ಅವಹೇಳನ ಮಾಡಿದವರಿಗೆ ಚುನಾವಣೆಯಲ್ಲಿ ತಕ್ಕ ಉತ್ತರ
ಕ.ಪ್ರ.ವಾರ್ತೆ, ಸಾಗರ ಮಾ.4
ತಮ್ಮನ್ನು ಹಾಗೂ ಪಕ್ಷವನ್ನು ಅವಹೇಳನ ಮಾಡುತ್ತಿರುವ ಬಿಜೆಪಿ ಸೇರಿದಂತೆ ವಿಪಕ್ಷಗಳಿಗೆ ಸ್ಥಳೀಯ ಸಂಸ್ಥೆ ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜನರು ತಕ್ಕ ಉತ್ತರ ನೀಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಪಟ್ಟಣದಲ್ಲಿ ಸೋಮವಾರ ಕೆಜೆಪಿ ಕಾರ್ಯಕರ್ತರ ಸಭೆಯಲ್ಲಿ, ಈ ಚುನಾವಣೆಯಲ್ಲಿ ಬಿಜೆಪಿ ಬೋರ್ಡ್ ಹಾಗೂ ವಿಳಾಸ ಎಲ್ಲಿದೆ ಎಂದು ಗೊತ್ತಾಗುತ್ತದೆ ಎಂದು ಹೇಳಿದರು.
ಇನ್ನಿಲ್ಲದಷ್ಟು ಅನುದಾನ: ತಾವು ಮುಖ್ಯಮಂತ್ರಿಯಾಗಿದ್ದಾಗ ಸ್ಥಳೀಯ ಸಂಸ್ಥೆಗಳಿಗೆ ಇನ್ನಿಲ್ಲದಷ್ಟು ಅನುದಾನ ನೀಡಿರುವುದನ್ನು ಪ್ರಾಸ್ತಾಪಿಸಿದ ಯಡಿಯೂರಪ್ಪ, ಎಲ್ಲಿಯೂ ಹೊಸ ತೆರಿಗೆ ಹಾಕಲಿಲ್ಲ. ಸೋರಿಕೆ ತಡೆದು ಖಜಾನೆ ತುಂಬಿಸಿರುವುದನ್ನು ಜನರು ಮರೆಯಬಾರದು ಎಂದರು.
ತಮ್ಮ ಅವಧಿಯಲ್ಲಿ ಸಾಗರ ನಗರಸಭೆ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಲಾಗಿದೆ. ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ, ರಸ್ತೆ ಅಭಿವೃದ್ಧಿ ಹೀಗೆ ಹತ್ತು ಹಲವು ಯೋಜನೆಗೆ ನೂರಾರು ಕೋಟಿ ನೀಡಲಾಗಿದೆ. ಇನ್ನುಳಿದಂತೆ ಸರ್ಕಾರಿ ಬಸ್ ನಿಲ್ದಾಣದ ಪಕ್ಕದಲ್ಲಿಯೇ ಖಾಸಗಿ ಬಸ್ ನಿಲ್ದಾಣ ಸ್ಥಾಪನೆಯಾಗಬೇಕು ಎನ್ನುವ ನಾಗರಿಕರ ಬೇಡಿಕೆಯನ್ನು ಕೆಜೆಪಿ ಅಧಿಕಾರಕ್ಕೆ ಬಂದರೆ ತಕ್ಷಣ ಅನುಷ್ಠಾನಗೊಳಿಸುತ್ತದೆ ಎಂದು ಭರವಸೆ ನೀಡಿದರು.
ಮಾಜಿ ಸಚಿವ ಕೆ.ಎಚ್. ಶ್ರೀನಿವಾಸ್, ಗುರುಮೂರ್ತಿ, ಶಿಕಾರಿಪುರ, ಬಿ.ಆರ್. ಜಯಂತ್, ಅನಂತರಾಮು, ಟಿ.ಡಿ. ಮೇಘರಾಜ್, ವಿ. ಮಹೇಶ್, ಸರಸ್ವತಿ ನಾಗರಾಜ್, ರತ್ನಾಕರ ಶೇಟ್, ವಾದಿರಾಜ್, ಎಲ್ಲ ಅಭ್ಯರ್ಥಿಗಳು ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

