ಸಂಗಮೇಶ್ ಕೃತಜ್ಞತೆ
ಕನ್ನಡಪ್ರಭ ವಾರ್ತೆ, ಭದ್ರಾವತಿ, ಮಾ.7
ಗುರುವಾರ ನಡೆದ ಭದ್ರಾವತಿ ನಗರಸಭೆಯ ಚುನಾವಣೆಯಲ್ಲಿ ಶಾಂತಿಯುತ ಮತದಾನ ನಡೆಸಿದ್ದಕ್ಕಾಗಿ ಶಾಸಕ ಬಿ.ಕೆ.ಸಂಗಮೇಶ್ವರ ಅವರು ಭದ್ರಾವತಿಯ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಗುರುವಾರ ಸಂಜೆ ಅವರ ಗೃಹಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಕಾಂಗ್ರೆಸ್ ನಗರಸಭೆಯಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯುವುದು ಖಚಿತ ಎಂದರು.
ತಾವು ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾಗ ಜೆಡಿಎಸ್ ಕಾರ್ಯಕರ್ತರು ಅನುಚಿತವಾಗಿ ನಡೆದುಕೊಂಡ ಬಗ್ಗೆ ವಿಷಾದ ವ್ಯಕ್ತಪಡಿಸಿದ ಅವರು, ಎಲ್ಲಿ ಪಕ್ಷದ ಅಭ್ಯರ್ಥಿ ಅಸಮರ್ಥನೆಂದು ಕಂಡುಬರುವುದೋ ಅಂತಹ ವಾರ್ಡುಗಳಲ್ಲಿ ಮತದಾರರನ್ನು ಬೆದರಿಸುವುದು ಮತ್ತು ಮಾನಸಿಕವಾಗಿ ಪೀಡಿಸುವುದು ಮುಂತಾದ ಕೃತ್ಯದಲ್ಲಿ ತೊಡಗಿದ ಜೆಡಿಎಸ್ ಕಾರ್ಯಕರ್ತರಿಗೆ ಮತದಾರರು ಈ ಬಾರಿಯ ನಗರಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿರುವರು ಎಂದರು.
ಜೆಡಿಎಸ್ ಕಾರ್ಯಕರ್ತರ ಮೇಲೆ ತಾವು ಪೋಲಿಸರಿಗೆ ದೂರು ನೀಡಿದರೆ ನಗರದಲ್ಲಿ ಮತ್ತಷ್ಟು ಗಲಭೆ ಹೆಚ್ಚಾಗುವ ಸಾಧ್ಯತೆ ಇದ್ದುದರಿಂದ ದೂರು ನೀಡಲಿಲ್ಲವೆಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕಾಂಗ್ರೆಸ್ಗೇ ಅಧಿಕಾರ: ಎಐಸಿಸಿ ಸದಸ್ಯೆ ಬಲ್ಕಿಶ್ಬಾನು, ಶಾಸಕರ ಅಭಿವೃದ್ಧಿ ಕಾರ್ಯ, ಸ್ವಚ್ಛತೆ ಮತ್ತು ನಗರ ನೈರ್ಮಲ್ಯದ ಬಗ್ಗೆ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಕಾಂಗ್ರೆಸ್ ಈ ಬಾರಿ ನಗರಸಭೆಯ ಗದ್ದುಗೆ ಹಿಡಿಯುವುದು ಖಚಿತ ಹಾಗೂ ಇದು ಮುಂದಿನ ವಿಧಾನಸಭಾ ಚುನಾವಣೆಯ ಅಡಿಪಾಯ ಸಹ ಎಂದು ಅವರು ಅಭಿಪ್ರಾಯಪಟ್ಟರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

