ಬಿಜೆಪಿ- ಕಾಂಗ್ರೆಸ್‌ಗೆ ಪೈಪೋಟಿ: ರಾಮಪ್ಪ
ಸಾಗರ: ಇಲ್ಲಿನ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಪೈಪೋಟಿಯಿದ್ದು, ಉಳಿದ ಪಕ್ಷಗಳು ಗಣನೆಗೆ ಬರುವುದಿಲ್ಲ ಎಂದು ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಯು.ಎಚ್. ರಾಮಪ್ಪ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ಈ ಬಾರಿಯೂ ಬಿಜೆಪಿ ನಗರಸಭೆ ಅಧಿಕಾರ ಹಿಡಿಯುವುದು ನಿಶ್ಚಿತವಾಗಿದ್ದು, 31 ವಾರ್ಡ್‌ಗಳ ಪೈಕಿ 22 ವಾರ್ಡ್‌ಗಳಲ್ಲಿ ಬಿಜೆಪಿ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಳೆದ ಬಾರಿ ಬಿಜೆಪಿ ಮೇಲೆ ವಿಶ್ವಾಸವಿರಿಸಿ ಜನರು ಬಹುಮತ ನೀಡಿ ಅಧಿಕಾರ ನೀಡಿದ್ದರು. ಆದರೆ ಕೆಲವರು ವೈಯಕ್ತಿಕ ಪ್ರತಿಷ್ಠೆಗಾಗಿ ಬಿಜೆಪಿಯ ತತ್ವಸಿದ್ದಾಂತವನ್ನು ಗಾಳಿಗೆ ತೂರಿ ಜನವಿರೋಧಿಯಾಗಿ ನಡೆದುಕೊಂಡಿದ್ದಾರೆ. ಈ ಬಾರಿ ಹೊಸವೇಷದೊಂದಿಗೆ ಕೆಜೆಪಿ ಬಾವುಟ ಹಿಡಿದು ಜನರ ಬಳಿಗೆ ಬಂದಿದ್ದು, ಅವರಿಗೆ ಜನರೇ ತಕ್ಕ ಪಾಠ ಕಲಿಸಬೇಕು ಎಂದರು.
ತುಮರಿ ಸೇತುವೆ ನಿರ್ಮಾಣಕ್ಕೆ ಈಗಾಗಲೇ ಚಾಲನೆ ಸಿಕ್ಕಿದ್ದು, ಮುಖ್ಯಮಂತ್ರಿಗಳು ಹಸಿರು ನಿಶಾನೆ ತೋರಿಸಿದ್ದಾರೆ. ಸೇತುವೆ ನಿರ್ಮಾಣ ಕಾಮಗಾರಿಯನ್ನು ಆರ್ಥಿಕ ಇಲಾಖೆಯಿಂದ ಎರಡನೇ ಕಂತಾಗಿ 50 ಕೋಟಿ ಹೆಚ್ಚುವರಿ ಒದಗಿಸಿದ್ದಾರೆ. ಶೀಘ್ರದಲ್ಲಿಯೆ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು, ಮುಖ್ಯಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ಬಿ. ಭಾನುಪ್ರಕಾಶ್ ಸೇತುವೆ ನಿರ್ಮಾಣ ಕುರಿತು ಮುಖ್ಯಮಂತ್ರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದರು. ಶರಾವತಿ ಸಿ. ರಾವ್, ಯುವ ಘಟಕದ ಅಧ್ಯಕ್ಷ ಚೇತನ್ ರಾವ್, ವ.ಶಂ. ರಾಮಚಂದ್ರ ಭಟ್, ಚಂದ್ರಕಾಂತ ಜಿಂಗಾಡೆ, ಶ್ರೀಧರ್, ಸತ್ಯನಾರಾಯಣ್, ರಾಜು ಮಡಿವಾಳ, ತ್ಯಾಗಮೂತರ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

