ಆಯನೂರು ಗ್ರಾಪಂನಿಂದ ಶಾಸಕಿ ಶಾರದಾಗೆ ಸನ್ಮಾನ
ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ ಅವರನ್ನು ಆಯನೂರು ಗ್ರಾಮ ಪಂಚಾಯಿತಿಯಿಂದ ಮಂಗಳವಾರ ಸನ್ಮಾನಿಸಲಾಯಿತು.
ನಂತರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸಂಬಂಧಿಸಿದಂತೆ ಕಂದು ಕೊರತೆಗಳ ಚರ್ಚೆ ನಡೆದು, ಪಡಿತರ ಚೀಟಿ ವಿತರಣೆಯಲ್ಲಿನ ಲೋಪದೋಷಗಳು, ಆಶ್ರಯ ಯೋಜನೆ, ರಸ್ತೆ, ಕುಡಿಯುವ ನೀರಿನ ಸಮಸ್ಯೆ, ನಿವೇಶನ ಹಂಚಿಕೆ ಮತ್ತು ಗೌಡಿನಕೆರೆ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಶಾಸಕರಿಗೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕಿ ಶಾರದ ಪೂರ್ಯಾನಾಯ್ಕ್, ಗ್ರಾ.ಪಂಗೆ ಬರುವ ಅನುದಾನಗಳನ್ನು ಬಳಸಿಕೊಂಡು ರಸ್ತೆ, ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಿ. ಗೌಡನಕೆರೆ ಪುನಶ್ಚೇತನಕ್ಕೆ ಎಂಜಿನಿಯರ್ಗೆ ಕಾಮಗಾರಿ ಕೈಗೊಳ್ಳಲು ಸೂಚಿಸುವುದಾಗಿ ಭರವಸೆ ನೀಡಿದರು.
ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಒಬ್ಬ ವ್ಯಕ್ತಿ ಮಾಡಲು ಸಾಧ್ಯವಿಲ್ಲ. ಇದಕ್ಕೆ ಪಕ್ಷಭೇದ ಮರೆತು ಎಲ್ಲರೂ ಕೈಜೋಡಿಸಿದಾಗ ಮಾತ್ರ ಉತ್ತಮ ಬೆಳೆವಣಿಗೆ ಹೊಂದಲು ಸಾಧ್ಯವಿಲ್ಲ ಎಂದರು.
ಕಾರ್ಯಕ್ರಮದಲ್ಲಿ ಗ್ರಾ.ಪಂ.ಅಧ್ಯಕ್ಷೆ ಭಾಗ್ಯ ನರಸಿಂಹ, ಉಪಾಧ್ಯಕ್ಷ ಚಂದ್ರಪ್ಪ, ರವಿಕುಮಾರ್, ಚಂದ್ರಕಲಾ, ಉಷಾಬಾಯಿ ಮತಿತ್ತರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

