ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ ಶಾಸಕ ಪ್ರಸನ್ನ ಕುಮಾರ್
ಶಿವಮೊಗ್ಗ: ಗರಬಡಿದಂತಿದ್ದ ತಾಲೂಕು ಕಚೇರಿಗೆ ನೂತನ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಚುರುಕು ಮುಟ್ಟಿಸಿದ್ದಾರೆ.
ಶನಿವಾರ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತದ ಅಧಿಕಾರಿಗಳು ಸಿಬ್ಬಂದಿಯೊಂದಿಗೆ ಸಭೆ ನಡೆಸಿದ ಅವರು, ಮಾರ್ಗದರ್ಶನ ಮಾಡಿದರಲ್ಲದೆ, ಉದಾಸೀನ ಮಾಡಿದರೆ ತಕ್ಕಶಾಸ್ತಿ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನೂ ನೀಡಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ವಿಧವಾ ವೇತನ, ಅಂಗವಿಕಲರ ವೇತನ, ವೃದ್ಧಾಪ್ಯ ವೇತನ ಇತ್ಯಾದಿ ಸರ್ಕಾರ ಜನ ಕಲ್ಯಾಣ ಯೋಜನೆಗಳನ್ನು ತಲುಪಿಸಲು ವಿಳಂಬ ಮಾಡಕೂಡದು ಎಂದು ಎಚ್ಚರಿಕೆ ನೀಡಿದರು. ಯೋಜನೆಗಳನ್ನು ಬಯಸಿ ತಾಲೂಕು ಕಚೇರಿಗೆ ಬರುವ ಅರ್ಹ ಫಲಾನುಭವಿಗಳನ್ನು ಮಾನವೀಯ ದೃಷ್ಟಿಯಿಂದ ನೋಡಿ ಕೆಲಸ ಮಾಡಿಕೊಡಿ. ಕಚೇರಿಯಿಂದ ಕಚೇರಿಗೆ ಅಲೆದಾಡಿಸಬೇಡಿ ಹಾಗೂ ಸೂಕ್ತ ಮಾರ್ಗದರ್ಶನ ನೀಡಿ ಎಂದ ಅವರು, ಕೆಲಸ ಆಗುವುದಾದರೆ ಆಗುತ್ತದೆ ಎಂದು ಸ್ಪಷ್ಟವಾಗಿ ಹೇಳಿ. ಕೆಲಸ ಆಗುವುದಿಲ್ಲ ಎಂದಾದರೆ ವಿನಾಕಾರಣ ಜನರನ್ನು ಅಲೆಸಬೇಡಿ ಎಂದರು.
ಸಾರ್ವಜನಿಕರ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ತಡೆ ಹಿಡಿವ ಕೆಲಸ ತಾಲೂಕು ಕಚೇರಿಯಿಂದ ಆಗಬಾರದು. ಹಾಗೆಯೇ ಕಚೇರಿ ಕೆಲಸಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡದೆ, ಸಾರ್ವಜನಿಕರು ಕಚೇರಿಯಿಂದ ಹಿಂದಿರುಗುವಂತೆ ನೋಡಿಕೊಳ್ಳುವ ಹೊಣೆ ಕಚೇರಿ ಅಧಿಕಾರಿಗಳದ್ದು, ಕಚೇರಿಗೆ ನಾನು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ. ಒಂದು ವೇಳೆ ಸಾರ್ವಜನಿಕರಿಗೆ ಅಧಿಕಾರಿಗಳಿಂದ ತೊಂದರೆಯಾಗುತ್ತಿರುವುದು ಕಂಡು ಬಂದರೆ ಅಂತಹ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕೈಗೊಳ್ಳುತ್ತನೆ ಎಂದು ಎಚ್ಚರಿಸಿದರು.
ತಹಸೀಲ್ದಾರ್ ಕೊಟ್ರೇಶ್ ್ತ ರೆವಿನ್ಯೂ ಇನ್ಸ್ಪೆಕ್ಚರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

