ಅಭ್ಯರ್ಥಿಗಳ ಮೇಲೆ ಹಲ್ಲೆ: ಆಸ್ಪತ್ರೆಗೆ ದಾಖಲು
ಸಾಗರ: ಇಲ್ಲಿನ ನಗರಸಭೆ ಚುನಾವಣೆ ಮತದಾನಕ್ಕೆ ಸಂಬಂಧಪಟ್ಟಂತೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದು ಪಕ್ಷೇತರ ಅಭ್ಯರ್ಥಿ ದೀಪಾ ಪರಮೇಶ್ವರ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ವೀಣಾ ಪರಮೇಶ್ವರ್ ಹಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಗರಸಭೆ 19ನೇ ವಾರ್ಡ್‌ನಲ್ಲಿ ಚುನಾವಣೆ ವೇಳೆ ಎರಡು ಗುಂಪುಗಳ ನಡುವೆ ಸಣ್ಣಪುಟ್ಟ ಗಲಾಟೆ ನಡೆದಿತ್ತು. ಪೊಲೀಸರ ಮಧ್ಯಪ್ರವೇಶದಿಂದ ಗಲಾಟೆ ತಹಬಂದಿಗೆ ಬಂದಿತು.
ಶುಕ್ರವಾರ ಬೆಳಿಗ್ಗೆ ಪಕ್ಷೇತರ ಅಭ್ಯರ್ಥಿ ದೀಪಾ ಪರಮೇಶ್ವರ ಹಾಗೂ ಸಹೋದರಿ ಪುತ್ರಿ ರವಿ ಎಂಬುವವರ ಜೊತೆ ಕಂಬಳಿಕೊಪ್ಪ ಕೆರೆದಂಡೆಯ ಮೇಲೆ ಹೋಗುತ್ತಿದ್ದಾಗ ಕಾಂಗ್ರೆಸ್ ಅಭ್ಯರ್ಥಿ ವೀಣಾ ಪರಮೇಶ್ವರ ಕಡೆಯ 10 ಜನರ ಗುಂಪು ಏಕಾಏಕಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಹಲ್ಲೆಗೊಳಗಾದ ದೀಪಾ ಪರಮೇಶ್ವರ್ ಲರ್ಕಾರಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ವೀಣಾ ಪರಮೇಶ್ವರ್ ಅವರ ಮೇಲೆ ಕಾಂಗ್ರೆಸ್ ಅಭ್ಯರ್ಥಿ ಕಡೆಯವರು ಪುನಃ ಆಸ್ಪತ್ರೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಎರಡು ಗುಂಪಿನವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಸಂಬಂಧ ಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

