ಶಿವಮೊಗ್ಗ

ಆಧಾರ್ ತ್ವರಿತ ವಿತರಣೆಗೆ ಮನವಿ

Published On :

ಸಾಗರ: ಆಧಾರ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಗುರುವಾರ ಕಾಂಗ್ರೆಸ್ ವತಿಯಿಂದ ಉಪವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲಾಯಿತು.
ಕೇಂದ್ರ ಸರ್ಕಾರ ಪ್ರತಿ ನಾಗರಿಕನಿಗೂ ವಿಶಿಷ್ಟ ಗುರುತಿನ ಸಂಖ್ಯೆ ಪತ್ರ ನೀಡಲು ಆಧಾರ್ ಯೋಜನೆ ಜಾರಿಗೆ ತಂದಿದೆ. ರಾಜ್ಯ ಸರ್ಕಾರಗಳ ಮೂಲಕ ಅನುಷ್ಠಾನಗೊಳ್ಳಬೇಕಾದ ಈ ಯೋಜನೆ ಬಗ್ಗೆ ರಾಜ್ಯ ಸರ್ಕಾರಕ್ಕೆ ಆಸಕ್ತಿ ಇಲ್ಲವಾಗಿದೆ. ರಾಜ್ಯಾದ್ಯಂತ ಆಧಾರ್ ವಿತರಣೆಗೆ ಶಾಖೆಗಳನ್ನು ತೆರೆದು ನಾಗರಿಕರಿಂದ ಅಗತ್ಯ ದಾಖಲೆ ಮತ್ತು ಬಯೋವುಟ್ರಿಕ್ ಮಾಹಿತಿಗಳನ್ನು ಸಂಗ್ರಹಿಸಿ, ಗುರುತಿನ ಪತ್ರ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಹಕ್ರೆ ಆರೋಪಿಸಿದರು.
ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವವಿಲ್ಲದ ರಾಜ್ಯ ಸರ್ಕಾರಕ್ಕೆ ಇಂತಹ ಮಹತ್ವದ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿಯೂ ನಿರ್ಲಕ್ಷ್ಯ ವಹಿಸುತ್ತಿದೆ. ಅಧಿಕಾರ ಪೂರ್ಣಗೊಳಿಸಬೇಕು ಎನ್ನುವ ಲೆಕ್ಕಾಚಾರದಲ್ಲಿ ಜನರ ಹಿತವನ್ನು ಮರೆತಿರುವ ಸರ್ಕಾರ ತಕ್ಷಣ ಆಧಾರ್ ಕಾರ್ಡ್ ವಿತರಿಸಲು ಹೆಚ್ಚಿನ ಕೌಂಟರ್ ತೆರೆದು ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಎಚ್ಚರಿಕೆ: ನಗರಸಭೆ ಸದಸ್ಯ ತೀ.ನ. ಶ್ರೀನಿವಾಸ್, ಜನರ ಮನವಿಯ ಮೇರೆಗೆ ಉಪವಿಭಾಗಾಧಿಕಾರಿಗಳು ಫೆ.7ರಂದು ಜಿಲ್ಲಾಧಿಕಾರಿಗಳಿಗೆ ತಾಲೂಕಿನಾದ್ಯಂತ 30 ಆಧಾರ್ ನೋಂದಣಿ ಸಂಖ್ಯೆ ನೀಡುವ ಕೌಂಟರ್ ತೆರೆಯುವಂತೆ ಪತ್ರ ಬರೆದಿದ್ದಾರೆ. ಆದರೆ ಜಿಲ್ಲಾಧಿಕಾರಿಗಳು ಇದರ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ತಕ್ಷಣ ಸಾಗರ ನಗರ ಸೇರಿದಂತೆ, ಜೋಗ್ ಕಾರ್ಗಲ್ ಹಾಗೂ ಪ್ರತಿ ಗ್ರಾಮಪಂಚಾಯ್ತಿಗೆ ಒಂದರಂತೆ ಆಧಾರ್ ಕಾರ್ಡ್ ನೀಡುವ ಕೌಂಟರ್ ತೆರೆಯಬೇಕು. ಇಲ್ಲವಾದರೆ ಪಕ್ಷದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪಕ್ಷದ ಪ್ರಮುಖರಾದ ಕೆ. ಹೊಳಿಯಪ್ಪ, ಮಕ್ಬುಲ್ ಅಹಮದ್, ಐ.ಎನ್. ಸುರೇಶಬಾಬು, ರಮೇಶ್ ಗಾಳಿಪುರ, ಡಿ. ದಿನೇಶ್, ಮಹಾಬಲೇಶ್ವರ ಕುಗ್ವೆ, ಪ್ರಕಾಶ ಲ್ಯಾವಿಗೆರೆ, ಶ್ವೇತಾ ಕಾಗೋಡು, ಲಲಿತಮ್ಮ, ನಂದಾ ಗೊಜನೂರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.