ಶಿವಮೊಗ್ಗ

'ಈಶ್ವರಪ್ಪ ಮುಖ ನೋಡಿದರೆ ಮತ ಹಾಕುವುದಿಲ್ಲ'

Published On :

ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಮುಖ ನೋಡಿದರೆ ಯಾರು ಮತ ಹಾಕುವುದಿಲ್ಲ. ಚುನಾವಣೆಯಲ್ಲಿ ಇವರ ಮುಖ ಮುಂದಿಟ್ಟುಕೊಂಡು ಮತಯಾಚನೆ ಮಾಡಿದರೆ ಠೇವಣಿ ಕಳೆದುಕೊಳ್ಳುವುದು ನಿಶ್ಚಿತ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಲೇವಡಿ ಮಾಡಿದ್ದಾರೆ.
ಈ ಭಯದಿಂದಲೇ ತಾವು ಬಿಜೆಪಿ ತೊರೆಯುತ್ತಿದ್ದು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಆ ಪಕ್ಷದಿಂದ ಸ್ಪರ್ಧಿಸುತ್ತಿಲ್ಲ ಎಂದು ಹೇಳಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿ, ಕೆ.ಎಸ್. ಈಶ್ವರಪ್ಪ ಮುಖ ಶಿವಮೊಗ್ಗಕ್ಕೆ ಮಾತ್ರ ಸೂಕ್ತವಾಗಿದೆ. ಜಿಲ್ಲೆ  ಹಾಗೂ ಇತರೆಡೆ ಇವರ ಮುಖ ಇಟ್ಟುಕೊಂಡು ಚುನಾವಣೆ ಎದುರಿಸಿದರೆ ಸೋಲುವುದು ನಿಶ್ಚಿತ. ಕಳೆದ  ಹಲವು ವಿಧಾನಸಭೆ ಉಪ ಚುನಾವಣೆ ಹಾಗೂ ಇತ್ತೀಚೆಗೆ ಮುಕ್ತಾಯವಾದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇದು ಸಾಬೀತಾಗಿದೆ ಎಂದು ಕಟುಕಿದರು.  
ಮಜಾ ಉಡಾಯಿಸಲಿ: ಈ ಆತಂಕದಿಂದಲೇ ತಾವು ಬಿಜೆಪಿ ಪಕ್ಷ ತೊರೆಯುತ್ತಿದ್ದೇನೆ. ಬಿಜೆಪಿ ಪಕ್ಷದ ಬಿ.ಫಾರಂನ್ನು ಬೇಕಾದವರಿಗೆ ಅವರು ನೀಡಿಕೊಳ್ಳಲಿ. ಮಜಾ ಉಡಾಯಿಸಲಿ ಎಂದು ಈಶ್ವರಪ್ಪನ್ನು ಜರಿದರು.  
ಕೆ.ಎಸ್. ಈಶ್ವರಪ್ಪ ಅವರ ನೇತೃತ್ವದಲ್ಲಿಯೇ ಚುನಾವಣೆ ಎದುರಿಸಿದರೆ ಬಿಜೆಪಿ ಅಧಿಕಾರಕ್ಕೆ ಬುರುವುದು ನಿಶ್ಚಿತ. ಅವರು ಕೂಡ ಮುಖ್ಯಮಂತ್ರಿಯಾಗುವುದು ಖಚಿತ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಲೇವಡಿ ಮಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದಿಂದ ತಾವು ಸ್ಪರ್ಧಿಸುವುದು ನಿಶ್ಚಿತ. ಯಾವ ಪಕ್ಷದಿಂದ ಕಣಕ್ಕಿಳಿಯಬೇಕು ಎಂಬುವುದನ್ನು ಇಷ್ಟರಲ್ಲಿಯೇ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.