ಕುಡಿಯುವ ನೀರಿಗೆ ಒತ್ತಾಯಿಸಿ ಪ್ರತಿಭಟನೆ
ಕಪ್ರ ವಾರ್ತೆ, ಶಿವಮೊಗ್ಗ, ಮಾ.8
ಕುಡಿಯುವ ನೀರಿಗೆ ಒತ್ತಾಯಿಸಿ ಆಯನೂರು ಕೋಟೆ ಗ್ರಾಮಸ್ಥರು ಶುಕ್ರವಾರ ಗ್ರಾಮ ಪಂಚಾಯ್ತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಕಳೆದೆರಡು ತಿಂಗಳಿಂದ ಸರಿಯಾಗಿ ನೀರು ಸರಬರಾಜು ಆಗುತ್ತಿಲ್ಲ. 2-3 ದಿನಕ್ಕೊಮ್ಮೆಯೂ ನೀರು ಸಿಗುತ್ತಿಲ್ಲ. ಬಂದರೂ ಒಂದೆರಡು ಕೊಡಗಳಿಗೆ ಮಾತ್ರ ಸೀಮಿತ. ಮನೆ ಬಳಕೆಗೆ ನೀರು ಸಾಕಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯರಸ್ತೆಯಲ್ಲಿ ಮೆರವಣಿಗೆ ನಡೆಸಿದ ಗ್ರಾಮಸ್ಥರು ಗ್ರಾಮ ಪಂಚಾಯ್ತಿ ಕಚೇರಿಗೆ ತೆರಳಿದಾಗ ಕಚೇರಿಯಲ್ಲಿ ಯಾರೂ ಇರಲಿಲ್ಲ. ಇದರಿಂದ ಆಕ್ರೋಶಗೊಂಡ ಅವರು ಕಚೇರಿಗೆ ಬೀಗ ಜಡಿದರು. ಕೆಲಕಾಲ ರಸ್ತೆತಡೆ ನಡೆಸಿದರು. ಪೊಲೀಸರು ಮಧ್ಯೆ ಪ್ರವೇಶಿಸಿ ರಸ್ತೆತಡೆ ತೆರವುಗೊಳಿಸಿದರು. ಆದರೆ ಅಧಿಕಾರಿಗಳು ಬಾರದೆ ಮುತ್ತಿಗೆ ಹಿಂತೆಗೆಯುವುದಿಲ್ಲ ಎಂದು ಪಟ್ಟು ಹಿಡಿದರು.
ಗ್ರಾಪಂ ಕಾರ್ಯದರ್ಶಿ ಆಗಮಿಸಿದರೂ ಪಟ್ಟುಬಿಡದ ಪ್ರತಿಭಟನಾಕಾರರು ತಾಪಂ ಕಾರ್ಯನಿರ್ವಹಣಾಧಿಕಾರಿಯೇ ಬರಬೇಕೆಂದು ಒತ್ತಾಯಿಸಿದರು.
ಮಧ್ಯಾಹ್ನದ ವೇಳೆಗೆ ಸ್ಥಳಕ್ಕೆ ಆಗಮಿಸಿದ ಇಓ ಜಯಕುಮಾರ್ ಎ.ಟಿ. ಹಾಗೂ ಎಂಜಿನಿಯರ್ ಸಂಗಪ್ಪ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ಸಮಸ್ಯೆಯನ್ನು ಶೀಘ್ರ ಬಗೆಹರಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

