ಅಕ್ರಮ ಮದ್ಯ ಸಾಗಾಟ: ಆರೋಪಿ ಬಂಧನ
ಕ.ಪ್ರ. ವಾರ್ತೆ, ಶಿವಮೊಗ್ಗ, ಮಾ.5
ಚುನಾವಣಾ ಹಿನ್ನೆಲೆಯಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಆರೋಪಿಯೊಬ್ಬನನ್ನು ಅಬಕಾರಿ ಇಲಾಖೆ ಸಿಬ್ಬಂದಿಗಳು ಬಂಧಿಸಿದ ಘಟನೆ ಮಂಗಳವಾರ ಸಂಜೆ ನಗರದ ನ್ಯೂಮಂಡ್ಲಿ ಬಳಿ ನಡೆದಿದೆ.
ಜಿಲ್ಲಾ ವಿಚಕ್ಷಣದಳ ರಸ್ತೆ ಕಾವಲು ನಡೆಸುತ್ತಿದ್ದ ವೇಳೆ ಘಟನೆ ನಡೆದಿದ್ದು, ಎಸ್. ವೆಂಕಟೇಶ್ ರೆಡ್ಡಿ ಎಂಬತಾನನ್ನು ಬಂಧಿಸಲಾಗಿದೆ. ಮೂಲತಃ ಶಾಂತಿನಗರದ ನಿವಾಸಿಯಾಗಿದ್ದು, ತನ್ನ ಆಟೋದಲ್ಲಿ 10 ಬಾಕ್ಸ್ ಮದ್ಯವನ್ನು ಸಾಗಿಸುತ್ತಿದ್ದನು.
ಜಿಲ್ಲಾ ವಿಚಕ್ಷಣದಳ ಆಟೋ ತಡೆದು ಪರಿಶೀಲನೆ ನಡೆಸಿ, ತನಿಖೆಗೆ ಒಳಪಡಿಸಿದೆ. ಆರೋಪಿ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಸಾಗಾಟ ಮಾಡುತ್ತಿದನ್ನೋ ಅಥವಾ ಬೇರೆ ಕಾರಣಕ್ಕೆ ಸಾಗಾಟ ಮಾಡುತ್ತಿದನ್ನೋ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ಆರೋಪಿಯನ್ನು ಮಾರ್ಚ್ 19ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ಕನ್ನಡ ಪ್ರಭಕ್ಕೆ ತಿಳಿಸಿದ್ದಾರೆ. ಆರೋಪಿಯಿಂದ ಆಟೋ ಹಾಗೂ ಮದ್ಯ ವಶಪಡಿಸಿಕೊಂಡಿದ್ದು, ಇವುಗಳ ಮೌಲ್ಯ ಸುಮಾರು 1.5 ಲಕ್ಷ ಎಂದು ಅಂದಾಜಿಸಲಾಗಿದೆ. ಪ್ರಕರಣ ಅಬಕಾರಿ ಉಪ ಆಯುಕ್ತರ ಕಚೇರಿಯಲ್ಲಿ ದಾಖಲಾಗಿದೆ. ಕಾರ್ಯಚರಣೆಯಲ್ಲಿ ಅಬಕಾರಿ ನಿರೀಕ್ಷಕ ಹನುಮಂತಪ್ಪ, ಸಿಬ್ಬಂದಿಗಳಾದ ಮಂಜಪ್ಪ, ಚಂದ್ರಪ್ಪ, ವೆಂಕಟೇಶ್ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

