ಶಿವಮೊಗ್ಗ

15ಕ್ಕೆ ಉದ್ಘಾಟನೆ

Published On :

ಶಿವಮೊಗ್ಗ: ರಾಜೇಂದ್ರ ನಗರದ 100 ಅಡಿ ರಸ್ತೆಯಲ್ಲಿರುವ ಸಹ್ಯಾದ್ರಿ ಪ್ರೌಢಶಾಲೆಯಲ್ಲಿ ಮಾ.15ರಂದು ಕಡಿದಾಳ್ ರಾಮಪ್ಪಗೌಡ ಸಭಾಂಗಣದ ಉದ್ಘಾಟನೆ ಹಾಗೂ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಅಂದು  ಮಧ್ಯಾಹ್ನ ಶಾಲಾ ಆವರಣದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀನಿಧಿ ಎಜುಕೇಷನ್  ಸೊಸೈಟಿ ನಿರ್ದೇಶಕ ಕೃಷ್ಣಪ್ಪ ವಹಿಸಲಿದ್ದು, ಜಿಲ್ಲಾ ತರಬೇತಿ ಸಂಸ್ಥೆ ಪ್ರಾಚಾರ್ಯರಾದ  ಎಂ.ಎಲ್. ವೈಶಾಲಿ ಸಭಾಂಗಣ ಉದ್ಘಾಟಿಸಿದರು ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.
ಕಾನೂನು ಅರಿವು
ಶಿವಮೊಗ್ಗ: ಕಾನೂನು ಮಾಪನ ಶಾಸ್ತ್ರ ಇಲಾಖೆಯು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಆಶ್ರಯದಲ್ಲಿ  ಲೀಗಲ್ ಮೆಟ್ರಾಲಜಿ ಕಾನೂನು ಅರಿವು ಕಾರ್ಯಕ್ರಮವನ್ನು ಮಾ.14ರಂದು ಸಂಜೆ 4 ಗಂಟೆಗೆ ಹಮ್ಮಿಕೊಂಡಿದೆ. ಸಂಘದ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕಾನೂನು ಮಾಪನ ಶಾಸ್ತ್ರ ಸಹಾಯಕ ನಿಯಂತ್ರಕ ಹಿಪ್ಪರಗಿ, ಅಧಿಕಾರಿಗಳಾದ ಧನಲಕ್ಷ್ಮಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸುವರು ಎಂದು ರುದ್ರೇಶ್ ತಿಳಿಸಿದ್ದಾರೆ.
ಚೆಸ್ ತರಬೇತಿ
ಶಿವಮೊಗ್ಗ: ನಗರದ ನಳಂದ ಚೆಸ್ ಅಕಾಡೆಮಿಯು ಏ.1ರಿಂದ 9ರವರೆಗೆ ಪ್ರಾಥಮಿಕ ಹಂತದ ಚೆಸ್ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದೆ. ಆರಂಭಿಕ ನಡೆಗಳಿಂದ ಒಂದು ಪಂದ್ಯಾವಳಿಯಲ್ಲಿ ಭಾಗವಹಿಸುವಷ್ಟರ ಮಟ್ಟಿಗೆ ಶಿಬಿರದಲ್ಲಿ ತರಬೇತಿ ನೀಡಲಾಗುತ್ತದೆ. ಏಪ್ರಿಲ್ 12ರಿಂದ 21ರವರೆಗೆ ಉನ್ನತ ಹಂತದ ಚೆಸ್ ತರಬೇತಿ ನೀಡಲಾಗುತ್ತದೆ ಎಂದು ಸಂಸ್ಥೆ ಕಾರ್ಯದರ್ಶಿ ಶ್ರೀಕೃಷ್ಣ ಉಡುಪ ತಿಳಿಸಿದ್ದಾರೆ. ಸಂಪರ್ಕ ಸಂಖ್ಯೆ- 9844420889.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.