ಕಾರು ಚಕ್ರ ಸಿಡಿದು ಅಪಘಾತ: ಚಾಲಕ ಸಾವು
ಕ.ಭ. ವಾರ್ತೆ, ಸಾಗರ, ಮಾ.17
ಪಟ್ಟಣಕ್ಕೆ ಸಮೀಪದ ಇಕ್ಕೇರಿಯ ಅಘೋರೇಶ್ವರ ವೃತ್ತದ ಬಳಿ ಕಾರ್ನ ಹಿಂದಿನ ಚಕ್ರ ಸಿಡಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿ ಓರ್ವ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ತುಮಕೂರಿನ ಸಿರಾಗೇಟ್ನ 9 ಮಂದಿ ಸಿಗಂದೂರಿಗೆ ಹೋಗಿ ಹಿಂತಿರುಗುತ್ತಿದ್ದಾಗ ಅಘೋರೇಶ್ವರ ವೃತ್ತದ ಬಳಿ ವಾಹನದ ಹಿಂದಿನ ಚಕ್ರ ಸಿಡಿದಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ವಾಹನ ಪಲ್ಟಿಯಾಗಿದೆ. ಘಟನೆಯಲ್ಲಿ ವಾಹನ ಚಾಲಕ ಮುರಳಿಧರ (25) ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ.
ಉಳಿದವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ಐವರು ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.
ಚಕ್ರ ಸಿಡಿತದಿಂದ ಪಲ್ಟಿ ಹೊಡೆದ ಸ್ಕಾರ್ಪಿಯೋ ವಾಹನ ರಸ್ತೆ ಬದಿಯಲ್ಲಿ ನಿಂತಿದ್ದ ಮಹೇಶ ಎಂಬುವವರಿಗೆ ಡಿಕ್ಕಿ ಹೊಡೆದಿದ್ದು, ಅವರಿಗೂ ಸಣ್ಣಪುಟ್ಟ ಗಾಯವಾಗಿದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

