ಶಿವಮೊಗ್ಗ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

Published On :

ಕನ್ನಡಪ್ರಭ ವಾರ್ತೆ, ಸೊರಬ, ಮಾ.15
ಗ್ರಾಪಂ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಶುಕ್ರವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದಾರೆ.
ಮುಷ್ಕರದ ನೇತೃತ್ವ ವಹಿಸಿದ್ದ ಗೌರವಾಧ್ಯಕ್ಷೆ ಶೇಖರಮ್ಮ ಮಾತನಾಡಿ, ಸಿಬ್ಬಂದಿಗೆ ಜನಶ್ರೀ ವಿಮಾ ಯೋಜನೆ ಜಾರಿ, ಭವಿಷ್ಯ ನಿಧಿ ಯೋಜನೆ, ಸೇವಾ ಪುಸ್ತಕ ನಿರ್ವಹಣೆ, ಕನಿಷ್ಠ ವೇತನದೊಂದಿಗೆ ತುಟ್ಟಿ ಭತ್ಯೆ ವೇತನ ಪಾವತಿಸಲು ಪ್ರತ್ಯೇಕ ಬ್ಯಾಂಕ್ ಖಾತೆ ತೆರೆದು ಅನುದಾನ ಜಮಾ ಮಾಡುವುದು, ಮುಂತಾದವುಗಳ ಬಗ್ಗೆ ಸರ್ಕಾರ ಹಲವು ಬಾರಿ ಸುತ್ತೋಲೆ ಹೊರಡಿಸಿದ್ದರೂ ತಾಪಂ, ಜಿಪಂ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ತೋರಿದ್ದರಿಂದಾಗಿ ನೌಕರರು ಸರ್ಕಾರಿ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲು ಅನಿರ್ಧಿಷ್ಠ ಕಾಲಾವಧಿ ಮುಷ್ಕರ ಅನಿವಾರ್ಯವಾಗಿದೆ ಎಂದರು.
ಸಂಘದ ಅಧ್ಯಕ್ಷ ಸುಬ್ರಾಯಶೆಟ್ಟಿ ಇತ್ತೀಚೆಗೆ ವೃಂದ ಹಾಗೂ ನೇಮಕಾತಿ ನಿಯಮಕ್ಕೆ ತಿದ್ದುಪಡಿ ಮಾಡಲು 3 ಇಲಾಖೆಗಳ ಪ್ರತಿನಿಧಿಗಳು ಸಭೆ ಸೇರಿ ಪರೀಕ್ಷೆ ಹಾಗೂ ಇತರೆ ನಿಬಂದನೆಗಳನ್ನು ಕೈ ಬಿಟ್ಟಿರುವುದು ಸರಿಯಾದ ಕ್ರಮ. ಆದರೆ ಇಲ್ಲಿ ಎಸ್‌ಎಸ್‌ಎಲ್ಸಿಯಲ್ಲಿ ಪಡೆದ ಅಂಕಿಗಳ ಆಧಾರದ ಮೇಲೆ 10 ವರ್ಷಗಳ ಸೇವೆ ಮುಗಿಸಿರುವ ನೌಕರರನ್ನು ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ.
ಇದರಿಂದಾಗಿ ಎಸ್‌ಎಸ್‌ಎಲ್ಸಿಯಲ್ಲಿ ಕಡಿಮೆ ಅಂಕಗಳಿಸಿದ ನೌಕರರಿಗೆ ಸೇವಾ ಹಿರಿತನವಿದ್ದರೂ ನೇಮಕಾತಿ ಆಗದೆ ಇರುವಂತಹ ಸಂದರ್ಭ ಬರಬಹುದು, ಹಾಗಾಗಿ ಹಿಂದಿನ ಪದ್ಧತಿಯಂತೆಯೇ ನೇಮಕಾತಿ ಮುಂದುವರೆಯಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಉಪಾಧ್ಯಕ್ಷ ಶಿವಶಂಕರಪ್ಪ, ಪ್ರಧಾನ ಕಾರ್ಯದರ್ಶಿ ಮಂಚಪ್ಪ ಇಲ್ಲಿನ ತಾಪಂ ಕಚೇರಿ ಎದುರು ನಡೆಸುತ್ತಿರುವ ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.