ಶಿವಮೊಗ್ಗ

ರಕ್ತದಾನ ಜಾಗೃತಿ ಕಾರ್ಯಕ್ರಮ

Published On :

ಶಿವಮೊಗ್ಗ: ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ರಕ್ತದಾನ ಜಾಗೃತಿ ಕಾರ್ಯಕ್ರಮ ಶುಕ್ರವಾರ ನಗರದಲ್ಲಿ ನಡೆಯಿತು.
 ಜಾಥಾಗೆ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಚಾಲನೆ ನೀಡಿದರು. ನಂತರ ಸಂಘ ಸಂಸ್ಥೆಗಳ ಸದಸ್ಯರು ಜಾಥಾ ನಡೆಸಿ ಜನ ಸಾಮಾನ್ಯರಲ್ಲಿ ರಕ್ತದಾನ ಕುರಿತಾಗಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದರು.
 ಈ ಸಂದರ್ಭದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಸೆಂಥಿಲ್, ಜಿಲ್ಲಾ ಆರೋಗ್ಯಾಧಿಕಾರಿ  ಡಾ.ಶಿವಣ್ಣ ರೆಡ್ಡಿ, ಡಾ.ಎಸ್. ದಿನಕರ್, ಯಜ್ಞನಾರಾಯಣ್, ಸ್ವಯಂ ಪ್ರೇರಿತ ರಕ್ತದಾನಿಗಳ ಸಂಘದ ಅಧ್ಯಕ್ಷ ಸುರೇಶ್, ಪ್ರಶಾಂತ್ ಶಾಸ್ತ್ರಿ, ಕಾರ್ಯದರ್ಶಿ ಜಿ. ವಿಜಯಕುಮಾರ್, ಧರಣೇಂದ್ರ ದಿನಕರ್, ಗಿರೀಶ್, ದಿವಾಕರ್ ಗುಪ್ತಾ, ಲೋಕನಾಥ್, ವೈ.ಎಚ್. ನಾಗರಾಜ್ ಹಾಗೂ ಸ್ವಯಂ ಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆಯ ಪ್ರಮುಖರು ಹಾಜರಿದ್ದರು.
 ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು, ಜಿಪಂ, ಜಿಲ್ಲಾಡಳಿತ, ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಸ್ವಯಂ ಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್, ಆಧಾರ ರಕ್ತದಾನಿಗಳ ಸೇವಾ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.