ಆಹಾರದ ಸುರಕ್ಷತೆ ಕಾಪಾಡುವಲ್ಲಿ ವ್ಯಾಪಾರಸ್ಥರು ವಿಫಲ
ಶಿವಮೊಗ್ಗ: ವ್ಯಾಪಾರಸ್ಥರು ಉತ್ತಮ ಗುಣಮಟ್ಟದ ಆಹಾರದ ಸುರಕ್ಷತೆ ಕಾಪಾಡುವಲ್ಲಿ ವಿಫಲವಾಗಿದ್ದಾರೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸಸಿಕಾಂತ್ ಸೆಂಥಿಲ್ ಅಭಿಪ್ರಾಯಪಟ್ಟರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಅಂಕಿತಾಧಿಕಾರಿಗಳು ಶ್ರೀಕಲಾ ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜೀಸ್ ಗುರುವಾರ ನಿವೃತ್ತ ನೌಕರರ ಸಂಘದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ 2006ರ ವಿಚಾರ ಸಂಕಿರಣ ಮತ್ತು ಸಾಕ್ಷ್ಯ ಚಿತ್ರ ಪ್ರದರ್ಶನದಲ್ಲಿ ಅವರು ಮಾತನಾಡಿದರು.
ಪ್ರಯೋಜನವಾಗಿಲ್ಲ: ವ್ಯಾಪಾರಸ್ಥರಿಗೆ ಹಾಗೂ ಗ್ರಾಹಕರಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಅರಿವು ಮೂಡಿಸುವುದು ಅಗತ್ಯವಿದೆ. ಅಲ್ಲದೇ, ಜಾಹಿರಾತುಗಳ ಮೂಲಕ ಕಡಿಮೆ ಬೆಲೆಗೆ ಕಳಪೆ ಗುಣಮಟ್ಟದ ಆಹಾರ ಸಾಮಾಗ್ರಿಗಳು ಮಾರಾಟವಾಗುತ್ತಿದ್ದು, ಈ ಬ್ಗಗೆ ಸರ್ಕಾರ ಕಠಿಣ ಕಾನೂನುಗಳನ್ನು ಜಾರಿಗೊಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಅಂಕಿತಾಧಿಕಾರಿ ಡಾ. ರಘುನಂದನ್, ಜಯದೇವಯ್ಯ, ನಟರಾಜು, ಗೋಪಾಲ ಕೃಷ್ಣ, ರಮೇಶಪ್ಪ, ಶಂಕರನಾರಾಯಣಹೊಳ್ಳ, ಕೆ. ಕೃಷ್ಣಪ್ಪ, ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

