ಅನಂತ ಹೆಗಡೆ ಆಶೀಸರ ಪ್ರವಾಸ
ಶಿವಮೊಗ್ಗ: ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಮಾ.14ರಂದು ಬೆ.5.30ಕ್ಕೆ ಶಿವಮೊಗ್ಗಕ್ಕೆ ಆಗಮಿಸುವರು. ಬೆ.8.30ಕ್ಕೆ ಶಿವಮೊಗ್ಗದ ಉಪಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಸಮಾಲೋಚನೆ ಸಭೆ ನಡೆಸುವರು. ಬೆ.10.30ಕ್ಕೆ ಡಿಸಿ ಕಚೇರಿಯಲ್ಲಿ ಡಿಸಿಯೊಂದಿಗೆ ಚರ್ಚೆ. ಮಧ್ಯಾಹ್ನ 1ಗಂಟೆಗೆ ಸಾಗರದಲ್ಲಿ ಹಲಸು ಅಭಿಯಾನ ಕಾರ್ಯಾಗಾರದ ತಯಾರಿ ಸಭೆಯಲ್ಲಿ ಭಾಗವಹಿಸುವರು. ಅಂದು ಸಂಜೆ ಅವರು ಸಾಗರದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ನಾಳೆ ಇಂದಿನ ರಾಜಕೀಯ ಸ್ಥಿತಿ ಸಂವಾದ
ಸಾಗರ: ಇಲ್ಲಿನ ಶ್ರೀ ರಾಮಕೃಷ್ಣ ಹೆಗಡೆ ರಾಷ್ಟ್ರೀಯ ಚಿಂತನಾ ವೇದಿಕೆ ಮಾ. 14ರಂದು ಸಂಜೆ 5-30ಕ್ಕೆ ಪಟ್ಟಣದ ಶೃಂಗೇರಿ ಶಂಕರಮಠದಲ್ಲಿ ಇಂದಿನ ರಾಜಕೀಯ ಸ್ಥಿತಿಗತಿ ಕುರಿತು ಭಾಷಣ ಹಾಗೂ ಸಂವಾದ ಕಾರ್ಯಕ್ರಮ ಏರ್ಪಡಿಸಿದೆ.
ಕಾರ್ಯಕ್ರಮದಲ್ಲಿ ಕಿರುತೆರೆ ನಿರ್ದೇಶಕ ಟಿ.ಎನ್. ಸೀತಾರಾಂ ಪ್ರಧಾನ ಭಾಷಣ ಮಾಡಲಿದ್ದು, ರಂಗಕಮರ್ ಕೆ.ವಿ. ಅಕ್ಷರ ಪ್ರತಿಕ್ರಿಯೆ ನೀಡಲಿದ್ದಾರೆ. ಸಂವಾದದಲ್ಲಿ ಬೆಂಗಳೂರು ಹೈಕೋರ್ಟ್ ನ್ಯಾಯವಾದಿ ಎಸ್.ವಿ. ಪ್ರಕಾಶ್, ರಾಮಕೃಷ್ಣ ಹೆಗಡೆ ರಾಷ್ಟ್ರೀಯ ಚಿಂತನಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಕೆ.ಎಸ್. ಸತ್ಯನಾರಾಯಣ ಪಾಲ್ಗೊಳ್ಳುವರು.
ನಂತರ ನಾಗೇಂದ್ರ ಕುಮಟಾ ಮತ್ತು ಸಂಗಡಿಗರಿಂದ ಸುಗಮ ಸಂಗೀತ ಕಾರ್ಯಕ್ರಮ ಇರುತ್ತದೆ. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವೇದಿಕೆ ಸಂಚಾಲಕ ಅಶ್ವಿನಿಕುಮಾರ್ ಕೋರಿದ್ದಾರೆ.
ಸೇನಾಭರ್ತಿಗೆ ಅರ್ಜಿ ಆಹ್ವಾನ
ಶಿವಮೊಗ್ಗ: ಆರ್ಟಿಲರಿ ಸೆಂಟರ್ ನಾಸಿಕ್ ರೋಡ್ ಕ್ಯಾಂಪ್ನಲ್ಲಿ ಖಾಲಿ ಇರುವ ಸೈನಿಕ ಜನರಲ್ ಡ್ಯೂಟಿ ಮತ್ತು ಸೈನಿಕ ಟೆಕ್ನೀಷಿಯನ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಭರ್ತಿ ಮಾಡಲು ಏಪ್ರಿಲ್ 15ರಿಂದ 17ರವರೆಗೆ ನೇಮಕಾತಿ ರ್ಯಾಲಿ ನಡೆಯಲಿದೆ. ಈ ನೇಮಕಾತಿ ರ್ಯಾಲಿಯಲ್ಲಿ ಯುದ್ಧ ಸಂತ್ರಸ್ಥರ ಮಕ್ಕಳು, ಸೇವೆಯಲ್ಲಿರುವ ಸೈನಿಕರ ಮಕ್ಕಳು, ಮಾಜಿ ಸೈನಿಕರ ಮಕ್ಕಳು ಹಾಗೂ ಸೇವೆಯಲ್ಲಿರುವ ಸೈನಿಕರ ಸ್ವಂತ ಸಹೋದರರು ಪಾಲ್ಗೊಳ್ಳಬಹುದಾಗಿದೆ. ಜನರಲ್ ಡ್ಯೂಟಿ ಹುದ್ದೆಗೆ ಮೆಟ್ರಿಕ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಕ್ರೀಡಾ ಅಭ್ಯರ್ಥಿಗಳು ಮತ್ತು ಸೈನಿಕ ಟೆಕ್ನೀಷಿಯನ್ ಹುದ್ದೆಗೆ ಪಿಯುಸಿ ಅಥವಾ ಇಂಟರ್ ಮಿಡಿಯಟ್ ತೇರ್ಗಡೆಯಾಗಿದ್ದು, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಇಂಗ್ಲಿಷ್ ವಿಷಯದಲ್ಲಿ ವಿದ್ಯಾಬ್ಯಾಸ ಮಾಡಿದವರಾಗಿರಬೇಕು.
ನೇಮಕಾತಿಯಲ್ಲಿ ಭಾಗವಹಿಸಲಿಚ್ಚಿಸುವವರು ದೂ-08182 220925ನ್ನು ಸಂಪರ್ಕಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಅಂಗವಿಕಲ ಕ್ರೀಡಾಕೂಟಕ್ಕೆ 40 ಕ್ರೀಡಾಳುಗಳ ಆಯ್ಕೆ
ಶಿವಮೊಗ್ಗ: 14ರಿಂದ 16ರವರೆಗೆ ಬಳ್ಳಾರಿ ಜಿಲ್ಲೆ ತೋರಣಗಲ್ನ ಜಿಂದಾಲ್ ಆದರ್ಶ ವಿದ್ಯಾಲಯದ ಆವರಣದಲ್ಲಿ ನಡೆಯಲಿರುವ ಸ್ಪೆಷಲ್ ಒಲಂಪಿಕ್ಸ್ನ ರಾಜ್ಯ ಮಟ್ಟದ ಕ್ರೀಡಾ ಕೂಟಕ್ಕೆ ಜಿಲ್ಲೆಯ 40 ವಿಕಲಚೇತನ ಮಕ್ಕಳು ಆಯ್ಕೆಯಾಗಿದ್ದಾರೆ ಎಂದು ಸ್ಪೆಷಲ್ ಒಲಂಪಿಕ್ನ ಜಿಲ್ಲಾ ಸಂಯೋಜಕ ಪ್ರದೀಪ ಕುಮಾರ್ ಎಲ್.ಎಸ್. ತಿಳಿಸಿದ್ದಾರೆ.
ಇತ್ತೀಚೆಗೆ ಜಿಲ್ಲಾ ಮಟ್ಟದಲ್ಲಿ ನಡೆದ ಸ್ಪೆಷಲ್ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಒಟ್ಟು 270 ಅಂಗವಿಕಲ ಮಕ್ಕಳಲ್ಲಿ ಅರ್ಹರಾದ 40ಮಕ್ಕಳನ್ನು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಗಿದೆ ಎಂದವರು ತಿಳಿಸಿದ್ದಾರೆ.
17ರಂದು ಸಶಸ್ತ್ರ ಸೇನೆ ಮಾಜಿ ಸೈನಿಕರ ಸಭೆ
ಶಿವಮೊಗ್ಗ: ಇಸಿಎಚ್ಎಸ್ ಪಾಲಿಕ್ಲಿನಿಕ್ ಶಿವಮೊಗ್ಗ ಘಟಕ ಹಾಗೂ ಮಲೆನಾಡು ಮಾಜಿ ಸೈನಿಕರ ಸಂಘದ ಆಶ್ರಯದಲ್ಲಿ 17ರಂದು ಬೆಳಿಗ್ಗೆ 10.30ಕ್ಕೆ ಶಿವಮೊಗ್ಗದ ಇಸಿಎಚ್ಎಸ್ ಪಾಲಿಕ್ಲಿನಿಕ್ ಆವರಣದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ ಮಾಜಿ ಸೈನಿಕರ ಸಭೆಯನ್ನು ಆಯೋಜಿಸಲಾಗಿದೆ.
ಈ ಸಭೆಯಲ್ಲಿ ಪಾಲಿಕ್ಲಿನಿಕ್ನ ನಿಯಮಾವಳಿಗಳ ಬಗ್ಗೆ ಅರಿವು, ವೈದ್ಯಕೀಯ ಸೌಲಭ್ಯಗಳು ಹಾಗೂ ಮಾಜಿ ಸೈನಿಕರ ವೈದ್ಯಕೀಯ ಸವಲತ್ತುಗಳಲ್ಲಿನ ಕುಂದುಕೊರತೆಗಳ ಬಗ್ಗೆ ಚರ್ಚಿಸಲಾಗುವುದು. ಮಾಜಿ ಸೈನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿ ನಿವೃತ್ತ ಕರ್ನಲ್ ಕೆ.ಎ. ರಾಮಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗಾಗಿ ದೂ-08182 220794.
ಕನ್ನಡ ಭಾಷಾ ಪರೀಕ್ಷೆಗಳ ಫಲಿತಾಂಶ ಪ್ರಕಟ
ಶಿವಮೊಗ್ಗ: ಕನ್ನಡ ಸಾಹಿತ್ಯ ಪರಿಷತ್ತು 2012-13ನೇ ಸಾಲಿನಲ್ಲಿ ನಡೆಸಿದ ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳ ಫಲಿತಾಂಶವನ್ನು ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಪರಿಷತ್ತಿನ ಪ್ರಕಟಣಾ ಫಲಕದಲ್ಲೂ ಪ್ರಕಟಿಸಲಾಗಿದೆ. ಪರೀಕ್ಷಾರ್ಥಿಗಳು ಫಲಿತಾಂಶವನ್ನು ಅಂತರ್ಜಾಲತಾಣಣ ಢಿಢಿಢಿ.್ಞಛಡಛಠಛ.್ಝಟಿ ನಲ್ಲಿ ವೀಕ್ಷಿಸಬಹುದಾಗಿದೆ.
ಅಂಕಪಟ್ಟಿ ಹಾಗೂ ಪ್ರಮಾಣಪತ್ರಗಳನ್ನು ಶೀಘ್ರದಲ್ಲಿಯೇ ಎಲ್ಲಾ ಪರೀಕ್ಷಾರ್ಥಿಗಳಿಗೆ ಕಳುಹಿಸಿಕೊಡಲಾಗುವುದು. ಮರುಎಣಿಕೆಗೆ ಅಂಕಪಟ್ಟಿಗಳು ತಲುಪಿದ ಒಂದು ತಿಂಗಳೊಳಗಾಗಿ ಅರ್ಜಿ ಸಲ್ಲಿಸಬೇಕು. ವಿವರಗಳಿಗಾಗಿ ಕಸಾಪ ಗೌರವ ಕಾರ್ಯದರ್ಶಿಯವರನ್ನು ಸಂಪರ್ಕಿಸಬಹುದು. ದೂ-080 26623584ನ್ನು ಸಂಪರ್ಕಿಸಬಹುದಾಗಿದೆ.
14ರಂದು ವಿದ್ಯುತ್ ವ್ಯತ್ಯಯ
ಭದ್ರಾವತಿ: ಸೀಗೆಬಾಗಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವಿರುವ ಪ್ರಯುಕ್ತ ಮಾ.14ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಭದ್ರಾಕಾಲೋನಿ, ವೀರಾಪುರ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ತಾಲೂಕು ಕಚೇರಿ, ಸಿದ್ದಾರೂಢನಗರ, ಗೌಡ್ರಳ್ಳಿ, ಬಾಬಳ್ಳಿ ಮೊದಲಾದ ಸ್ಥಳಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂನ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ್ನಗರ ಉಪವಿಭಾಗ) ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಕ್ರೀಡಾಂಗಣ ಉದ್ಘಾಟನೆ
ಶಿವಮೊಗ್ಗ: ಪ್ರೇರಣಾ ಎಜುಕೇಷನ್ ಅಂಡ್ ಸೋಷಿಯಲ್ ಟ್ರಸ್ಟ್, ಪಿಇಎಸ್ ಇನ್ಸ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ಮ್ಯಾನೇಜ್ಮೆಂಟ್ ಆಶ್ರಯದಲ್ಲಿ ಮಾರ್ಚ್ 15ರಂದು ಮಧ್ಯಾಹ್ನ 3.30ಕ್ಕೆ ಸಂಸ್ಥೆಯ ಆವರಣದಲ್ಲಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಕ್ರಿಕೆಟ್ ಕ್ರೀಡಾಂಗಣ ಉದ್ಘಾಟನಾ ಸಮಾರಂಭ ಏರ್ಪಡಿಸಿದೆ. ಕರ್ನಾಟಕ ಕ್ರಿಕೆಟ್ ಅಕಾಡೆಮಿ ನಿರ್ದೇಶಕ ಸಯ್ಯದ್ ಎಂ.ಎಚ್. ಕಿರ್ಮಾನಿ, ಕೆಎಸ್ಸಿಎನ ಮ್ಯಾನೇಜಿಂಗ್ ಕಮಿಟಿ ಸದಸ್ಯ ಆರ್. ವಿಜಯ ಭಾರದ್ವಾಜ್ ಪಾಲ್ಗೊಳ್ಳುವರು. ಅಧ್ಯಕ್ಷತೆಯನ್ನು ಸಂಸದ ಬಿ.ವೈ. ರಾಘವೇಂದ್ರ ವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಾಂಶುಪಾಲ ಡಾ. ಸುರೇಶ್ ಚಂದ್ರ ಮೋಹನ್ ತಿಳಿಸಿದ್ದಾರೆ.
ನಾಳೆ ವಿಚಾರ ಸಂಕಿರಣ
ಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಕಲಾ ಇಂಟರ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ ಹಾಗೂ ಜಿಲ್ಲಾ ನಿವೃತ್ತ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ಮಾರ್ಚ್ 14ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ನಿವೃತ್ತ ನೌಕರರ ಸಂಘದ ಸಭಾಂಗಣದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ-2006ರ ಕುರಿತು ವಿಚಾರ ಸಂಕಿರಣ, ಸಾಕ್ಷ್ಯಚಿತ್ರ ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ಜಿಪಂ ಸಿಇಒ ಸಸಿಕಾಂತ್ ಸೆಂಥಿಲ್ ಉದ್ಘಾಟಿಸುವರು. ಜಿಲ್ಲಾ ಎಪಿಡಮೋಲಾಜಿಸ್ಟ್ ಡಾ. ರುದ್ರೇಶ್ ಮತ್ತು ಆಹಾರ ಸುರಕ್ಷಿತಾಧಿಕಾರಿ ಸೋಮೇಶ್ ಓಲೇಕಾರ್ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಲಿರುವರು.
16ರಂದು ತಲೆನೋವು ತಪಾಸಣೆ ಶಿಬಿರ
ಶಿವಮೊಗ್ಗ: ಗಾಂಧಿ ನಗರದ ಗುರು ಕಣ್ಣಿನ ಆಸ್ಪತ್ರೆ ಆವರಣದಲ್ಲಿ ಮಾರ್ಚ್ 16 ರಂದು ಬೆಳಿಗ್ಗೆ 8 ಗಂಟೆಯಿಂದ ಉಚಿತ ತಲೆನೋವು ತಪಾಸಣೆ ಮತ್ತು ಸಲಹಾ ಶಿಬಿರ ಏರ್ಪಡಿಸಲಾಗಿದೆ. ಆಸಕ್ತರು ಒಂದು ದಿನ ಮೊದಲೇ ತಮ್ಮ ಹೆಸರು ನೋಂದಾಯಿಸಿಕೊಂಡು ಟೋಕನ್ ಪಡೆಯಬೇಕು ಎಂದು ಆಸ್ಪತ್ರೆ ವೈದ್ಯ ಡಾ. ಎಚ್.ವಿ. ಗಿರಿಸ್ವಾಮಿ ತಿಳಿಸಿದ್ದಾರೆ. ವಿವರಗಳಿಗಾಗಿ- 08182-270647.
ವಿಶೇಷ ಪೂಜೆ, ಪ್ರವಚನ
ಶಿವಮೊಗ್ಗ: ಕಲ್ಲಂಗಂಗೂರಿನಲ್ಲಿರುವ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಭಗವಾನ್ ಶ್ರೀ ರಾಮಕೃಷ್ಣರ 178ನೇ ಜಯಂತಿ ಪ್ರಯುಕ್ತ ಮಾರ್ಚ್ 13ರಂದು ವಿಶೇಷ ಪೂಜೆ, ಪ್ರವಚನಗಳನ್ನು ಏರ್ಪಡಿಸಲಾಗಿದೆ. ಬೆಳಿಗ್ಗೆ 8ರಿಂದ 9ರವರೆಗೆ ವಿಶೇಷ ಪೂಜೆ, 9.30ಕ್ಕೆ ವಿಷ್ಣು ಸಹಸ್ರನಾಮ ಪಾರಾಯಣ, 10ಕ್ಕೆ ಹೋಮ, 11ಕ್ಕೆ ಭಜನೆ, 11.45ಕ್ಕೆ ಪ್ರವಚನ, 12.15ಕ್ಕೆ ಭಗವನ್ನಾಮ ಸಂಕೀರ್ತನೆ, ಮಧ್ಯಾಹ್ನ 1ಕ್ಕೆ ಮಹಾಮಂಗಳರಾತಿ ಏರ್ಪಡಿಸಲಾಗಿದೆ ಎಂದು ಸ್ವಾಮಿ ವಿನಯಾನಂದ ಸರಸ್ವತಿ ತಿಳಿಸಿದ್ದಾರೆ. ವಿವರಗಳಿಗಾಗಿ- 028182-293213.
ಕೃಷಿ ಕಾರ್ಮಿಕರ ಸಮಾವೇಶ
ಶಿವಮೊಗ್ಗ: ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಮಾರ್ಚ್ 18ರಂದು ನವದೆಹಲಿಯ ಜಂತರ್ ಮಂತರ್ನಲ್ಲಿ ಬೃಹತ್ ಮಟ್ಟದ ರಾಷ್ಟ್ರೀಯ ರೈತರ ಮತ್ತು ಕೃಷಿ ಕಾರ್ಮಿಕರ ಸಮಾವೇಶ ಹಮ್ಮಿಕೊಂಡಿದೆ. ನರ್ಮದಾ ಬಚಾವೋ ಅಂದೋಲನ, ಭಾರತೀಯ ಕಿಸಾನ್ ಯೂನಿಯನ್ ಸೇರಿದಂತೆ ದೇಶದ ವಿವಿಧ ರೈತ ಸಂಘಟನೆಗಳೊಂದಿಗೆ ಸಮಾವೇಶ ಆಯೋಜಿಸಲಾಗಿದೆ. ಇದೇ ವೇಳೆ ಕೇಂದ್ರ ಸರ್ಕಾರಕ್ಕೆ ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಲಾಗುವುದು. ಆದ್ದರಿಂದ ರಾಜ್ಯದ ರೈತರು ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಯಶವಂತರಾವ್ ಘೋರ್ಪಡೆ ತಿಳಿಸಿದ್ದಾರೆ.
ಉತ್ತಮ ಫಲಿತಾಂಶ
ಶಿವಮೊಗ್ಗ: ಕರ್ನಾಟಕ ಪರೀಕ್ಷಾ ಮಂಡಳಿ ಡಿಸೆಂಬರ್ನಲ್ಲಿ ನಡೆಸಿದ ಕನ್ನಡ, ಇಂಗ್ಲಿಷ್ ಹಾಗೂ ಷಾಟ್ಹ್ಯಾಂಡ್ ಪರೀಕ್ಷೆಯಲ್ಲಿ ನಗರದ ಕಾವೇರಿ ವಾಣಿಜ್ಯ ಶಾಲೆಗೆ ಉತ್ತಮ ಫಲಿತಾಂಶ ಬಂದಿದೆ. ಶಾಲೆಯ 21 ವಿದ್ಯಾರ್ಥಿಗಳು ಪ್ರಥಮ, 16 ವಿದ್ಯಾರ್ಥಿಗಳು ದ್ವಿತೀಯ ಹಾಗೂ 16 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತೀರ್ಣರಾಗಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲ ಟಿ.ಎಸ್. ಭಾಸ್ಕರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

