ಅತಿ ಅವಲಂಬನೆಯಿಂದ ಅಭಿವೃದ್ಧಿ ಅಸಾಧ್ಯ
ಕ.ಪ್ರ.ವಾರ್ತೆ, ಭದ್ರಾವತಿ, ಜೂ.21
ಎಲ್ಲದಕ್ಕೂ ಸರ್ಕಾರದ ಮೇಲೆ ಅವಲಂಬಿತರಾಗುತ್ತಾ ಕುಳಿತರೆ ಅಭಿವೃದ್ಧಿಯಾಗಲು ಸಾಧ್ಯವಿಲ್ಲ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಸಂಸದ ಜಯಪ್ರಕಾಶ ಹೆಗ್ಡೆ ಹೇಳಿದರು.
ಶುಕ್ರವಾರ ಪಟ್ಟಣದ ಬಂಟರ ಸಂಘದ ಸಭಾಭವನ ಶಂಕುಸ್ಥಾಪನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಇಂದು ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೆಚ್ಚು ಬೇಡಿಕೆ ಇದೆ. ಈ ನಿಟ್ಟಿನಲ್ಲಿ ಯೋಚನೆ ಮಾಡಿ ಕ್ಷೇತ್ರಗಳನ್ನು ಆದಷ್ಟು ಪ್ರವಾಸಿಗರನ್ನು ಆಕರ್ಷಿಸುವ ಕ್ಷೇತ್ರಗಳನ್ನಾಗಿಸಲು ಚಿಂತಿಸುವ ಅಗತ್ಯವಿದೆ ಎಂದರು.
ಉದ್ಯೋಗ ಹೆಚ್ಚಳ: ತಾಲೂಕು ಕೇಂದ್ರಗಳ ರಸ್ತೆ ಅಭಿವೃದ್ಧಿಗೊಳಿಸಿದರೆ ಉದ್ದಿಮೆದಾರರು ತಮ್ಮ ಉದ್ದಿಮೆಯನ್ನು ಅಲ್ಲಿಗೆ ಸ್ಥಳಾಂತರಿಸುವುದರಿಂದ ಉದ್ಯೋಗಾವಕಾಶ ಹೆಚ್ಚುತ್ತವೆ. ಬದಲಾವಣೆ ತರಬೇಕಾದರೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಬಂಟರ ಸಂಘ ಸಮಾಜಕ್ಕೆ ಧನಾತ್ಮಕ ಸಂದೇಶ ನೀಡುವ ಅಗತ್ಯವಿದೆ ಎಂದರು.
ಸಭಾಭವನದ ಶಂಕುಸ್ಥಾಪನೆ ನೆರವೇರಿಸಿದ ಮುಂಬೈ ಬಂಟರ ಸಂಘದ ಅಧ್ಯಕ್ಷ ಸಿ.ಎ. ಶಂಕರಶೆಟ್ಟಿ ಮುಂಬೈ ಬಂಟರ ಸಂಘ ಬಡ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ ವಿತರಿಸುತ್ತರುವ ಯೋಜನೆ ಬಗ್ಗೆ ವಿವರಣೆ ನೀಡಿ, ವಿದ್ಯಾಭ್ಯಾಸಕ್ಕೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿದೆ ಎಂದರು.
ಸೌಹಾರ್ದ ಬದುಕು: ಪ್ರತಿಭಾ ಪುರಸ್ಕಾರ ಮಾಡಿದ ಶಾಸಕ ಅಪ್ಪಾಜಿ ಮಾನತಾಡಿ, ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರಾದ ಬಂಟರ ಸಮಾಜದವರು ಎಲ್ಲಿದ್ದರೂ ಅಲ್ಲಿನ ಸಮಾಜದೊಂದಿಗೆ ಹೊಂದಿಕೊಂಡು ಸೌಹಾರ್ದತೆಯಿಂದ ಬದುಕುತ್ತಾ ಸಾಮಾಜಿಕವಾಗಿ ಎಲ್ಲರಿಗೂ ನೆರವಾಗುವ ಸಂಸ್ಕೃತಿ ಹೊಂದಿದ್ದಾರೆ ಎದರು.
ಬೆಂಗಳೂರಿನ ಎಂ.ಆರ್.ಜಿ. ಹಾಸ್ಪಿಟಾಲಿಟಿ ಮತ್ತು ಇನ್‌ಫ್ರಾಸ್ಟ್ರಕ್ಷರ್ ಸಂಸ್ಥೆ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ, ಡಾ. ಸತೀಶ್ ಕುಮಾರ್ ಶೆಟ್ಟಿ, ಅಜಿತ್ ಕುಮಾರ್ ಮಾಲಾಡಿ, ಟಿ. ಅಮರನಾಥ ಹೆಗ್ಡೆ, ಅಮರನಾಥ ಶೆಟ್ಟಿ, ಮೋಹನದಾಸ ಶೆಟ್ಟಿ, ವಿಶ್ವನಾಥ ಶೆಟ್ಟಿ, ವಿಠಲ ಶೆಟ್ಟಿ ಮೊದಲಾದವರು ಇದ್ದರು.
ಸುರೇಶ ರಾವ್ ಅತ್ತೂರ್ ಪ್ರಾರ್ಥಿಸಿದರು. ಭದ್ರಾವತಿಯ ಬಂಟರ ಸಂಘದ ಅಧ್ಯಕ್ಷ ಬಿ. ದಿವಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥಾಪಕ ಅಧ್ಯಕ್ಷ ಡಾ. ಯು.ಕರುಣಾಕರ ಶೆಟ್ಟಿ ಪ್ರಾಸ್ತಾವಿಕ ಭಾಷಣ ಮಾಡಿದರು. ಎಂ. ಬಾಲಕೃಷ್ಣ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಕಾರ್ಯದರ್ಶಿ ಸುಬ್ಬಣ್ಣ ರೈ ಸಂಘದ ಚಟುವಟಿಕೆಗಳ ವರದಿಯನ್ನೋದಿದರು. ಎಚ್. ಭುವನೇಶ್ವರ್ ನಿರೂಪಿಸಿದರು. ಖಜಾಂಚಿ ವಿ. ಪ್ರಕಾಶ್ ಶೆಟ್ಟಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

