ಶಿವಮೊಗ್ಗ

ಇಂದು ಕ್ಯಾನ್ಸರ್ ತಪಾಸಣಾ ಶಿಬಿರ

Published On :

ಭದ್ರಾವತಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಂಜಪ್ಪ ಲೈಫ್ ಕೇರ್ ಮತ್ತು ಮಲ್ನಾಡ್ ಆಸ್ಪತ್ರೆ, ಶಿವಮೊಗ್ಗ ಇವುಗಳ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಜೂ.19ರಂದು ಬಿಪಿಎಲ್ ಕಾರ್ಡುದಾರರಿಗೆ ವಾಜಪೇಯಿ ಆರೋಗ್ಯ ಶ್ರೀ ಕಾರ್ಯಕ್ರಮದಡಿಯಲ್ಲಿ ಹೃದಯರೋಗ, ನರರೋಗ ಮತ್ತು ಕ್ಯಾನ್ಸರ್ ಕಾಯಿಲೆ ಕುರಿತು ಉಚಿತ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿಗಳ ಪತ್ರಿಕಾ ಪ್ರಕಟಣೆಯಲ್‌ಲ್ಲ  ತಿಳಿಸಲಾಗಿದೆ.

ಎಂ.ವಿ.ಎಸ್. ಸ್ವಾಮಿಗೆ ಪ್ರಶಸ್ತಿ
ಭದ್ರಾವತಿ: ಪಟ್ಟಣದ ಹಿರಿಯೂರು ಗ್ರಾಮದ ಎಸ್.ಬಿ.ಎಂ.ಎಂ.ಆರ್ ಪ್ರೌಢ ಶಾಲೆಯಲ್ಲಿ ವಿಜ್ಞಾನ ಬೋಧಕರಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕ ಎಂ.ವಿ.ಎಸ್. ಸ್ವಾಮಿ (ಹರೋನಹಳ್ಳಿ ಸ್ವಾಮಿ) ಅವರು ಜವಾಹರಲಾಲ್ ನೆಹರೂ ಉನ್ನತ ವೈಜ್ಞಾನಿಕ ಅಧ್ಯಯನ ಕೇಂದ್ರದ ಸಿ.ಎನ್.ಆರ್. ರಾವ್ ಪ್ರತಿಷ್ಠಾದಿಂದ ನೀಡುವ 2012ನೇ ಸಾಲಿನ ಅತ್ಯುತ್ತಮ ವಿಜ್ಞಾನ ಶಿಕ್ಷಕ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಇವರೊಂದಿಗೆ ಜಮ್ಮು ಮತ್ತು ಕಾಶ್ಮೀರದ ರಜೌರಿಯ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ನವನೀತ್ ಗುಪ್ತಾ ಕೂಡಾ ಈ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ವಿಜ್ಞಾನ ಬೋಧನಾ ಕ್ರಮದಲ್ಲಿ ವಿನೂತನ ಉಪಕ್ರಮ ಬಳಸಿಕೊಂಡು ಶೈಕ್ಷಣಿಕ ಕ್ಷೇತ್ರಕ್ಕೆ ಮುಡುಪಾಗಿಸಿಕೊಂಡು ತನ್ಮೂಲಕ ಪ್ರಸ್ತುತ ಶಿಕ್ಷಣ ಪದ್ಧತಿಗೆ ಮೌಲ್ಯವನ್ನು ನೀಡುವ ಶಿಕ್ಷಕರನ್ನು ಬೆಳಕಿಗೆ ತರುವುದಕ್ಕಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದ್ದು, ಜೂ.28ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಲ್ಲಿರುವ ಕೇಂದ್ರದ ಸಿ.ಎನ್.ಆರ್. ರಾವ್ ವಿಜ್ಞಾನ ಸಭಾಂಗಣದಲ್ಲಿ ಹರೋನಹಳ್ಳಿ ಸ್ವಾಮಿ ಪ್ರಶಸ್ತಿಯನ್ನು ಸ್ವೀಕಾರ ಮಾಡುವರು.

ಸಾಂದರ್ಭಿಕ ರಜೆ
ಶಿವಮೊಗ್ಗ: ಜಿಲ್ಲಾ ಸರ್ಕಾರಿ ನೌಕರರ ಭವನದ ಉದ್ಘಾಟನೆ ಮತ್ತು ಜಿಲ್ಲಾ ಸರ್ಕಾರಿ ನೌಕರರ ಸಮ್ಮೇಳನ ಸಮಾವೇಶ ಹಾಗೂ ಪ್ರಜಾಸ್ನೇಹಿ ಆಡಳಿತ ಕುರಿತ ವಿಚಾರ ಸಂಕಿರಣ ನಡೆಯಲಿದೆ. ಸಮಾರಂಭದಲ್ಲಿ ಭಾಗವಹಿಸುವ ಜಿಲ್ಲೆಯ ಸರ್ಕಾರಿ ನೌಕರರಿಗೆ ಜೂನ್ 20ರಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಡಾ ಗೀತಾ ಎಲ್. ತಿಳಿಸಿದ್ದಾರೆ.

ಮುತ್ತು ಕೃಷ್ಣನ್ ಅವರಿಂದ ಶಿಬಿರ
ಭದ್ರಾವತಿ: ತಮಿಳು ಸಂಘದ ಆಶ್ರಯದಲ್ಲಿ ಪಾರಂಪರಿಕ ಸಿದ್ದ ವೈದ್ಯರಾದ ದಿಂಡಿಗಲ್ಲಿನ ಮುತ್ತುಕೃಷ್ಣನ್ ಅವರಿಂದ ಜೂ.21 (ಶುಕ್ರವಾರ) ಪಟ್ಟಣದ ತರೀಕೆರೆ ರಸ್ತೆಯಲ್ಲಿರುವ ವಳ್ಳುವರ್ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 9.30ರಿಂದ ಮಧ್ಯಾಹ್ನ 3 ಗಂಟೆ ವರೆಗೆ ಸಿದ್ದ ಕಣ್ಣಿನ ಹನಿ ಹಾಕುವ ಶಿಬಿರವನ್ನು ಏರ್ಪಡಿಸಿದೆ. ಇದರಿಂದ ಕಣ್ಣಿನಲ್ಲಿ ನೀರು ಬರುವುದು, ಕಣ್ಣುರಿ, ಕಣ್ಣು ಕೆಂಪಾಗುವುದು, ಕಣ್ಣಿನಲ್ಲಿ ಪೊರೆ ಬರುವ ಹಂತದಲ್ಲಿರುವವರಿಗೆ ಹಾಗೂ ದೂರದೃಷ್ಟಿ ದೋಷ ಮತ್ತು ಸಮೀಪ ದೃಷ್ಟಿ ದೋಷವಿರುವವರಿಗೆ ಹೆಚ್ಚಿನ ಅನುಕೂಲವಾಗುವುದು ಎಂದು ತಮಿಳ್ ಸಂಘದ ಪ್ರಕಟಣೆ ತಿಳಿಸಿದೆ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 08282-266514 ನ್ನು ಸಂಪರ್ಕಿಸಬಹುದಾಗಿದೆ.

ಅರ್ಜಿ ಆಹ್ವಾನ...
ಶಿವಮೊಗ್ಗ: ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಬಾಲನ್ಯಾಯ ಕಾಯ್ದೆ ತಿದ್ದುಪಡಿಯನುಸಾರ ಜಿಲ್ಲೆಯಲ್ಲಿ 2013ರಿಂದ ಮುಂದಿನ 3ವರ್ಷಗಳ ಅವಧಿಗೆ ಮಕ್ಕಳ ಕಲ್ಯಾಣ ಸಮಿತಿ ಮತ್ತು ಬಾಲನ್ಯಾಯ ಮಂಡಳಿಯನ್ನು ರಚಿಸಲು ಉದ್ಧೇಶಿಸಿದ್ದು, ಸದಸ್ಯತ್ವಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಮಕ್ಕಳ ಕ್ಷೇತ್ರದಲ್ಲಿ 3ವರ್ಷಗಳ ಸೇವಾನುಭವ ಹೊಂದಿರುವ ಕನಿಷ್ಟ 30ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಜೂನ್ 27ರೊಳಗಾಗಿ ಅರ್ಜಿ ಸಲ್ಲಿಸಬಹುದು. ವಿವರಗಳಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವೀಕ್ಷಣಾಲಯ ಕಟ್ಟಡ, ಹಾಲ್ಕೊಳ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದು. ವಿವರಗಳಿಗಾಗಿ- 08182-295114.

ನಾಳೆ ರಕ್ತದಾನ ಶಿಬಿರ  ...
ಭದ್ರಾವತಿ: ಪಟ್ಟಣದ ಕಾರ್ಮಿಕ ಮುಖಂಡ ಹಾಗೂ ಭಾರತ ಕಮ್ಯುನಿಸ್ ಪಕ್ಷದ ರಾಜ್ಯ ಮಂಡಳಿ ಸದಸ್ಯ ಮತ್ತು ಜಿಲ್ಲಾ ಎಐಟಿಯುಸಿ ಅಧ್ಯಕ್ಷ ಡಿ.ಸಿ. ಮಾಯಣ್ಣನವರ 79ನೇ ಹುಟ್ಟುಹಬ್ಬದ ಪ್ರಯುಕ್ತ ದಿ ಮೈಸೂರು ಪೇಪರ್ ಮಿಲ್ ವರ್ಕರ್ಸ್ ಯೂನಿಯನ್ ಮತ್ತು ರೋಟರಿ ರಕ್ತನಿಧಿ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಎಂಪಿಎಂ ಕಾರ್ಮಿಕರಿಂದ ಗುರುವಾರ (ಜೂ.20) ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2ಗಂಟೆ ವರೆಗೆ ರಕ್ತದಾನ ಶಿಬಿರ  ಆಯೋಜಿಸಲಾಗಿದೆ. ಶಿಬಿರವನ್ನು ಶಾಸಕ ಎಂ.ಜೆ. ಅಪ್ಪಾಜಿ ಉದ್ಘಾಟಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.