25 ಎಕರೆ ಸರ್ಕಾರಿ ಒತ್ತುವರಿ ಭೂಮಿ ತೆರವು
ಸಾಗರ: ತಾಲೂಕಿನ ಬಾಳೂರು ಗ್ರಾಮದಲ್ಲಿ 25ಎಕರೆ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ರೈತರನ್ನು ಹೊಸನಗರ ತಾಲೂಕಿನ ಉಪವಿಭಾಗಧಿಕಾರಿ ಡಾ. ಉದಯ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಭಾನುವಾರ ತೆರವುಗೊಳಿಸಲಾಯಿತು.
ಕಳೆದ 15 ದಿನಗಳ ಹಿಂದೆಯೇ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ರೈತರಿಗೆ ಒತ್ತುವರಿ ಜಾಗವನ್ನು ತೆರುವುಗೊಳಿಸುವಂತೆ ಅಧಿಕಾರಿಗಳು ಸೂಚಿಸಿದ್ದರು. ಈ ಆದೇಶದ ಹೊರತಾಗಿಯೂ ರೈತರು ತೆರವುಗೊಳಿಸದ ಹಿನ್ನೆಲೆಯಲ್ಲಿ ನೇರವಾಗಿ ಹೊಸನಗರ ಉಪವಿಭಾಗಧಿಕಾರಿ ಕಂದಾಯ ಅಧಿಕಾರಿಗಳ ಸಹಯೋಗದೊಂದಿಗೆ ಭಾನುವಾರ ತೆರವುಗೊಳಿಸಿದ್ದು, ರೈತರ ಮೇಲೆ ಭೂಕಂದಾಯ ಕಾಯ್ದೆ 192(ಎ)ಪ್ರಕಾರ ಪ್ರಕರಣ ದಾಖಲಿಸಲಾಗಿದೆ.
ಈ ವೇಳೆ ಮಾತನಾಡಿದ ಹೊಸನಗರ ತಾಲೂಕಿನ ಉಪವಿಭಾಗಧಿಕಾರಿ ಡಾ. ಉದಯ ಕುಮಾರ್ ಶೆಟ್ಟಿ, ಅಕ್ರಮ-ಸಕ್ರಮ ಯೋಜನೆಯಲ್ಲಿ ಭೂಮಿ ಪಡೆದುಕೊಂಡ ರೈತರನ್ನು ಹೊರತು ಪಡಿಸಿ ಉಳಿದ, ಅಂದರೆ ಹೊಸದಾಗಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ರೈತರನ್ನು ಒಕ್ಕಲೆಬ್ಬಿಸಲಾಗಿದೆ. ಅಲ್ಲದೇ ಈ ಜಾಗದಲ್ಲಿ ಮರಗಳನ್ನು ಕಡಿದಿದ್ದರೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

