ಅಜ್ಞಾನ ಹೆಚ್ಚಾಗಿ ಸಮಾಜ ಅಧೋಗತಿಗೆ
ಶಿಕಾರಿಪುರ: ಮೂಢನಂಬಿಕೆ, ಕಂದಾಚಾರ, ಅಜ್ಞಾನ ದಿನನಿತ್ಯ ಹೆಚ್ಚಾಗಿ ಸಮಾಜ ಅಧೋಗತಿಗೆ ಸಾಗುತ್ತಿದೆ. ಈ ದಿಸೆಯಲ್ಲಿ ಸೂಕ್ತ ಮಾಹಿತಿ ಮೂಲಕ ಸಾರ್ವಜನಿಕರಲ್ಲಿನ ತಪ್ಪು ಅಭಿಪ್ರಾಯ ಹೋಗಲಾಡಿಸಲು 24ರಂದು ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹುಲಿಕಲ್ ನಟರಾಜ್ ಅವರಿಂದ ಪವಾಡ ರಹಸ್ಯ ಬಯಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಇಲ್ಲಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸ್ನೇಹಕ್ಕ ತಿಳಿಸಿದರು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕಪಟತನದ ಪವಾಡದ ಮೂಲ ಬಯಲುಗೊಳಿಸಿ ಜನಸಾಮಾನ್ಯರನ್ನು ಎಚ್ಚರಿಸಲು ಬ್ರಹ್ಮಕುಮಾರಿ ವಿ.ವಿಯಿಂದ ಸೌರಭ ಸಾಂಸ್ಕೃತಿಕ ವೇದಿಕೆ, ಲಯನ್ಸ್ ಕ್ಲಬ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಶರಣ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

