ಶಿವಮೊಗ್ಗ

ವಿಜ್ಞಾನ ಬರಹಗಾರರ ತರಬೇತಿ ಶಿಬಿರ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ಮಾ.8
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಹಯೋಗದೊಂದಿಗೆ ಏಪ್ರಿಲ್ ಮೊದಲ ಅಥವಾ ಎರಡನೇ ವಾರದಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ರಾಜ್ಯದ ಉದಯೋನ್ಮುಖ ಕನ್ನಡ ಬರಹಗಾರರಿಗೆ, ಕಾರ್ಯನಿರತ ವಿಜ್ಞಾನ ಪತ್ರಿಕೋದ್ಯಮಿಗಳಿಗೆ ಹಾಗೂ ವರದಿಗಾರರಿಗೆ ಜನಪ್ರಿಯ ವಿಜ್ಞಾನ ಬರವಣಿಗೆ ಕುರಿತು 5 ದಿನಗಳ ತರಬೇತಿ ಶಿಬಿರ ಏರ್ಪಡಿಸಲು ಉದ್ದೇಶಿಸಿದೆ.
   ಈ ಶಿಬಿರದಲ್ಲಿ ವಿಜ್ಞಾನ ವಿಷಯದಲ್ಲಿ ಆಸಕ್ತಿ ಹೊಂದಿರುವ ಗ್ರಾಮೀಣ ಭಾಗದ ವಿಜ್ಞಾನ ಶಿಕ್ಷಕರು, ಯುವ ಪತ್ರಿಕಾ ವರದಿಗಾರರು, ಚಿತ್ರ ನಿರೂಪಕರು, ರೇಡಿಯೋ ಭಾಷಣಕಾರರು ಮತ್ತಿತರ ಆಸಕ್ತರು ಭಾಗವಹಿಸಬಹುದಾಗಿದೆ.
   ಈ ಶಿಬಿರದಲ್ಲಿ ನುರಿತ ವಿಜ್ಞಾನ ಬರಹಗಾರರಿಂದ, ಸಂಪಾದಕರಿಂದ, ಸಂವಹನಕಾರರಿಂದ ಶಿಬಿರಾರ್ಥಿಗಳಿಗೆ ವಿಜ್ಞಾನ ಬರವಣಿಗೆ ಕುರಿತು ವಿವಿಧ ಕೌಶಲ್ಯಗಳು, ಆಕರಗಳು, ಶಬ್ಧ ಬಳಕೆ, ಅನುವಾದ, ವಿಜ್ಞಾನ ಪತ್ರಿಕೋದ್ಯಮ- ಸಂವಹನ ವಿಧಾನಗಳು ಮುಂತಾದ ಕ್ಷೇತ್ರಗಳಲ್ಲಿ ತರಬೇತಿ ನೀಡಲಾಗುವುದು.
  ಶಿಬಿರಾರ್ಥಿಗಳಾಗಿ ಭಾಗವಹಿಸಲಿಚ್ಛಿಸುವರು ವಿಜ್ಞಾನ ಸಂವಹನದಲ್ಲಿ ವಿಶೇಷ ಆಸಕ್ತಿ ಹೊಂದಿರಬೇಕು. ಶಿಬಿರದಲ್ಲಿ ಭಾಗವಹಿಸುವ ಅರ್ಹ ಅಭ್ಯರ್ಥಿಗಳನ್ನು ಸಮಿತಿ ಆಯ್ಕೆ ಮಾಡಲಿದೆ.
   ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ಊಟ, ವಾಸ್ತವ್ಯದ ವ್ಯವಸ್ಥೆ ಮಾಡಲಾಗುವುದು. ಅಲ್ಲದೆ ಎರಡನೇ ದರ್ಜೆ ರೈಲು ಅಥವಾ ಸಾಮಾನ್ಯ ಬಸ್ಸಿನ ಪ್ರಯಾಣ ಭತ್ಯೆ ನೀಡಲಾಗುವುದು. ಆಸಕ್ತರು, ತಮ್ಮ ಕೈ ಬರಹದ ಅರ್ಜಿಯಲ್ಲಿ ಅಗತ್ಯ ವಿವರಗಳನ್ನು ನಮೂದಿಸಿ, ಮಾರ್ಚ್ 25ರೊಳಗಾಗಿ ಗೌರವ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಭವನ, 21ನೇ ಮುಖ್ಯರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು-70 ಈ ವಿಳಾಸಕ್ಕೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗಾಗಿ ಪ್ರೊ.ಎಸ್.ವಿ. ಸಂಕನೂರ, ಮೊ.9448301983ನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕಾರ್ಯದರ್ಶಿ ಡಾ. ವಸುಂಧರಾ ಭೂಪತಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.