ದೇಗುಲಗಳು ಮನುಷ್ಯನಿಗೆ ದಾರಿದೀಪವಿದ್ದಂತೆ: ಸಿರಿಗೆರೆ ಶ್ರೀ
ಕ.ಪ್ರ.ವಾರ್ತೆ ಹೊನ್ನಾಳಿ ಜೂ. 23
ದೇವರು, ದೇವಾಲಯಗಳು ಮನುಷ್ಯನ್ನು ಸರಿದಾರಿಯಲ್ಲಿ ಸಾಗುವಂತೆ ಮಾಡುವ ದಾರಿದೀಪಗಳಿದ್ದಂತೆ ಆ ದಾರಿಯಲ್ಲಿ ಸಾಗುವ ಪ್ರಯತ್ನ ಮಾತ್ರ ಮಾನವವದ್ದಾಗಿದೆ ಎಂದು ಸಿರಿಗೆರೆ ತರಳಬಾಲು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.
ತಾಲೂಕಿನ ಕುಂದೂರಿನ ಬಸವೇಶ್ವರ ಪ್ರತಿಷ್ಠಾಪನೆ ಹಾಗೂ ದೇವಾಲಯದ ಕಳಸಾರೊಹಣ ಸಮಾರಂಭದ ಸಾನ್ನಿಧ್ಯ ವಹಿಸಿ ಆರ್ಶೀವಚನ ನೀಡಿ, ಮಾನವ ಎಂದಿಗೂ ಧರ್ಮ ಮತ್ತು ಪ್ರಕೃತಿ ವಿರುದ್ಧ ಹೋಗಬಾರದು ಒಂದು ವೇಳೆ ಹೋದರೆ ಆಪಾಯ ಎಂದಿಗೂ ಕಟ್ಟಿಟ್ಟ ಬುತ್ತಿಯಾಗಿರುತ್ತದೆ ಎಂದು ಎಚ್ಚರಿಕೆ ನೀಡಿದರು.
ಅಭಿವೃದ್ಧಿ ಕಡೆ ಸಾಗಿ: ಸಮಾರಂಭ ಉದ್ಘಾಟಿಸಿದ ಶಾಸಕ ಡಿ.ಜಿ. ಶಾಂತನಗೌಡ ಮಾತನಾಡಿ, ಗ್ರಾಮಸ್ಥರು ತಮ್ಮ ಗ್ರಾಮದ ಅಭಿವೃದ್ಧಿ ವಿಷಯದಲ್ಲಿ ಒಗ್ಗಟ್ಟಿನ ಕೆಲಸ ಮಾಡಬೇಕು.
ರಾಜಕೀಯ ಪಕ್ಷ ಇತ್ಯಾದಿಗಳನ್ನು ಬದಿಗಿಟ್ಟು ಪಕ್ಷಾತೀತವಾಗಿ ಹಾಗೂ ಜಾತ್ಯಾತೀತವಾಗಿ ಸಹಬಾಳ್ವೆಯಿಂದ ಪರಸ್ಪರ ಸಹಕಾರದಿಂದ ಒಟ್ಟಾರೆ ಆಭಿವೃದ್ಧಿ ಕಡೆಗೆ ಸಾಗಾಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಾಪಂ ಸದಸ್ಯ ದಾಕ್ಷಾಯಣಮ್ಮ, ಕುಂದೂರು ಗ್ರಾಪಂ ಅಧ್ಯಕ್ಷ ಕೆಎನ್‌ಡಿ ವೀರಣ್ಣಗೌಡ ಅಧ್ಯಕ್ಷತೆ ವಹಿಸಿದ್ದರು.
ಸಮಾರಂಭದಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷರು ಆಡಳಿತ ಮಂಡಳಿ ಸದಸ್ಯರು, ಗ್ರಾಪಂ ಉಪಾಧ್ಯಕ್ಷರು, ಸದಸ್ಯರು, ಗ್ರಾಮದ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

