ಖಾಸಗಿ ಬಸ್ ನಿಲ್ದಾಣಕ್ಕೆ ಕಾಂಗ್ರೆಸ್ ಬದ್ಧ
ಕ.ಪ್ರ, ವಾತೆ, ಸಾಗರ, ಮಾ.17
ಸರ್ಕಾರಿ ಬಸ್ ನಿಲ್ದಾಣದ ಪಕ್ಕದಲ್ಲಿಯೇ ಖಾಸಗಿ ಬಸ್ ನಿಲ್ದಾಣ ನಿರ್ಮಿಸಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ನಗರಸಭೆಗೆ ಆಯ್ಕೆಯಾಗಿರುವ ಕಾಂಗ್ರೆಸ್ ಪಕ್ಷದ ನೂತನ ಸದಸ್ಯರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸದಸ್ಯರುಗಳು, ಹಿಂದೆ ಆಡಳಿತದಲ್ಲಿದ್ದವರು ಜನರ ತೀವ್ರ ವಿರೋಧವಿದ್ದರೂ ಬೇರೆ ಕಡೆ ಖಾಸಗಿ ಬಸ್ ನಿಲ್ದಾಣ ನಿರ್ಮಿಸಲು ಮುಂದಾಗಿದ್ದರು. ಆದರೆ, ಕಾಂಗ್ರೆಸ್ ಪಕ್ಷ ಎಲ್ಲ ಅನುಕೂಲಗಳಿರುವ ಸರ್ಕಾರಿ ಬಸ್ ನಿಲ್ದಾಣದ ಪಕ್ಕದ ಜಾಗದಲ್ಲಿಯೇ ಖಾಸಗಿ ಬಸ್ ನಿಲ್ದಾಣ ನಿರ್ಮಿಸಲು ಬದ್ಧವಾಗಿದ್ದು ಇದಕ್ಕಾಗಿ ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಪ್ರತಿ ಸದಸ್ಯರು ತಮ್ಮ ತಮ್ಮ ವಾರ್ಡಿನಲ್ಲಿರುವ ಸಮಸ್ಯೆ ಹಾಗೂ ಅದಕ್ಕೆ ಪರಿಹಾರದ ಕುರಿತು ಮಾತನಾಡಿ ತಮ್ಮ ಅವಧಿಯಲ್ಲಿ ಇಡೀ ನಗರದ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡುವುದಾಗಿ ಹೇಳಿದರು.
ತೀ.ನ. ಶ್ರೀನಿವಾಸ್ ತಮ್ಮ ವ್ಯಾಪ್ತಿಗೆ ಬರುವ ವಾರ್ಡ್ ಇಡೀ ಪಟ್ಟಣದ ಕೇಂದ್ರಬಿಂದುವಾಗಿದ್ದು ಇಲ್ಲಿ ಪ್ರಮುಖ ಸರ್ಕಾರಿ ಕಚೇರಿಗಳು, ಬಸ್ ನಿಲ್ದಾಣ, ಪೊಲೀಸ್ ಠಾಣೆ ಮುಂತಾದವುಗಳು ಬರಲಿದೆ ಎಂದು ಹೇಳಿದರು.10ನೇ ವಾರ್ಡಿನ ಐ.ಎನ್. ಸುರೇಶಬಾಬು ಮಾತನಾಡಿದರು. ನಗರ ಕಾಂಗ್ರೆಸ್ ಅಧ್ಯಕ್ಷ ಮಕ್ಬುಲ್ ಅಹಮದ್, ತಾಲೂಕು ಅಧ್ಯಕ್ಷ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

