ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಸಾರ್ವತ್ರಿಕ ರಜೆ
ಶಿವಮೊಗ್ಗ: ಮಾರ್ಚ್ 7ರಂದು ಸ್ಥಳೀಯ ಸಂಸ್ಥೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ, ಚುನಾವಣೆ ನಡೆಯುವ ವ್ಯಾಪ್ತಿಯಲ್ಲಿ ಅಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ರಾಜ್ಯದ 30 ಜಿಲ್ಲೆಗಳ 201 ಸ್ಥಳೀಯ ಸಂಸ್ಥೆ ಹಾಗೂ 7 ಮಹಾನಗರ ಪಾಲಿಕೆಯ ಚುನಾವಣೆ ನಡೆಯುತ್ತಿದೆ.
ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾಯ ಮತ ಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಸರ್ಕಾರ ಆಯಾಯ ಚುನಾವಣಾ ಕ್ಷೇತ್ರಗಳಲ್ಲಿ 7ರಂದು ಸಾರ್ವತ್ರಿಕ ರಜೆಯನ್ನು ಸರ್ಕಾರ ಘೋಷಿಸಿದೆ. ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ.
ರಾಷ್ಟ್ರೀಕೃತ ಬ್ಯಾಂಕುಗಳು, ಇತರೆ ಬ್ಯಾಂಕುಗಳು, ಜೀವ ವಿಮಾ ನಿಗಮ ಮುಂತಾದ ಕಚೇರಿಗಳಿಗೆ ಸೀಮಿತಗೊಳಿಸಿ ಸರ್ಕಾರ ಸಾರ್ವಜನಿಕ ರಜೆ ಘೋಷಿಸಿದೆ.
ಹಾಗೆಯೇ ಯಾವುದೇ ಬಿಸಿನೆಸ್ ಟ್ರೇಡ್, ಇಂಡಸ್ಟ್ರಿಯಲ್ ಅಂಡರ್ ಟೇಕಿಂಗ್ ಅಥವಾ ಇನ್ನಿತರ ಎಸ್ಟಾಬ್ಲಿಷ್ಮೆಂಟ್ಗಳಲ್ಲಿ ಮತ್ತು ದಿನಗೂಲಿ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರು ಮತದಾನದ ದಿನದಂದು ವೇತನ ಸಹಿತ ರಜೆಗೆ ಅರ್ಹರಿರುತ್ತಾರೆ. ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗಬೇಕೆಂದು ಸೂಚಿಸಲಾಗಿದೆ.
ಮತದಾನ ಸುಸೂತ್ರವಾಗಿ ನಡೆಯಲು ಅನುಕೂಲವಾಗುವಂತೆ ಮತದಾನ ನಡೆಯುವ ಮತಗಟ್ಟೆಯನ್ನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಶಾಲೆಗಳಲ್ಲಿ ಸ್ಥಾಪಿಸಿದಲ್ಲಿ ಅಂತಹ ಕಚೇರಿ ಹಾಗೂ ಶಾಲೆಗಳಿಗೆ ಮಾ.6 ರಂದು ಬುಧವಾರ (ಪೂರ್ವ ತಯಾರಿಗಾಗಿ) ಹಾಗೂ ಮತ ಎಣಿಕೆ ನಡೆಯುವ ದಿನಾಂಕದಂದು ಮತ ಎಣಿಕೆ ನಡೆಯುವ ಕೇಂದ್ರಗಳಿಗೆ ಮಾತ್ರ ರಜೆ ಘೋಷಿಸುವ ಅವಶ್ಯಕತೆ ಇದ್ದಲ್ಲಿ ಸಂಬಂಧಪಟ್ಟ ಚುನಾವಣಾಧಿಕಾರಿಗಳು ಕ್ರಮ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

