ಶಿವಮೊಗ್ಗ

ಸಾಹಿತ್ಯ ಇನ್ನಷ್ಟು ವೃದ್ಧಿಸಲಿ

Published On :

ಶಿವಮೊಗ್ಗ: ದೇಶದ ಸಾಹಿತ್ಯ ಕ್ಷೇತ್ರ ಮತ್ತಷ್ಟು ಅಭಿವೃದ್ಧಿ ಹೊಂದಬೇಕಿದೆ ಎಂದು ಕುವೆಂಪು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಎಸ್.ಎ. ಬಾರಿ ಅಭಿಪ್ರಾಯಪಟ್ಟರು.
ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕುವೆಂಪು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಸಹ್ಯಾದ್ರಿ ಕಲಾ ಮತ್ತು ವಾಣಿಜ್ಯ ಕಾಲೇಜು ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಅಂತರ ಕಾಲೇಜು ವಿದ್ಯಾರ್ಥಿಗಳ ಕನ್ನಡ ಸಾಹಿತ್ಯ ಸಂಸ್ಕೃತಿ ಸಮ್ಮೇಳನದಲ್ಲಿ ಅವರು, ಪ್ರಸ್ತುತ ಭಾರತ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿದೆ. ಈ ನಿಟ್ಟಿನಲ್ಲಿ ಸಾಹಿತ್ಯ ಕ್ಷೇತ್ರವು ಅಭಿವೃದ್ಧಿ ಹೊಂದಬೇಕು ಎಂದರು.
ದೇಶದ ಸಾಹಿತ್ಯದ ಪಾತ್ರ ಜಾಗತೀಕರಣದೊಂದಿಗೆ ವಿಸ್ತಾರವಾಗಬೇಕು. ಸಾಹಿತ್ಯದ ಸಾಧನೆ ಹೊರತರುವಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚು. ಪ್ರಪಂಚದ ಆಗು- ಹೋಗುಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಬೇಕು. ಇದುವರೆಗೂ ಯಾವುದೇ ವಿಶ್ವವಿದ್ಯಾನಿಲಯ ಇಂತಹ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಆಯೋಜಿಸಿರಲಿಲ್ಲ. ಆದರೆ, ಕುವೆಂಪು ವಿವಿ ಇದನ್ನು ಮಾಡಿ ತೋರಿಸಿದೆ ಎಂದ ಅವರು, ಈ ವೇದಿಕೆ ವಿದ್ಯಾರ್ಥಿಗಳಲ್ಲಿನ ಸಾಹಿತ್ಯ ಕ್ಷೇತ್ರದ ಪ್ರತಿಭೆ ಹೊರತರುವಲ್ಲಿ ಸಹಕಾರಿಯಾಗಲಿದೆ ಎಂದರು.  ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ್, ಕಾಲೇಜು ಶಿಕ್ಷಣ ನಿರ್ದೇಶನಾಲಯದ ಜಂಟಿ ನಿರ್ದೇಶಕ ಪ್ರೊ. ಸುರೇಶ್ ಗುಪ್ತ,  ಡಾ. ಶಕುಂತಲಾ,  ಡಾ. ಎಚ್. ಜಯದೇವಪ್ಪ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.