ಶಿವಮೊಗ್ಗ

ಮಾದಕ ವ್ಯಸನ ಘೋರ ಅಪರಾಧ

Published On :

ಸೊರಬ: ಸಮಾಜಕ್ಕೆ ಕೆಟ್ಟ ಸಂದೇಶ ನೀಡುವ ಮಾದಕ ವ್ಯಸನ ಘೋರ ಅಪರಾಧ ಎಂದು ಪಟ್ಟಣ ಪಿಎಸ್‌ಐ ಮಹಬಲೇಶ್ವರ ನಾಯ್ಕ ಅಭಿಪ್ರಾಯಪಟ್ಟರು. ಇಲ್ಲಿನ ಸಪಪೂ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಾದಕ ದ್ರವ್ಯ ಸೇವನೆಯಿಂದ ರಕ್ತದೊತ್ತಡ ಹೆಚ್ಚಾಗಿ ಮೆದುಳಿನ ಮೇಲೆ ನೇರ ದುಷ್ಪರಿಣಾಮ ಬೀರುತ್ತದೆ. ಇಂದು ಇಂತಹ ಮಾದಕ ದ್ರವ್ಯ ವ್ಯಸನಿಗಳಲ್ಲಿ ಯುವಜನತೆಯೆ ಹೆಚ್ಚಾಗಿರುವುದು ಖೇದಕರ ಸಂಗತಿ, ಆಧುನಿಕ ಜೀವನ ಶೈಲಿಯ ಪ್ರಭಾವ, ನಮ್ಮ ಸಂಸ್ಕೃತಿಯಲ್ಲಿನ ವಿಚಾರಗಳ ಬಗ್ಗೆ ಅಸಡ್ಡೆ ಮುಂತಾದವು ಇಂತಹ ವ್ಯಸನಕ್ಕೆ ದಾರಿಯಾಗಿದೆ ಎಂದ ಅವರು, ಏಷ್ಯ ಖಂಡ ಮಾದಕ ವ್ಯಸನಿಗಳನ್ನು ಹೊತ್ತಂತಹ ಮೊದಲ ಖಂಡ, ವಿಶೇಷವಾಗಿ ಭಾರತದಲ್ಲಿ ಮೊಬೈಲ್ ಅಪರಾಧಗಳು ಹೆಚ್ಚಿರುವುದು ಆತಂಕಕಾರಿ ಸಂಗತಿ ಎಂದರು.
ಪೋಷಕರು ತಮ್ಮ ಮಕ್ಕಳ ಚಲನ ವಲನದ ಕುರಿತು ಜಾಗೃತಿ, ಮಕ್ಕಳಿಗೆ ಉತ್ತಮ ಹವ್ಯಾಸ ಬೆಳೆಸುವ ಮನೋಭಾವ ಬೆಳೆಯಬೇಕು, ಮಾದಕ ವ್ಯಸನಗಳ ಕುರಿತಂತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂಘ- ಸಂಸ್ಥೆಗಳಿಂದ ವಿದ್ಯಾರ್ಥಿ ಯುವ ಪೀಳಿಗೆಗೆ ಅರಿವು ಮೂಡಿಸುವ ಕೆಲಸವಾಗಬೇಕಿದೆ ಎಂದರು.ಕಾಲೇಜು ಪ್ರಭಾರ ಪ್ರಾಚಾರ್ಯ ಪ್ರೇಮ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ವಿಶ್ವನಾಥ್, ಶಿವಾನಂದ್, ಸಿಬ್ಬಂದಿ, ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.