ಶಿವಮೊಗ್ಗ

ಜಿಲ್ಲಾ, ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನ

Published On :

ಕನ್ನಡ ಪ್ರಭ ವಾರ್ತೆ, ಶಿವಮೊಗ್ಗ, ಮಾ.12
ಜಿಲ್ಲಾ ಮಟ್ಟದ 8ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವುದು ಮತ್ತು ಎಲ್ಲಾ ತಾಲೂಕುಗಳು ತಾಲೂಕು ಸಾಹಿತ್ಯ ಸಮ್ಮೇಳನ ಸಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಕಸಾಪ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆ ತೀರ್ಮಾನಿಸಿದೆ. ಜಿಲ್ಲಾ ಸಮ್ಮೇಳನವನ್ನು ಎರಡು ದಿನ ನಡೆಸುವ ಬಗ್ಗೆ ತೀರ್ಮಾನಿಸಲಾಯಿತು.
ಸಮ್ಮೇಳನದ ಅಂಗವಾಗಿ ಜಿಲ್ಲೆಯಾದ್ಯಂತ ಸುಮಾರು ಐದು ಸಾವಿರ ಪ್ರತಿನಿಧಿಗಳನ್ನು ನೋಂದಾಯಿಸುವ ತೀರ್ಮಾನ ಕೈಗೊಳ್ಳಲಾಯಿತು. ಸಮ್ಮೇಳನ ಸ್ಥಳ ನಿಗಧಿ ಮಾಡುವ ಜವಾಬ್ದಾರಿಯನ್ನು ಜಿಲ್ಲಾ ಅಧ್ಯಕ್ಷರಿಗೆ ಬಿಡಲಾಯಿತು. ಸಮ್ಮೇಳನ ಏಪ್ರಿಲ್ 27 ಮತ್ತು 28ರಂದು ಶನಿವಾರ ಮತ್ತು  ಭಾನುವಾರ ನಡೆಸಲು ತೀರ್ಮಾನಿಸಲಾಗಿದೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಿ. ಮಂಜುನಾಥ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
ಕಾರ್ಯಕ್ರಮದ ಮಾಹಿತಿ: ತಾಲೂಕು ಸಮಿತಿಗಳು ತಕ್ಷಣ ಕಾರ್ಯಕಾರಿ ಸಮಿತಿ ಸಭೆ ಕರೆದು ಸಮ್ಮೇಳನದ ಸಿದ್ಧತೆ, ದತ್ತಿನಿಧಿ ಕಾರ್ಯಕ್ರಮದ ಮಾಹಿತಿ ಪಡೆಯಲಾಯಿತು. ದತ್ತಿನಿಧಿ ಕಾರ್ಯಕ್ರಮ ಮಾಡದ ತಾಲೂಕುಗಳ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಯಿತು. ದತ್ತಿದಾನಿಗಳ ಆಶಯದಂತೆ ಕಾರ್ಯಕ್ರಮ ರೂಪಿಸಬೇಕು. ಪರಿಷತ್ತಿನ ಚಟುವಟಿಕೆಗಳಿಗೆ ದತ್ತಿಗಳು ಪ್ರೇರಣೆಯಾಗಿದ್ದವು. ಅವು ನಮ್ಮ ಕ್ರಿಯಾಶೀಲತೆಯನ್ನು ಹೆಚ್ಚಿಸುವ ಕಾರ್ಯ ಮಾಡಿವೆ. ಯಾವತ್ತು ಅವುಗಳನ್ನ ನಿರ್ಲಕ್ಷ್ಯ ಮಾಡದೇ ಸಹಕರಿಸಿ ಎಂದು ಜಿಲ್ಲಾ ಅಧ್ಯಕ್ಷ ಡಿ. ಮಂಜುನಾಥ ಹೇಳಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರ ತೀರ್ಥಹಳ್ಳಿ ಮತ್ತು ಸೊರಬ ತಾಲೂಕುಗಳಿಗೆ ಕಟ್ಟಡಗಳ ನಿರ್ಮಾಣಕ್ಕೆ ನೆರವು ನೀಡಿದೆ. ಕಟ್ಟಡಗಳ ಕಾಮಗಾರಿ ತಕ್ಷಣದಿಂದ ಆರಂಭಿಸಲು ಕಾರ್ಯಕಾರಿ ಸಮಿತಿಯಲ್ಲಿ ಭಾಗವಹಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎನ್. ಹರಿಕುಮಾರ್ ಸಲಹೆ ನೀಡಿದರು. ಸಂಬಂಧಿಸಿದ ತಾಲೂಕು ಅಧ್ಯಕ್ಷರು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.