್ಟ್ , ಕ್ರಾಂತಿಕಾರಿ ಭಗತ್ ಸಿಂಗ್ ಯುವ ವೇದಿಕೆ  ಹಾಗೂ ಜಿಲ್ಲಾ ಮೆಗ್ಗಾನ್ ರಕ್ತನಿಧಿ ಸಂಯುಕ್ತ ಆಶ್ರಯದಲ್ಲಿ ನಡೆದ ರಕ್ತ ಗುಂಪು ತಪಾಸಣೆ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿ, ಗ್ರಾಮೀಣ ಭಾಗಗಳಲ್ಲಿ ರಕ್ತದಾನ ಶಿಬಿರ ಏರ್ಪಡಿಸಿ ಜನಜಾಗೃತಿ ಮೂಡಿಸುತ್ತಿರುವ ಇಂತಹ ಸಂಘ ಸಂಸ್ಥೆಗಳೊಂದಿಗೆ ಕೈ ಜೋಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ರಕ್ತದಾನ ಶಿಬಿರ: ಕರ್ನಾಟಕ ರಾಜ್ಯ ಅಡಕೆ ಮಾರಾಟ ಮಹಾ ಮಂಡಳಿ ನಿರ್ದೇಶಕ ಎಂ. ಕುಬೇಂದ್ರಪ್ಪ ಮಾತನಾಡಿ, ಸಂಘಸಂಸ್ಥೆಗಳು ಹಳ್ಳಿ-ಹಳ್ಳಿಗಳಲ್ಲಿ ರಕ್ತದಾನದ ಮಹತ್ವ ಹಾಗೂ ರಕ್ತದಾನ ಶಿಬಿರದಂತಹ ಕಾರ್ಯಕ್ರಮ  ಹಮ್ಮಿಕೊಳ್ಳುವದರೊಂದಿಗೆ ರಕ್ತದ ಅವಶ್ಯಕತೆಯಿರುವವರಿಗೆ ರಕ್ತನೀಡಿ ಅವರಿಗೆ ಪುನರ್ಜೀವನ ನೀಡುವಲ್ಲಿ ಯಶಸ್ವಿಯಾಗುತ್ತಿವೆ ಎಂದರು.
ಆಧಾರ ರಕ್ತದಾನಿಗಳ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರಶಾಂತ್ ಶಾಸ್ತ್ರಿ ಮಾತನಾಡಿ, ಕ್ರಾಂತಿಕಾರಿ ಭಗತ್ ಸಿಂಗ್ ಯುವಕ ಸಂಘದ ಯುವಕರು ಇಂದು ಒಂದು ಅದ್ಭುತ ಕ್ರಾಂತಿಯನ್ನೇ ಆರಂಭಿಸಿದ್ದಾರೆ. ಅವರು ರಕ್ತದಾನ ಮಾಡುವ ಮುಖಾಂತರ ಇತರರಿಗೂ ಪ್ರೇರೇಪಣೆ ಮಾಡುವ ನಿಟ್ಟಿನಲ್ಲಿ ಗ್ರಾಮಕ್ಕೆ ಮಾದರಿಯಾಗಿದ್ದಾರೆ ಎಂದರು.
ಪ್ರೀತಿ, ಅಂಜಲಿ ಪ್ರಾರ್ಥಿಸಿದರು. ಎನ್. ರವಿ ಸ್ವಾಗತಿಸಿದರು. ಮಂಜುನಾಥ ನಿರೂಪಿಸಿದರು. ಮಹಿಳೆಯರು ಸೇರಿದಂತೆ ಸುಮಾರು 59 ಮಂದಿ ರಕ್ತದಾನ ಮಾಡಿದರು ಹಾಗೂ 180 ಜನರಿಗೆ ರಕ್ತದ ಗುಂಪು ತಪಾಸಣೆ ಮಾಡಲಾಯಿತು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.