ಡೆಂಘೀ ಜ್ವರಕ್ಕೆ ಮಹಿಳೆ ಬಲಿ
ಶಿವಮೊಗ್ಗ: ಡೆಂಘೀ ಜ್ವರದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಭಾನುವಾರ ನಡೆದಿದೆ.
ಲಕ್ಕವಳ್ಳಿಯ ಸರೋಜಮ್ಮ(68) ಮೃತಪಟ್ಟವರು. ಇವರು ಕಳೆದ 25 ದಿನಗಳಿಂದ ನಿಮೋನಿಯಾದಿಂದ ಬಳಲುತ್ತಿದ್ದು, ನಗರದ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದರು. ಇವರಿಗೆ ಡೆಂಘೀ ರೋಗದ ಶಂಕೆ ಇತ್ತು ಎನ್ನಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.
ಇದೇ ವೇಳೆ ಮೃತ ಸರೋಜಮ್ಮ ಅವರ ಕುಟುಂಬ ಸದಸ್ಯರು ಆಸ್ಪತ್ರೆಯ ಬಿಲ್ ಹೆಚ್ಚಾಗಿದೆ ಎಂದು ಆರೋಪಿಸಿ ಕೆಲ ಸಮಯ ಆಸ್ಪತ್ರೆಯ ಆವರಣದಲ್ಲಿ ಗೊಂದಲ ಉಂಟಾದ ಘಟನೆ ಕೂಡ ನಡೆಯಿತು.
ಅಪಘಾತ: ವ್ಯಕ್ತಿ ಸಾವು
ತೀರ್ಥಹಳ್ಳಿ: ಬಸ್ಸಿನಿಂದ ಪಾರ್ಸೆಲ್ ತೆಗೆದುಕೊಳ್ಳುತ್ತಿದ್ದ ಸಮಯದಲ್ಲಿ ಹಿಂಬದಿಯಿಂದ ರಿವರ್ಸಿನಲ್ಲಿ ಬಂದ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಆರ್. ವಿಶ್ವನಾಥ್(32) ತೀವ್ರ ಗಾಯಗೊಂಡು ಮುಣಿಪಾಲ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯದಲ್ಲಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನೆಡೆದಿದೆ.
ತೀರ್ಥಹಳ್ಳಿಯ ಮುಖ್ಯ ಬಸ್ಸು ನಿಲ್ದಾಣದಲ್ಲಿ ಈ ಅಪಘಾತ ಸಂಭವಿಸಿದ್ದು, ಉಡುಪಿ ಕಡೆಯಿಂದ ಬಂದ ಖಾಸಗಿ ಬಸ್ಸಿನಿಂದ ಪಾರ್ಸೆಲ್ ತೆಗೆದುಕೊಳ್ಳಲು ಕೆ.ಆರ್. ವಿಶ್ವನಾಥ್ ಬಂದಿದ್ದ ವೇಳೆ ಇನ್ನೊಂದು ಖಾಸಗಿ ಬಸ್ಸು ರಿವರ್ಸ್ ಬಂದು ಅಪಘಾತ ಸಂಭವಿಸಿದ್ದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇವರು ಹಾಸನ ಮೂಲದವರಾಗಿದ್ದು, ತೀರ್ಥಹಳ್ಳಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ. ತೀರ್ಥಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

