ಶಿವಮೊಗ್ಗ

ಸಿಟಿ ಸುದ್ದಿ

Published On :

ಅರ್ಜಿ ಆಹ್ವಾನ
ಶಿವಮೊಗ್ಗ: ರುಡ್ ಸೆಟ್ ಸಂಸ್ಥೆಯು ಬ್ರಹ್ಮಾವರದಲ್ಲಿ ಸ್ವಉದ್ಯೋಗ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಸ್ವಉದ್ಯೋಗ ಮಾಡಲು ಆಸಕ್ತಿ ಇರುವ ಅರ್ಹ ನಿರುದ್ಯೋಗಿ ಯುವಕ ಯುವತಿಯರು ತರಬೇತಿಯಲ್ಲಿ ಭಾಗವಹಿಸಬಹುದು. ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಯು 18ರಿಂದ 45 ವರ್ಷ ವಯೋವುತಿಯೊಳಗಿನವರಾಗಿದ್ದು, ಸ್ವ- ಉದ್ಯೋಗ ಆರಂಭಿಸಲು ಉತ್ಸುಕರಾಗಿರಬೇಕು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ಕೆಲವು ತಾಂತ್ರಿಕ ತರಬೇತಿಗಳಿಗೆ ಪ್ರಾಥಮಿಕ ಜ್ಞಾನ ಇದ್ದರೆ ಒಳ್ಳೆಯದು. ಅಭ್ಯರ್ಥಿಗಳು ತರಬೇತಿಯ ಅವದಿಯಲ್ಲಿ ಸಂಸ್ಥೆಯಲ್ಲೆ ಉಳಿದುಕೊಂಡು ತರಬೇತಿಯ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಬಹುದು. ತರಬೇತಿಯು 2013- 14ರ ಸಾಲಿನಲ್ಲಿ ಏಪ್ರಿಲ್‌ನಿಂದ ಆಗಸ್ಟ್ ಮಾಹೆಯಲ್ಲಿ ನಡೆಯಲಿದೆ. ಆಸಕ್ತರು ತಮ್ಮ ಸ್ವಹಸ್ತಾಕ್ಷರದಲ್ಲಿ ಅರ್ಜಿಯನ್ನು ಬರೆದು, ನಿರ್ದೇಶಕರು, ರುಡ್ ಸೆಟ್ ಸಂಸ್ಥೆ, 52ನೇ ಹೇರೂರು, ಬ್ರಹ್ಮಾವರ-576213 ಉಡುಪಿ ಜಿಲ್ಲೆ ಇಲ್ಲಿಗೆ ಸಲ್ಲಿಸಬಹುದಾಗಿದೆ. 0820-2563455
ಇಂದು ಉಪನ್ಯಾಸ
ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ಕಣಾದ ಯೋಗ ಮತ್ತು ರೀಸರ್ಚ್ ಫೌಂಡೇಶನ್ ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ್ 3ರಂದು ನಗರದ ನೆಹರು ಕ್ರೀಡಾಂಗಣದ ಯೋಗ ಮಂದಿರದಲ್ಲಿ ಸಂಜೆ ಮನೆಯ ಮದ್ದು-ರೋಗಕ್ಕೆ ಗುದ್ದು ಉಪನ್ಯಾಸವನ್ನು ನಿವೃತ್ತ ಶಿಕ್ಷಕ ಮಲ್ಲಿಕಾರ್ಜುನಯ್ಯ ನಡೆಸಿಕೊಡಲಿದ್ದಾರೆ ಎಂದು ಅನಿಲ್ ಕುಮಾರ್ ಎಚ್. ಶೆಟ್ಟರ್ ಕೋರಿದ್ದಾರೆ. 9886674375, 9916570686..

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.