ಶಿವಮೊಗ್ಗ

ಬತ್ತದ ಬಣವೆಗೆ ಬೆಂಕಿ: ರು. 25,000 ನಷ್ಟ

Published On :

ಜೋಗ್‌ಫಾಲ್ಸ್: ಇಲ್ಲಿಗೆ ಸಮೀಪದ ಹಿರೇಮನೆಯ ಜ್ಯೋತಿಷಿ ಅನಂತ್ ಎಂಬುವವರ ಮನೆಯ ಬತ್ತದ ಬಣವೆಗೆ ಶುಕ್ರವಾರ ರಾತ್ರಿ ಆಕಸ್ಮಿಕ ಬೆಂಕಿ ತಗುಲಿದ್ದು, ಸುಮಾರು ರು. 25,000 ಮೌಲ್ಯದ ಬತ್ತದ ಬೆಳೆ ನಷ್ಟವಾಗಿರಬಹುದೆಂದು ಅಂದಾಜಿಸಲಾಗಿದೆ.
 ರಾತ್ರಿ ಸುಮಾರು 10 ರ ಸಮಯದಲ್ಲಿ ಏಕಾಏಕಿ ಬೆಂಕಿ ಹತ್ತಿ ಉರಿಯುತ್ತಿರುವುದನ್ನು ಕಂಡ ಮನೆಯವರು ಸಮೀಪದಲ್ಲಿ ಇದ್ದ ನೀರು ಎರಚಿ ಬೆಂಕಿ ಇತರೆಡೆಗೆ ವ್ಯಾಪಿಸುವುದನ್ನು ತಪ್ಪಿಸಿ ನಂತರ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದರು. ನಂತರ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಳಗಿನ ಜಾವದ 4 ಗಂಟೆಯವರೆಗೆ ಪ್ರಯತ್ನಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಸ್ಥಳಕ್ಕೆ ತಾಳಗುಪ್ಪ ಉಪ ತಹಸೀಲ್ದಾರ್ ಚಂದ್ರಶೇಖರ್ ಭೇಟಿ ನೀಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.