ಶಿವಮೊಗ್ಗ

ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿನಿಗೆ ಒಂದು ವರ್ಷ ಉಚಿತ ಹಾಲು

Published On :

ಶಿವಮೊಗ್ಗ: ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಪ್ರೇರಣಾ ಕುಟುಂಬಕ್ಕೆ ಶಿವಮೊಗ್ಗ ಸಹಕಾರ ಹಾಲು ಒಕ್ಕೂಟ ಒಂದು ವರ್ಷದ ವರೆಗೆ ಒಂದು ಲೀಟರ್‌ನ್ನು ಉಚಿತವಾಗಿ ನೀಡಲಿದೆ.
 ಈ ಸಂಬಂಧ ಆದಿಚುಂಚನಗಿರಿ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಒಕ್ಕೂಟದ ನಿರ್ದೇಶಕ ಗೊಂದಿ ಜಯರಾಂ ಪ್ರೇರಣಾ ಕುಟುಂಬಕ್ಕೆ ಸಾಂಕೇತಿಕವಾಗಿ ಒಂದು ಲೀಟರ್ ಹಾಲನ್ನು ನೀಡಿದರು.
ನಂತರ ಮಾತನಾಡಿದ ಅವರು, ಪ್ರೇರಣಾ ಅವರು ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚು ಅಂಕಗಳಿಸುವುದರೊಂದಿಗೆ ರಾಜ್ಯ ಮತ್ತು ಜಿಲ್ಲೆಗೆ ಒಳ್ಳೆಯ ಹೆಸರನ್ನು ತಂದಿದ್ದಾರೆ. ಇವರ ಈ ಪ್ರತಿಭೆಯನ್ನು ಗುರುತಿಸಿ ಒಕ್ಕೂಟ ನಂದಿನಿ ಹಾಲನ್ನು ಉಚಿತವಾಗಿ ನೀಡಲಿದೆ ಎಂದರು.
 ಇದೇ ರೀತಿ ರಾಜ್ಯಾದ್ಯಂತ 24 ವಿದ್ಯಾರ್ಥಿಗಳಿಗೆ ಉಚಿತ ಹಾಲನ್ನು ಕರ್ನಾಟಕ ಹಾಲು ಮಹಾಮಂಡಳಿ ಉಚಿತವಾಗಿ ನೀಡುತ್ತಿದೆ. ರೈತರ ಜೀವನಾಡಿಯಾಗಿರುವ ಒಕ್ಕೂಟ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಹಾಲನ್ನು ಕೊಡುತ್ತಿರುವುದರಿಂದ ಎಲ್ಲಾ ಪೋಷಕರು ನಂದಿನಿ ಹಾಲನ್ನೇ ಬಳಸಿ ಎಂದು ಮನವಿ ಮಾಡಿದರು.
 ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲ ನಂದಾರಾವ್, ಒಕ್ಕೂಟದ ವ್ಯವಸ್ಥಾಪಕ ಡಾ. ಕೆ.ಪಿ. ಶಿವಶಂಕರ, ಮಾರುಕಟ್ಟೆ ವ್ಯವಸ್ಥಾಪಕ ಡಾ.ಕೆ.ಎಂ. ಲೋಹಿತೇಶ್ವರ್, ರುದ್ರಯ್ಯ ಎಸ್.ಜಿ. ಶೇಖರ್, ಪ್ರೇರಣಾ ತಂದೆ ರವೀಂದ್ರನಾಥ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.