ಇಂದು ರಾಷ್ಟ್ರೀಯ ಪ್ರೌಢಶಾಲೆ ಸುವರ್ಣ ಮಹೋತ್ಸವ
ಕ.ಪ್ರ.ವಾರ್ತೆ, ತೀರ್ಥಹಳ್ಳಿ: ಮಾ.1:
ಶನಿವಾರ ಕೋಣಂದೂರು ರಾಷ್ಟ್ರೀಯ ಪೌಢಶಾಲೆಯ ಸುವರ್ಣ ಮಹೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ತಾಲೂಕಿನ ಕೋಣಂದೂರಿನ ರಾಷ್ಟ್ರೀಯ ಪ್ರೌಢಶಾಲೆ 50 ವರ್ಷ ತುಂಬಿದ ಸವಿ ನೆನಪಿಗೆ ಸುವರ್ಣ ಮಹೋತ್ಸವ ಹಮ್ಮಿಕೊಳ್ಳಲಾಗಿದ್ದು, ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷ ಜಿ. ನಂಜುಂಡಯ್ಯ ಸಮಾರಂಭದ ಅಧ್ಯಕ್ಷತೆ ವಹಿಸುವರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸಮಾರಂಭ ಉದ್ಘಾಟಿಸುವರು. ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಶಾಸಕ ಕಿಮ್ಮನೆ ರತ್ನಾಕರ್ ಸನ್ಮಾನಿಸುವರು. ಎಂಪಿಎಂ ಅಧ್ಯಕ್ಷ ಆರಗ ಜ್ಞಾನೇಂದ್ರ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷರಾಗಿದ್ದು, ಸುವರ್ಣ ಭವನದ ಶಿಲಾನ್ಯಾಸ ನೆರವೇರಿಸುವರು.
ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ ಕಾರ್ಣಿಕ್, ಗ್ರಾಪಂ ಅಧ್ಯಕ್ಷೆ ವಾಣಿ ಸುರೇಶ್, ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ವಿ. ತಿಮ್ಮಯ್ಯ, ಕೋಣಂದೂರಿನ ಎಚ್.ಜಿ. ಗಿರಿರಾಜ್ ಭಾಗವಹಿಸುವರು.
1960ರಲ್ಲಿ ಪ್ರಾರಂಭವಾಗಿ, ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆಯಾಗಿ ಬೆಳೆದಿರುವ ವಿದ್ಯಾಸಂಸ್ಥೆ ಸುವರ್ಣ ಮಹೋತ್ಸವದ ಅಂಗವಾಗಿ ತನ್ನ ಹಳೆಯ ಕಟ್ಟಡವನ್ನು ಹಾಗೇ ಉಳಿಸಿಕೊಂಡು ಅಲ್ಪ ಸ್ವಲ್ಪ ನವೀಕರಿಸಿದೆ. ಸುವರ್ಣ ಮಹೋತ್ಸವ ಸವಿ ನೆನಪಿಗಾಗಿ ಸಾವಿರ ಜನ ಒಮ್ಮೆಲೆ ಕುಳಿತುಕೊಳ್ಳಬಹುದಾದ ಬೃಹತ್ ಸಭಾ ಭವನ ನಿರ್ಮಿಸಲು ಮುಂದಾಗಿದೆ.
ಸುಮಾರು 75 ಲಕ್ಷರು. ವೆಚ್ಚದಲ್ಲಿ ಭವನ ನಿರ್ಮಾಣಕ್ಕೆ ನೀಲಿನಕ್ಷೆ ತಯಾರಿಸಲಾಗಿದ್ದು, ಆರಗ ಜ್ಞಾನೇಂದ್ರ ಸುವರ್ಣ ಶಿಲಾಭವನದ ಶಿಲಾನ್ಯಾಸ ನೆರವೇರಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

