ಶಿವಮೊಗ್ಗ

'ರಾಜಕೀಯವಾಗಿ ಸಂಘಟಿತವಾಗಲು ಸಹಕರಿಸಿ'

Published On :

ಶಿವಮೊಗ್ಗ: ಮುಂದಿನ ದಿನಗಳಲ್ಲಿ ಬ್ರಾಹ್ಮಣ ಸಮುದಾಯ ರಾಜಕೀಯವಾಗಿ ಸಂಘಟಿತವಾಗುವ ನಿಟ್ಟಿನಲ್ಲಿ ಸಮುದಾಯದ ಹಿರಿಯರು ಸಹಕರಿಸಬೇಕು ಎಂದು ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಹೇಳಿದರು.
 ಬಬ್ಬೂರುಕಮ್ಮೆ ಸೇವಾ ಸಮಿತಿ ನಗರದ ಕೋಟೆ ರಸ್ತೆಯ ಗಾಯತ್ರಿ ದೇವಸ್ಥಾನದಲ್ಲಿ ಭಾನುವಾರ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಬ್ರಾಹ್ಮಣ ಸಮಾಜ ರಾಜಕೀಯ ಶಕ್ತಿಯಾಗಿ ಬೆಳೆಯಬೇಕು.ಇದಕ್ಕೆ ಇಂದಿನಿಂದಲೇ ಸಮುದಾಯ ಹಿರಿಯರು ಕಾರ್ಯಪ್ರವೃತರಾಗಬೇಕು ಎಂದರು.
ಅಭಿವೃದ್ಧಿಗೆ ಬದ್ದ: ನಗರದಲ್ಲಿ ಸಮುದಾಯ 40 ಸಾವಿರದಷ್ಟು ಜನಸಂಖ್ಯೆ ಇದ್ದರೂ ನಗರಸಭೆ ಚುನಾವಣೆಯಲ್ಲಿ ಗೆದ್ದಿರುವುದು ಬೆರಳೆಣಿಕೆಯಷ್ಟು ಅಭ್ಯರ್ಥಿಗಳು ಮಾತ್ರ. ಹೀಗಾಗಿ ಸಮುದಾಯದವರು ರಾಜಕೀಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದ ಅವರು, ಶಿವಮೊಗ್ಗ ನಗರದ ಸರ್ವಾಂಗೀಣ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರ ಸಲಹೆ, ಸಹಕಾರ ಅಗತ್ಯ. ನಗರದ ಪ್ರಮುಖ ಕಾಮಗಾರಿ ಹಾಗೂ ಅಭಿವೃದ್ಧಿ ವಿಷಯದಲ್ಲಿ ಯಾವುದೇ ಚ್ಯುತಿ ಬಾರದಂತೆ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಆವಿಷ್ಕಾರಗಳು: ಕೃಷಿ ಅಧಿಕಾರಿ ಕೆ.ಜಿ. ಕುಮಾರ್ ಮಾತನಾಡಿ, ಜಗತ್ತು ಅತ್ಯಂತ ವೇಗವಾಗಿದ್ದು, ಈ ನಿಟ್ಟಿನಲ್ಲಿ ಇಂದಿನ ವಿದ್ಯಾರ್ಥಿಗಳು ಬೆಳೆಯಬೇಕಿದೆ.
  ವಿಶ್ವದ ಇತಿಹಾಸ ತಿಳಿಯಲು ದೇಶ ಸುತ್ತುವ ಅವಶ್ಯಕತೆ ಇಲ್ಲ. ಕುಳಿತಲ್ಲಿಗೇ ಆವಿಷ್ಕಾರಗಳು ಕ್ಷಣ ಮಾತ್ರದಲ್ಲಿ ಸಿಗುತ್ತಿವೆ. ಹೀಗಾಗಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಹೊರಜಗತ್ತಿನೊಂದಿಗೂ ಸಂಪರ್ಕ ಹೊಂದಿರಬೇಕು  ಎಂದರು.
 ಭವಿಷ್ಯದಲ್ಲಿ ವೈದ್ಯ, ಎಂಜಿನಿಯರ್ ಆಗಬೇಕೆಂದು ಕನಸು ಕಾಣುವ ವಿದ್ಯಾರ್ಥಿಗಳು ಬೇರೆ ಕ್ಷೇತ್ರಗಳ ಬಗ್ಗೆ ಗಮನಹರಿಸುವುದಿಲ್ಲ. ಹೀಗಾಗಿ ದೇಶದ ಆಡಳಿತಾತ್ಮಕ ವಿಷಯಗಳಾದ ಐಎಎಸ್, ಐಪಿಎಸ್, ಕೆಎಎಸ್ ಪರೀಕ್ಷೆಗಳಲ್ಲಿ ತೆಗೆದುಕೊಂಡು ಉತ್ತೀರ್ಣರಾಗುವ ನಿಟ್ಟಿನಲ್ಲಿ ಸಜ್ಜಾಗಬೇಕು ಎಂದು ಸಲಹೆ ನೀಡಿದರು.
ಇದೇ ವೇಳೆ ನೂತನ ನಗರಸಭಾ ಸದಸ್ಯೆ ಸುರೇಖಾ ಮುರುಳೀಧರ್ ಅವರನ್ನು ಅಭಿನಂದಿಸಲಾಯಿತು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. 80ಕ್ಕೂ ಹೆಚ್ಚು ಅಂಕ ಪಡೆದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.  ಬಬ್ಬೂರುಕಮ್ಮೆ ಸೇವಾ ಸಮಿತಿ ಅಧ್ಯಕ್ಷ ಕಾರಕೋಡ್ಲು ಗುರುಮೂರ್ತಿ, ಗೌರವಾಧ್ಯಕ್ಷ ಎಸ್.ಎಸ್. ನಂಜುಂಡಸ್ವಾಮಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಮ.ಸ. ನಂಜುಂಡಸ್ವಾಮಿ, ಉಪನ್ಯಾಸಕ ಕೆ. ಅರವಿಂದ ಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.