ಶಿವಮೊಗ್ಗ

ರಾಜಾಫಾಲ್ಸ್‌ನಲ್ಲಿ ಈಜಲು ಹೋದ ಯುವಕ ಸಾವು

Published On :

ಜೋಗ್‌ಫಾಲ್ಸ್: ಇಲ್ಲಿನ ಜಗದ್ವಿಖ್ಯಾತ ಜೋಗ ಜಲಪಾತದ ಕೆಳಭಾಗದ ರಾಜಾಫಾಲ್ಸ್‌ನಲ್ಲಿ ಬೆಂಗಳೂರು ಮೂಲದ ಯುವಕನೊಬ್ಬ ತನ್ನ ನಾಲ್ವರು ಗೆಳೆಯರೊಂದಿಗೆ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಕ್ಕಿ ಸಾವಿಗೀಡಾಗಿದ್ದಾನೆ.
ಶರತ್ (16) ಮೃತ ಯುವಕ ಎಂದು ಗುರುತಿಸಲಾಗಿದೆ. ತನ್ನ ಗೆಳೆಯರೊಂದಿಗೆ ಜೋಗಕ್ಕೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಕ್ಲೀನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಈತ ಶುಕ್ರವಾರ ಸಂಜೆ 4 ಗಂಟೆ ಸಮಯದಲ್ಲಿ ಜಲಪಾತದ ಕೆಳಭಾಗಕ್ಕೆ ಇಳಿದಿದ್ದ.
ಪ್ರವೇಶ ನಿಷೇಧ: ಜಲಪಾತದ ಕೆಳಭಾಗದಲ್ಲಿ ನೀರಿನ ಹರಿವು ಹೆಚ್ಚಿರುವುದರಿಂದ ಮತ್ತು ಬಂಡೆಗಳು ಜಾರುತ್ತಿರುವುದರಿಂದ ನಾಳೆಯಿಂದಲೇ ಜಾರಿಗೆ ಬರುವಂತೆ ಜಲಪಾತದ ಕೆಳಭಾಗಕ್ಕೆ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಜೋಗ್ ಪೊಲೀಸ್ ಠಾಣೆ ಎಸ್ಸೈ ಮೊಹಮದ್ ರಫಿ ತಿಳಿಸಿದ್ದಾರೆ.
ಅವಘಡ ಸಂಭವಿಸಿದ ನಂತರ ಉಪವಿಭಾಗಾಧಿಕಾರಿ ಉದಯಕುಮಾರ್ ಶೆಟ್ಟಿ ಅವರೊಂದಿಗೆ ಚರ್ಚಿಸಿ ಜಲಪಾತದ ಕೆಳಭಾಗಕ್ಕೆ ಪ್ರವಾಸಿಗರು ತೆರಳದಂತೆ ಸೂಚನಾ ಫಲಕವನ್ನು ಅಳವಡಿಸಲಾಗುವುದು ಮತ್ತು ಇನ್ನು ಮುಂದೆ ಇಂತಹ ಅವಘಡಗಳು ನಡೆಯದಂತೆ ಎಚ್ಚರ ವಹಿಸಲಾಗುವುದು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.