'ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ'
ಕ.ಪ್ರ.ವಾರ್ತೆ , ಸಾಗರ , ಜೂ.18
ಇತ್ತೀಚಿನ ವರ್ಷಗಳಲ್ಲಿ ಯಕ್ಷಗಾನ ಕಲೆಗೆ ಸಿಗುತ್ತಿರುವ ಪ್ರೋತ್ಸಾಹ, ಪ್ರಾತಿನಿಧ್ಯ ಕಡಿಮೆಯಾಗುತ್ತಿದೆ ಎಂದು ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಸದಸ್ಯ ಅಶೋಕ ಭಟ್ ಹೇಳಿದರು.
ಇಲ್ಲಿನ ಯಕ್ಷಪ್ರಪಂಚ ಸಂಸ್ಥೆ ಪಟ್ಟಣದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿದ್ದ ಯಕ್ಷೋತ್ಸವ ಸಮಾರೋಪದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಕೇರಳದಲ್ಲಿ ಕಥಕ್ಕಳಿ ನೃತ್ಯಕ್ಕೆ ಸರ್ಕಾರದಿಂದ ಹಿಡಿದು, ಸಾರ್ವಜನಿಕರು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ. ಅಂತಹ ಕೆಲಸ ಯಕ್ಷಗಾನ ಕ್ಷೇತ್ರದಲ್ಲಿಯೂ ಆಗಬೇಕು ಎಂದು ಅಭಿಪ್ರಾಯಪಟ್ಟರು.
ಸಹಕಾರ ಅಗತ್ಯ: ಯಕ್ಷಗಾನದ ಮೂಲಸ್ವರೂಪವನ್ನು ಉಳಿಸಿಕೊಂಡು ಕಲೆಯನ್ನು ಇನ್ನಷ್ಟು ಬೆಳೆಸುವ ನಿಟ್ಟಿನಲ್ಲಿ ಗಂಭೀರ ಚಿಂತನೆ ಅಗತ್ಯ. ಈ ನಿಟ್ಟಿನಲ್ಲಿ ಯಕ್ಷಗಾನ ಅಕಾಡೆಮಿ ಅನೇಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇಂತಹ ಕಾರ್ಯಕ್ರಮಗಳಿಗೆ ಜನರ ಸಹಕಾರ ಅಗತ್ಯ ಎಂದು ಹೇಳಿದರು.
ಮತ್ತೊಬ್ಬ ಸನ್ಮಾನಿತ ಕೇರಳ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಜಯರಾಮ ಮಂಜಿತ್ತಾಯ್ ಮಾತನಾಡಿ, ತೆಂಕುತಿಟ್ಟಿನ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಯಡನೀರು ಮಠದ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಇದರ ಜೊತೆಗೆ ಗಡಿಭಾಗದಲ್ಲಿ ಕನ್ನಡಶಾಲೆಗಳನ್ನು ಅಭಿವೃದ್ಧಿಪಡಿಸುವ ಕೆಲಸ ಸಹ ಯಡನೀರು ಮಠದಿಂದ ಮಾಡಲಾಗುತ್ತಿದೆ. ಕೇರಳ ಸರ್ಕಾರ ಯಕ್ಷಗಾನ ಮತ್ತು ತುಳುಭಾಷೆಗೆ ಅಕಾಡೆಮಿ ರಚಿಸಿ ಕರ್ನಾಟಕದ ಕಲಾಪರಂಪರೆಯನ್ನು ಉಳಿಸುವಲ್ಲಿ ಸಹಕರಿಸುತ್ತಿದೆ ಎಂದು ತಿಳಿಸಿದರು.
ಶಂಕರಮಠದ ಅಶ್ವಿನಿಕುಮಾರ್, ಕೆ.ಎನ್. ಶರ್ಮ, ಎಂ.ಎಲ್. ಭಟ್, ಮಂಜುನಾಥ ಗೊರಮನೆ, ಲಕ್ಷ್ಮೀನಾರಾಯಣ ಕೆ.ಎಸ್. ಹಾಜರಿದ್ದರು. ನಂತರ ಯಡನೀರು ಗೋಪಾಲಕೃಷ್ಣ ಯಕ್ಷಗಾನ ಕಲಾಮಂಡಳಿ ಅವರಿಂದ ರಾಮದರ್ಶನ ಹಾಗೂ ಗರುಡ ಗರ್ವಭಂಗ ತೆಂಕುತಿಟ್ಟಿನ ಯಕ್ಷಗಾನ ಪ್ರದರ್ಶನಗೊಂಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

