ಇಂದು ಸೊರಬ ಸಾಹಿತ್ಯ ಸಮ್ಮೇಳನ
ಕ.ಪ್ರ.ವಾರ್ತೆ ಟಿ ಸೊರಬ ಟಿ ಜೂ.29
ಇಂದು ಆನವಟ್ಟಿ ಗ್ರಾಮದಲ್ಲಿ ತಾಲೂಕು ಮಟ್ಟದ ಎರಡನೆ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಲಿದೆ.
ಸಮ್ಮೇಳನಾಧ್ಯಕ್ಷ ಕವಿ, ಚಿಂತಕ ನೆಗವಾಡಿ ರಾಜಶೇಖರ್ ಪಾಟೀಲ್ ನೇತೃತ್ವದಲ್ಲಿ ವಿವಿಧ ಕನ್ನಡಪರ ಕಾರ್ಯಕ್ರಮಗಳು ಜರುಗಲಿವೆ.
ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಸಕ ಮಧು ಬಂಗಾರಪ್ಪ, ಜಿಪಂ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ್, ತಾಕಸಾಪ ಅಧ್ಯಕ್ಷ ಮಧುರಾಯಶೇಟ್ ಪಾಲ್ಗೊಳ್ಳಲಿದ್ದಾರೆ.
ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಸಮಾರಂಭ ನೆರವೇರಲಿದ್ದು, ಕುವೆಂಪು ವಿವಿ ಪ್ರಾಧ್ಯಾಪಕ ಡಾ. ಸಣ್ಣರಾಮಪ್ಪ ಉದ್ಘಾಟಿಸಲಿದ್ದಾರೆ. ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಗಮಕಿ ಸೀತಾರಾಂರಾವ್ ಉಪಸ್ಥಿತರಿರುತ್ತಾರೆ. ಪುಸ್ತಕ ಮಳಿಗೆ ಉದ್ಘಾಟನೆ ಜಿಲ್ಲಾ ಕಸಾಪ ಅಧ್ಯಕ್ಷ ಡಿ. ಮಂಜುನಾಥ್, ವಿಜ್ಞಾನ ವಸ್ತು ಪ್ರದರ್ಶನ ತಾಪಂ ಅಧ್ಯಕ್ಷ ಸದಾನಂದಗೌಡ, ಕರಕುಶಲ ವಸ್ತು ಪ್ರದರ್ಶನ ಗ್ರಾಪಂ ಅಧ್ಯಕ್ಷೆ ಗಿರಿಜಮ್ಮ ಉದ್ಘಾಟಿಸಲಿದ್ದಾರೆ.
ಜಿಪಂ ಸದಸ್ಯ ಹುನವಳ್ಳಿ ಗಂಗಾಧರಪ್ಪ, ಗುರುಕುಮಾರ್ ಪಾಟೀಲ್, ಕೋಮಲಾ ನಿರಂಜನ್, ಮಲ್ಲಮ್ಮ ಮಲ್ಲಿಕಾರ್ಜುನ್, ಸಮ್ಮೇಳನದ ಗೌರವಾಧ್ಯಕ್ಷ ಬಸವನಗೌಡ ಮುಂತಾದವರು ಉಪಸ್ಥಿತರಿರುತ್ತಾರೆ. ವಿವಿಧ ರಂಗಗಳಲ್ಲಿ ಸಾಧನೆಗೈದ ಡಾ.ಎಂ.ಕೆ. ಭಟ್, ಶಿವರಾಂ ಜಿ. ನಾಯಕ್, ನಾರಾಯಣಪ್ಪ ವೆಂ. ಬೋಡ್ಕೆ, ಜಗನ್ನಾಥಪ್ಪ ಮಾಳವದೆ ಕೋಟಿಪುರ, ಲಕ್ಷ್ಮಣಜೋಗಿ ಕೊರಕೋಡು ಇವರುಗಳಿಗೆ ಸನ್ಮಾನವಿರುತ್ತದೆ.
ಸಮ್ಮೇಳನಾಧ್ಯಕ್ಷರ ಸಾಹಿತ್ಯ ಪರಿಚಯ, ಕವಿ, ವಿಚಾರ ಈ ಮೂರು ಗೋಷ್ಠಿಗಳು ನಡೆಯಲಿವೆ, ನಂತರ ಸಮಾರೋಪ ಸಮಾರಂಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ವಿಪ ಸದಸ್ಯೆ ಭಾರತಿಶೆಟ್ಟಿ, ಉದ್ಯಮಿ ಶ್ರೀಧರ ಆರ್.ಹುಲ್ತಿಕೊಪ್ಪ, ಮೊದಲಾದವರು ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

