ಮತದಾರರ ಪಟ್ಟಿ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ
ಶಿವಮೊಗ್ಗ: ಕಳೆದ ನಗರಸಭಾ ಚುನಾವಣೆಯಲ್ಲಿ ನಗರದ ಕೆಲ ವಾರ್ಡ್ಗಳಲ್ಲಿ ಮತದಾರ ಹೆಸರನ್ನು ಕೈಬಿಡಲಾಗಿದ್ದು, ಕೂಡಲೇ ಇದನ್ನು ಸರಿಪಡಿಸುವಂತೆ ಆಗ್ರಹಿಸಿ ಶಿವಮೊಗ್ಗ ಮತದಾರರ ವೇದಿಕೆ ಹಾಗೂ ಮಹಿಳಾ ಸಂಘಟನೆಗಳ ಒಕ್ಕೂಟದ ಸದಸ್ಯರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದರು ಪ್ರತಿಭಟನೆ ನಡೆಸಿದರು.
ನಗರಸಭೆ ಚುನಾವಣೆ ಸಂದರ್ಭದಲ್ಲಿ ವಿವಿಧ ವಾರ್ಡ್ಗಳ ಮತದಾರರ ಪಟ್ಟಿಯಲ್ಲಿ ಸಾಕಷ್ಟು ಗೊಂದಲ, ಲೋಪದೋಷ ಕಂಡುಬಂದಿದ್ದು, ಸಾವಿರಾರು ಮತದಾರ ಹೆಸರನ್ನು ಕೈಬಿಡಲಾಗಿದೆ. ನೂರಾರು ಮತದಾರರನ್ನು ಅಕ್ಕಪಕ್ಕದ ವಾರ್ಡ್ಗಳಿಗೆ ವರ್ಗಾಯಿಸಲಾಗಿದೆ. ಇದರಿಂದ ಮತದಾರರು ಗೊಂದಲಕ್ಕಿಡಾಗಿ ಈ ಬಾರಿ ಮತ ಚಾಲಾಯಿಸಿಲ್ಲ ಎಂದು ಪ್ರತಿಭಟನಾಕಾರು ಆರೋಪಿಸಿದರು.
ಮತದಾರರ ಪಟ್ಟಿಯಲ್ಲಿ ಹೆಸರು ನಾಪತ್ತೆಯಾಗಿರುವುದರ ಬಗ್ಗೆ ಮತದಾರರಿಗೆ ಯಾವುದೇ ಮಾಹಿತಿ ನೀಡಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ಬದ್ದವಾಗಿ ನೀಡಲಾಗಿರುವ ಮತದಾನದ ಹಕ್ಕಿನಿಂದ ವಂಚಿತರನ್ನಾಗಿ ಮಾಡಲಾಗಿದೆ. ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿ, ಎಪಿಕ್ ಕಾರ್ಡ್ ಪಡೆದವರ ಹೆಸರು ಚುನಾವಣಾ ಮತದಾರರ ಪಟ್ಟಿಯಲ್ಲಿ ಇಲ್ಲವಾಗಿದೆ ಎಂದು ವೇದಿಕೆ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಕೆಲ ವಾರ್ಡ್ಗಳಲ್ಲಿ ಮತದಾರರ ಪಟ್ಟಿಯಲ್ಲಿರುವ ಮತದಾರರ ಹೆಸರು ತಪ್ಪಿನಿಂದ ಕೂಡಿದ್ದು, ಬೇರೆಯವರ ಭಾವಚಿತ್ರ ಹಾಕಿ ಗೊಂದಲ ಸೃಷ್ಟಿಸಲಾಗಿದೆ. ಆದ್ದರಿಂದ ಕೂಡಲೇ ಮತದಾರರ ಪಟ್ಟಿಯಲ್ಲಿ ಡಿಲೀಟ್ ಮಾಡಲಾಗಿರುವ ಮತದಾರರನ್ನು ಪುನರ್ ಸೇರ್ಪಡೆ ಮಾಡಬೇಕು, ಅಕ್ಕಪಕ್ಕದ ವಾರ್ಡ್ಗಳಿಗೆ ಸೇರಿಸಲಾಗಿರುವ ಮತದಾರರ ಹೆಸರನ್ನು ಈ ಹಿಂದಿನಂತೆ ಆಯಾ ವಾರ್ಡ್ಗಳಿಗೆ ಸೇರಿಸಬೇಕು, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಭಾವಚಿತ್ರ ತೆಗೆಯುವಿಕೆ, ಹೆಸರು-ವಿಳಾಸ ಬದಲಾವಣೆ ಕಾರ್ಯವನ್ನು ಸರಳೀಕರಣ ಮಾಡಬೇಕು ಎಂದು ಪ್ರತಿಭಟನಾಕಾರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ತೇಜಸ್ವಿನಿ, ಮಂಜುಶ್ರೀ, ಪೃಥ್ವಿ, ಸಿಂಧುಶ್ರೀ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

