ಶಿವಮೊಗ್ಗ

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Published On :

ಶಿವಮೊಗ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ ಹಾಗೂ ಪಾರ್ಸಿ ಜನಾಂಗದ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮುಂದುವರೆಸಲು ಪ್ರೋತ್ಸಾಹಧನ ನೀಡಲು ಉದ್ದೇಶಿಸಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ವಿದ್ಯಾರ್ಥಿಗಳಿಗೆ ರು. 3,000, ಪದವಿ ವಿದ್ಯಾರ್ಥಿಗಳಿಗೆ ರು. 4,000 ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ರು. 5,000 ಪ್ರೋತ್ಸಾಹಧನ ನೀಡಲಾಗುವುದು. ಜಿಲ್ಲಾ ಮಟ್ಟದಲ್ಲಿ ವಿದ್ಯಾರ್ಥಿಗಳು ಗಳಿಸಿರುವ ಅಂಕ ಪರಿಗಣಿಸಿ, ಅನುದಾನದ ಲಭ್ಯತೆ ಆಧಾರದ ಮೆಲೆ ಪ್ರೋತ್ಸಾಹಧನ ನೀಡಲಾಗುವುದು. ಅಭ್ಯರ್ಥಿಯು ತಮ್ಮ ಹಿಂದಿನ ಸಾಲಿನಲ್ಲಿ ಶೇ. 50 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಪೋಷಕರ ವಾರ್ಷಿಕ ವರಮಾನ ರು. 2 ಲಕ್ಷ ಮೀರಿರಬಾರದು. ಅರ್ಹರು ಅರ್ಜಿಯನ್ನು ಜುಲೈ 30ರೊಳಗೆ ಸಲ್ಲಿಸಬೇಕು. ವಿವರಗಳಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಇಲಾಖೆ, 1ನೇ ಮಹಡಿ, ಸಿ.ಎಸ್. ಆಸ್ಪತ್ರೆ ಕಟ್ಟಡ, ಎಲ್.ಎಲ್.ಆರ್. ರಸ್ತೆ, ಶಿವಮೊಗ್ಗ ದೂ. 08182-220206 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.