ನಾಳೆ ಜಿಲ್ಲಾ ಲೇಖಕಿಯರ ಸಂಘದ ಶಾಖೆ ಉದ್ಘಾಟನೆ
ಶಿವಮೊಗ್ಗ: ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾ ಶಾಖೆ ಜೂನ್ 30ರಂದು ಬೆಳಗ್ಗೆ 11 ಗಂಟೆಗೆ ನಗರದ ಕರ್ನಾಟಕ ಸಂಘದಲ್ಲಿ ಉದ್ಘಾಟನೆಗೊಳ್ಳಲಿದೆ.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಂಘದ ಸದಸ್ಯೆ ಎಸ್.ವಿ. ಚಂದ್ರಕಲಾ, ಹಿರಿಯ ಸಾಹಿತಿ, ಅನುಪಮ ಪ್ರಶಸ್ತಿ ಪುರಸ್ಕೃತೆ ಪ್ರೇಮಾಭಟ್ ಸಂಘ ಉದ್ಘಾಟಿಸಲಿದ್ದು, ಕವಯತ್ರಿ ಡಾ. ಕೆ. ಶರೀಫ, ತೀರ್ಥಹಳ್ಳಿ ತುಂಗಾ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ. ಎಲ್.ಸಿ. ಸುಮಿತ್ರಾ, ಸಂಘದ ಕಾರ್ಯದರ್ಶಿ ಆಶಾ ಹೆಗಡೆ ಮತ್ತಿತರರು ಪಾಲ್ಗೊಳ್ಳುವರು ಎಂದು ತಿಳಿಸಿದರು.
18 ವರ್ಷ ಮೇಲ್ಪಟ್ಟ ಸ್ಥಳೀಯ ಮಹಿಳಾ ಲೇಖಕಿಯರು ಸಂಘದಲ್ಲಿ ಸದಸ್ಯತ್ವ ಹೊಂದಬಹುದು ಎಂದರು.
ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳೆಸುವ ನಿಟ್ಟಿನಲ್ಲಿ ಸಂಘ ಸ್ಥಾಪನೆಗಂಡಿದ್ದು, ಉದಯೋನ್ಮುಖ ಲೇಖಕಿಯರಿಗೆ ಪ್ರೋತ್ಸಾಹ ನೀಡುವುದು, ಲೇಖಕಿಯರ ಪುಸ್ತಕ ಪ್ರಕಟಣೆ, ಸಮ್ಮೇಳನ ಆಯೋಜನೆ, ಪ್ರತಿ ತಿಂಗಳು ಕಥಾ ಕಮ್ಮಟ, ನಾಟಕ ಕಮ್ಮಟ, ಉಪನ್ಯಾಸ, ಸಂಗೀತ, ಗಮಕ, ಚಿತ್ರಕಲೆ ಮತ್ತಿತರ ಕಾರ್ಯಕ್ರಮಗಳನ್ನು ಆಯೋಜಿಸುವ ಉದ್ದೇಶವನ್ನು ಸಂಘ ಹೊಂದಿದೆ ಎಂದರು. ಶಾರದ ಉಳುವೆ, ಸಿ.ಎಸ್. ಕಾತ್ಯಾಯಿನಿ, ಅನ್ನಪೂರ್ಣ, ನಂದಿನಿ, ಬನಶಂಕರಿಮೂರ್ತಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

