ಸೇತುವೆ ನಿರ್ಮಾಣಕ್ಕೆ 50 ಕೋಟಿ
ಸಾಗರ: ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ನಿರ್ಮಾಣ ಕಾಮಗಾರಿಗೆ ಆರ್ಥಿಕ ಇಲಾಖೆಯಿಂದ ಎರಡನೆಯ ಕಂತಿನ ಪೂರಕ ಅಂದಾಜು ಮೊತ್ತ ರು. 50 ಕೋಟಿ ಹಣ ಬಿಡುಗಡೆ ಮಾಡಿರುವುದಾಗಿ ಲೋಕೋಪಯೋಗಿ ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ರಸ್ತೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ಸದರಿ ಸೇತುವೆ ಕಾಮಗಾರಿಗೆ ಚಾಲನೆ ನೀಡುವ ಜೊತೆಗೆ ಮುಂದೆ ಕಾಮಗಾರಿಯ ಅನುಷ್ಠಾನದ ಪ್ರಗತಿಗೆ ಅನುಗುಣವಾಗಿ ಅನುದಾನದ ಬಿಡುಗಡೆಗಾಗಿ ಕೋರಿಕೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಲೋಕೋಪಯೋಗಿ ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಜಯ ಭೀ. ಚಂದಾಪುರ ಪತ್ರದಲ್ಲಿ ತಿಳಿಸಿದ್ದಾರೆ.
ಹಿನ್ನೀರಿನ ಜನರ ಬಹಳ ಕಾಲದ ಹೋರಾಟಕ್ಕೆ ಸ್ಪಂದಿಸಿ ಸೇತುವೆ ನಿರ್ಮಾಣಕ್ಕೆ ಎರಡನೆ ಕಂತಿನ ಹಣ ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರಕ್ಕೆ ಬಿಜೆಪಿ ಘಟಕ, ಶರಾವತಿ ಹಿನ್ನೀರು ಪ್ರದೇಶ ಅಭಿವೃದ್ಧ್ದಿ ಹೋರಾಟ ಸಮಿತಿ ಅಭಿನಂದನೆ ಸಲ್ಲಿಸಿದೆ.
ಕೈಗಾರಿಕಾ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚನೆ
ಶಿವಮೊಗ್ಗ: ಕರ್ನಾಟಕ ಚುನಾವಣಾ ಆಯೋಗವು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮಾ.7ರಂದು ನಡೆಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಕೈಗಾರಿಕಾ ಸಂಸ್ಥೆಗಳ ಮುಖ್ಯಸ್ಥರಿಗೆ ಕಾರ್ಮಿಕ ಇಲಾಖೆಯೂ ಸೂಚನೆಯೊಂದನ್ನು ನೀಡಿದೆ.
ಮತದಾನದ ದಿನದಂದು ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಾರ್ಖಾನೆಗಳು, ಕೈಗಾರಿಕಾ ಸಂಸ್ಥೆಗಳು ಮತ್ತು ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಮತದಾನದ ಕ್ಷೇತ್ರಗಳಲ್ಲಿ ತಮ್ಮ ಸಂವಿಧಾನಾತ್ಮಕ ಹಕ್ಕಾದ ಮತ ಚಲಾಯಿಸಲು ಅನುಕೂಲವಾಗುವಂತೆ ಕಾರ್ಮಿಕರಿಗೆ ವೇತನ ಸಹಿತ ಅನುಮತಿ ನೀಡುವಂತೆ ಕೈಗಾರಿಕಾ ಘಟಕಗಳ ಮಾಲೀಕರಿಗೆ ಕಾರ್ಮಿಕ ಇಲಾಖೆ ಆಯುಕ್ತ ಹರ್ಷಗುಪ್ತಾ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

