ಹೈನುಗಾರಿಕೆಯಿಂದ ಆದಾಯ ಹೆಚ್ಚಳ
ಕಪ್ರ ವಾರ್ತೆ, ಶಿವಮೊಗ್ಗ, ಮಾ.14
ಬೆಳೆಗಳ ಜೊತೆಗೆ ಕೃಷಿ ಅವಲಂಬಿತ ಉದ್ಯಮಗಳಾದ ಹೈನುಗಾರಿಕೆ, ಕೋಳಿ ಸಾಕಾಣಿಕೆ, ರೇಷ್ಮೆ ಹುಳು ಸಾಕಾಣಿಕೆ, ಮೀನುಗಾರಿಕೆ, ಹಂದಿ ಸಾಕಾಣಿಕೆ, ಜೇನು ಸಾಕಣೆ, ಆಹಾರ ಮೌಲ್ಯವರ್ಧನೆ ಮುಂತಾದವುಗಳನ್ನು ಅನುಸರಿಸುವುದರಿಂದ ನಿರಂತರ ಸುಸ್ಥಿರ ಆದಾಯ ಬರುವಂತೆ ಮಾಡಿಕೊಳ್ಳಬಹುದೆಂದು ಕೃಷಿ ಮಹಾವಿದ್ಯಾಲಯದ ಡೀನ್ ಎಂ.ಎಸ್. ಗಣೇಶ್ ಬಾಬು ತಿಳಿಸಿದರು.
ಅವರು ನವಿಲೆ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಮಗ್ರ ಕೃಷಿ ಪದ್ಧತಿ ಯೋಜನೆಯಡಿ ಗುರುವಾರ ಆರಂಭವಾದ ಗ್ರಾಮೀಣ ಯುವಕ ಮತ್ತು ಯುವತಿಯರಿಗೆ ದೂರಶಿಕ್ಷಣ ಸಂಪರ್ಕ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು.
ಜನಸಂಖ್ಯೆ ಹೆಚ್ಚಳದಿಂದ ಮನೆಗಳನ್ನು ಕಟ್ಟುವುದು, ಕೈಗಾರಿಕೆಗಳನ್ನು ಸ್ಥಾಪಿಸುವುದು ಮತ್ತು ರಸ್ತೆಗಳನ್ನು ಅಗಲ ಮಾಡುತ್ತಿರುವುದರಿಂದ ದಿನೇ ದಿನೇ ಸಾಗುವಳಿ ಮಾಡುತ್ತಿರುವ ಭೂಮಿಯ ಲಭ್ಯತೆಯು ಕಡಿಮೆಯಾಗುತ್ತಿದೆ. ಇದರೊಟ್ಟಿಗೆ ಅನಿಶ್ಚಿತ ಮಳೆ, ಹವಾಮಾನ ವೈಪರೀತ್ಯಗಳಿಂದ ಉತ್ಪಾದನೆ ಸುಸ್ಥಿರತೆಯನ್ನು ಕಳೆದುಕೊಳ್ಳುತ್ತಿದ್ದು, ರೈತರಿಗೆ ಬರೀ ಬೆಳೆಗಳಿಂದ ಬರುತ್ತಿರುವ ಆದಾಯ ಸಾಕಾಗುತ್ತಿಲ್ಲ. ಲಭ್ಯವಿರುವ ಸಂಪನ್ಮೂಲಗಳನ್ನು ಸಮರ್ಥ ರೀತಿಯಲ್ಲಿ ಬಳಸಿಕೊಂಡು ಕೃಷಿ ಆದಾಯವನ್ನು ಹೆಚ್ಚಿಸಿಕೊಳ್ಳಬೇಕಾಗಿದೆ ಎಂದರು. ಕೃಷಿ ವಿಸ್ತರಣಾ ವಿಭಾಗ ಮತ್ತು ಮುಖ್ಯಸ್ಥ ಡಾ. ಬಿ.ಕೆ. ನಾರಾಯಣ ಸ್ವಾಮಿ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ವಿಘ್ನೇಶ್ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

