ಅಕ್ರಮ ಮದ್ಯ ಮಾರಾಟ: ಪ್ರಕರಣ ದಾಖಲು
ಭದ್ರವತಿ: ಜನ್ನಾಪುರ ವಾಸಿ ಲಕ್ಷ್ಮಣರಾವ್ ಸಿದ್ದಾಪುರ ಚಾನಲ್ ಪಕ್ಕದ ಪೆಟ್ಟಿಗೆ ಅಂಗಡಿಯಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ನ್ಯೂಟೌನ್ ಪೊಲೀಸರು ಇದನ್ನು ಪತ್ತೆಹಚ್ಚಿ ಆರೋಪಿಯಿಂದ ರು. 1,800 ಮೌಲ್ಯದ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದುದನ್ನು ಪೊಲೀಸರು ಪತ್ತೆಹಚ್ಚಿ ಆರೋಪಿಯಿಂದ 1,736 ಮೌಲ್ಯದ ಮದ್ಯದ ಪೌಚ್ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಗೃಹಿಣಿ ನಾಪತ್ತೆ
ಜೂ.15ರಂದು ಕೂಲಿ ಕೆಲಸಕ್ಕೆ ಹೋಗಿ ಬರುತ್ತೇನೆಂದು ಹೇಳಿ ಮನೆಯಿಂದ ಹೋದ ಪತ್ನಿ ನಿರ್ಮಲ ಇದುವರೆಗೆ ಮನೆಗೆ ಹಿಂದಿರುಗಿ ಬಂದಿಲ್ಲ ಎಂದು ಅರಹಳ್ಳಿಯಲ್ಲಿ ವಾಸವಿರುವ ಪತಿ ಶಿವರಾಜ್ ಭದ್ರಾವತಿ ಗ್ರಾಮಾಂತರ ಪೋಲಿಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದೆ.
ಆಕಸ್ಮಿಕ ಸಾವು
ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಬೈಂದೂರಿನ ಮೈಯ್ಯಾಡಿಯ ವಿಶ್ವನಾಥ್ (48) ಕೊಬ್ಬರಿ ಎಣ್ಣೆ ವ್ಯಾಪಾರಕ್ಕೆಂದು ಪಟ್ಟಣಕ್ಕೆ ಬಂದಿದ್ದು, ಸಕ್ಕರೆ ಕಾಯಿಲೆ ಮತ್ತು ಕಡಮೆ ರಕ್ತದೊತ್ತಡದಿಂದ ಹುತ್ತಾ ಬಸ್ ನಿಲ್ದಾಣದ ಬಳಿ ಮೃತಪಟ್ಟಿದ್ದು ನ್ಯೂಟೌನ್ ಪೊಲೀಸರು ಆಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜೂಜಾಟ: 19 ಮಂದಿ ಬಂಧನ
ಶಿವಮೊಗ್ಗ: ಕಳೆದ ಕೆಲ ದಿನಗಳ ಹಿಂದೆಯಷ್ಟೆ ಎರಡು ಇಸ್ಟೀಟ್ ಕ್ಲಬ್ಗಳ ಮೇಲೆ ದಾಳಿ ಮಾಡಿದ ದೊಡ್ಡಪೇಟೆ ಪೊಲೀಸರು ಭಾನುವಾರ ತಡರಾತ್ರಿ ಮತ್ತೊಂದು ಇಸ್ಪೀಟ್ ಕ್ಲಬ್ ಮೇಲೆ ದಾಳಿ ಮಾಡಿ 19ಜನರನ್ನು ಬಂಧಿಸಿದ್ದಾರೆ. ಗಾರ್ಡನ್ ಏರಿಯಾದ ಸಹಕಾರ ಸಂಘದ ಮನೋರಂಜನಾ ಕೇಂದ್ರದ ಹೆಸರಿನಲ್ಲಿ ನಡೆಯುತ್ತಿದ್ದ ಕ್ಲಬ್ ಮೇಲೆ ದಾಳಿ ನಡೆದಿದ್ದು, ಇಸ್ಪೀಟ್ ಆಟದಲ್ಲಿ ತೊಡಗಿದ್ದ 19 ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ 18,420 ನಗದು, 17 ಮೊಬೈಲ್, 10 ಬೈಕ್ ಮತ್ತು 1 ಕಾರು ವಶಪಡಿಸಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

