ಶಿವಮೊಗ್ಗ

ಕುಂಸಿ ತಾಲೂಕು ಕೇಂದ್ರಕ್ಕೆ ಆಗ್ರಹಿಸಿ ಮನವಿ

Published On :

ಶಿವಮೊಗ್ಗ: ಕುಂಸಿ ಗ್ರಾಪಂನ್ನು ತಾಲೂಕು ಕೇಂದ್ರವಾಗಿ ಮೇಲ್ದರ್ಜೆಗೇರಿಸುವಂತೆ ಒತ್ತಾಯಿಸಿ ಕುಂಸಿ ನಾಗರಿಕ ಹೋರಾಟ ಸಮಿತಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಮನವಿ ಸಲ್ಲಿಸಿತು.
 ಕುಂಸಿ ತಾಲೂಕು ಕೇಂದ್ರವಾಗುವ ಎಲ್ಲಾ ಅರ್ಹತೆ ಹೊಂದಿದ್ದು, ಸರ್ಕಾರ ನಾಗರಿಕರ ಮನವಿಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೋರಾಟ ಸಮಿತಿ ಒತ್ತಾಯಿಸಿತು.
ಮನವಿ ಸಾರಾಂಶ: ಶಿವಮೊಗ್ಗ ತಾಲೂಕಿನ ಕುಂಸಿ ಗ್ರಾಪಂ ಜಿಲ್ಲೆಯಲ್ಲಿಯೇ ದೊಡ್ಡ ಗ್ರಾಪಂಗಳಲ್ಲೊಂದಾಗಿದೆ. ಶಿವಮೊಗ್ಗ ನಗರದಿಂದ 24 ಕಿ.ಮೀ.ದೂರದಲ್ಲಿರುವ ಕುಂಸಿ ಆರ್ಥಿಕ, ಶೈಕ್ಷಣಿಕ, ಉದ್ದಿಮೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದಾಪುಗಾಲಿಡುತ್ತಿದ್ದು ಅತ್ಯಂತ ವೇಗವಾಗಿ ಅಭಿವೃದ್ದಿ ಹೊಂದುತ್ತಿದೆ.
 ಪ್ರಸ್ತುತ ಕುಂಸಿ ಗ್ರಾಮವೊಂದರಲ್ಲಿಯೇ ಸುಮಾರು 10 ಸಾವಿರಕ್ಕೂ ಅಧಿಕ ಜನಸಂಖ್ಯೆಯಿದೆ. ಸುತ್ತಮುತ್ತಲು ಸಮಾರು 20ಕ್ಕೂ ಅಧಿಕ ಗ್ರಾಮಗಳು ಕುಂಸಿಗೆ ಹೊಂದಿಕೊಂಡಂತೆ ಇದ್ದು, ಸಾವಿರಾರು ಜನರು ವಾಸಿಸುತ್ತಿದ್ದಾರೆ. ಆದಾಯದ ಪ್ರಮಾಣವೂ ಹೆಚ್ಚಿದೆ. ಪ್ರತಿನಿತ್ಯ ದೈನಂದಿನ ಕೆಲಸ ಕಾರ್ಯಗಳಿಗೆ ಕುಂಸಿ ಗ್ರಾಮಕ್ಕೆ ಆಗಮಿಸುತ್ತಾರೆ. ಕೃಷಿ ಸೇರಿದಂತೆ ಹಲವು ಉದ್ದಿಮೆಗಳು ಕುಂಸಿಯಲ್ಲಿದ್ದು, ಪ್ರತ್ಯಕ್ಷ - ಪರೋಕ್ಷವಾಗಿ ನೂರಾರು ಜನರು ಉದ್ಯೋಗ ಮಾಡುತ್ತಿದ್ದಾರೆ. ಕುಂಸಿಯನ್ನು ತಾಲೂಕು ಕೇಂದ್ರವಾಗಿ ಘೋಷಿಸಿಬೇಕು. ಇದರಿಂದ ಶಿವಮೊಗ್ಗ ತಾಲೂಕಿನ ಗ್ರಾಮಾಂತರ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಪರಿಣಾಮಕಾರಿ ಆಡಳಿತ ವ್ಯವಸ್ಥೆಗೆ ಅನುಕೂಲವಾಗಲಿದೆ ಎಂದು ವಿವರಿಸಲಾಗಿದೆ.
 ಜುಲೈನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಲಿರುವ ಬಜೆಟ್ನಲ್ಲಿ ಕುಂಸಿಯನ್ನು ತಾಲೂಕು ಕೇಂದ್ರವಾಗಿ ಘೋಷಿಸಲು ಕ್ರಮಕೈಗೊಳ್ಳಬೇಕು. ಈ ಸಂಬಂಧ ತಾವು, ನಗರಾಡಳಿತ ಸಚಿವ ವಿನಯ್ಕುಮಾರ್ ಕೊರಕೆ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಶಾರದಾ ಪೂರ್ಯುನಾಯ್ಕ್ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ, ಕುಂಸಿಯನ್ನು ತಾಲೂಕು ಕೇಂದ್ರವಾಗಿ ಘೋಷಿಸಲು ಮನವೊಲಿಸಬೇಕು ಎಂದು ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಮನವಿ ಮಾಡಿದ್ದಾಗಿ ಹೋರಾಟ ಸಮಿತಿ ಪ್ರಮುಖರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.