ವಿವಿಧ ಧಾರ್ಮಿಕ ಕಾರ್ಯಕ್ರಮ
ಶಿವಮೊಗ್ಗ: ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘ ಮಹಾಶಿವರಾತ್ರಿ ಪ್ರಯುಕ್ತ ಮಾರ್ಚ್ 10ರಂದು ಸಂಜೆ 4.30ರಿಂದ 7.30ರವರೆಗೆ ಗಾಂಧಿ ಬಜಾರ್‌ನಲ್ಲಿರುವ ಬಸವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಏರ್ಪಡಿಸಿದ್ದು, ಮಾರ್ಚ್ 11ರಂದು ಬೆಳಗ್ಗೆ 5.30ರಿಂದ 7.30ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಸಂಘದ ಗೌ. ಕಾರ್ಯದರ್ಶಿ ಎಸ್.ಪಿ. ದಿನೇಶ್ ತಿಳಿಸಿದ್ದಾರೆ.
ಆಧಾರ್ ಕಾರ್ಡ್ ನೋಂದಣಿ
ಶಿವಮೊಗ್ಗ: ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘ ಮಾರ್ಚ್ 8ರಿಂದ ಚೌಕಿ ಮಠದ ವೀರಭದ್ರಸ್ವಾಮಿ ದೇವಸ್ಥಾನದ ಆವರಣದಲ್ಲಿ ಆಧಾರ್ ಕಾರ್ಡ್ ನೋಂದಣಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಆದ್ದರಿಂದ ಸಮಾಜದ ಬಾಂಧವರು ಗುರುತಿನ ಚೀಟಿಯನ್ನು ತರುವಂತೆ ಸಂಘದ ಗೌ. ಕಾರ್ಯದರ್ಶಿ ಎಸ್.ಪಿ. ದಿನೇಶ್ ತಿಳಿಸಿದ್ದಾರೆ.
ಕುಂಭಾಭಿಷೇಕ
ಶಿವಮೊಗ್ಗ: ಮಹಾಶಿವರಾತ್ರಿ ಪ್ರಯುಕ್ತ ಸಾಗರ ತಾಲೂಕಿನ ಬಾಳೇಗುಂಡಿಯ ಶನೈಶ್ಚರ ಸ್ವಾಮಿ ದೇವಾಲಯದಲ್ಲಿ ಮಾರ್ಚ್ 10ರಂದು ಬೆಳಗ್ಗೆ 6.30ಕ್ಕೆ ಕಲಾಭಿವೃದ್ಧಿ ಹೋಮ, ಕುಂಭಾಭಿಷೇಕ ಏರ್ಪಡಿಸಲಾಗಿದೆ. ಭಾನುವಾರ ರಾತ್ರಿ ಜಾಗರಣೆ ಹಾಗೂ ಹೊರಬೈಲಿನ ಮಾಸ್ತರ್ ಭೈರೇಶ ಮತ್ತು ಸಂಗಡಿಗರಿಂದ ಶನೈಶ್ವರ ಕಥಾಮಾಲಿಕೆ ಇರುತ್ತದೆ ಎಂದು ದೇವಸ್ಥಾನದ ಅರ್ಚಕ ಮಂಡಳಿ ತಿಳಿಸಿದೆ.
ಅಭಿಷೇಕ
ಶಿವಮೊಗ್ಗ: ಕೋಟೆ ರಸ್ತೆಯ ಶನೈಶ್ಚರ ಸೇವಾ ಸಮಿತಿ ಮಾರ್ಚ್ 11 ರಂದು ಸನ್ನಿಧಿಯಲ್ಲಿ ಬೆಳಿಗ್ಗೆ 6.30ರಿಂದ 7.30ರವರೆಗೆ ಪಂಚಾಮೃತ ಅಭಿಷೇಕ ಏರ್ಪಡಿಸಿದೆ. ಬೆಳಗ್ಗೆ 9.30ರಿಂದ 11.30ರವರೆಗೆ ನವಗ್ರಹ ಪೂರ್ವಕ ಶನಿಶಾಂತಿ ಹೋಮ ಹಮ್ಮಿಕೊಳ್ಳಲಾಗಿದೆ ಎಂದು ಅರ್ಚಕ ವೃಂದ ತಿಳಿಸಿದೆ.
ಕಣ್ಣಿನ ತಪಾಸಣೆ
ಶಿವಮೊಗ್ಗ: ವಾಸನ್ ಕಣ್ಣಿನ ಆಸ್ಪತ್ರೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಾರ್ಚ್ 8ರಿಂದ 31ರವರಗೆ ಎಲ್ಲಾ ಮಹಿಳೆಯರಿಗೆ ಉಚಿತ ಕಣ್ಣಿನ ತಪಾಸಣೆ ಶಿಬಿರ ಹಮ್ಮಿಕೊಂಡಿದೆ. ಆದ್ದರಿಂದ ನಗರದ ಮಹಿಳೆಯರು ಇದರ ಪ್ರಯೋಜನ ಪಡೆದುಕೊಳ್ಳಬೇಕಾಗಿ ಆಸ್ಪತ್ರೆಯ ಮುಖ್ಯಸ್ಥರು ತಿಳಿಸಿದ್ದಾರೆ. ವಿವರಗಳಿಗಾಗಿ- 08182-398900.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

